ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿಗೆ ಬಹಿರಂಗ ವಿಚಾರಣೆ
ಉಡುಪಿ, ಜ.7: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಕೆ. ಜಯಪ್ರಕಾಶ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಆಯೋಗವು ವಿವಿಧ ಜಾತಿ/ಜನಾಂಗಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಸೇರಿಸಲು, ಪ್ರವರ್ಗ ಬದಲಾವಣೆಗೆ, ಪರ್ಯಾಯ ಪದ ಸೇರ್ಪಡೆಗೆ ಮತ್ತು ಕಾಗುಣಿತ ದೋಷ ತಿದ್ದುಪಡಿ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ, ಆಯೋಗದಲ್ಲಿ ಸ್ವೀಕೃತಗೊಂಡಿರುವ ಮನವಿ ಗಳ ಬಹಿರಂಗ ವಿಚಾರಣೆಯನ್ನು ಜ.12ರ ಬೆಳಗ್ಗೆ 11 ಗಂಟೆಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸಲಿದೆ.
ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಸೇರಿಸಲು, ಪ್ರವರ್ಗ ಬದಲವಣೆಗೆ, ಪರ್ಯಾಯ ಪದ ಸೇರ್ಪಡೆಗೆ ಮತ್ತು ಕಾಗುಣಿತ ದೋಷ ತಿದ್ದು ಪಡಿ ಹಾಗೂ ಇತರೆ ವಿಷಯಕ್ಕೆ ಸಂಬಂಧಿಸಿದಂತೆ, ಹೊಸದಾಗಿ ಮನವಿ ಸಲ್ಲಿಸಲು ಇಚ್ಚಿಸುವ ಸಾರ್ವಜನಿಕರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಬಹುದಾಗಿದೆ. ಮನವಿಗಳನ್ನು ಬಹಿರಂಗ ವಿಚಾರಣೆ ಮುಗಿದ ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.





