Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡಿತರ ಚೀಟಿಗೆ ಇ-ಕೆವೈಸಿ ಅಪ್ಲೋಡ್ ಮಾಡಲು...

ಪಡಿತರ ಚೀಟಿಗೆ ಇ-ಕೆವೈಸಿ ಅಪ್ಲೋಡ್ ಮಾಡಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Jan 2021 8:00 PM IST
share

ಉಡುಪಿ, ಜ.7: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ನಿಯಮದಂತೆ ಆಹಾರಧಾನ್ಯ ಪಡೆಯುತ್ತಿರುವ (ಬಿಪಿಎಲ್, ಎಎವೈ ಮತ್ತು ಎಪಿಎಲ್) ಕಾರ್ಡುದಾರರು ಹೊಸದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡಿನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು ಅಪ್ಲೋಡ್ ಮಾಡುವ ಕಾರ್ಯ ವನ್ನು ಜ.1ರಿಂದ ಪ್ರಾರಂಭಿಸಲಾಗಿದೆ.

ತಂತ್ರಾಂಶದಲ್ಲಿ ಮಾಹಿತಿ ಅಪ್‌ಲೋಡ್ ಮಾಡುವಾಗ ಪಡಿತರ ಕಾರ್ಡಿನ ಕುಟುಂಬದ ಹಿರಿಯ ಮಹಿಳಾ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಬೇಕು ಮತ್ತು ಹೊಸ ಕುಟುಂಬದ ಮುಖ್ಯಸ್ಥ ರೊಂದಿಗೆ (ಹಿರಿಯ ಮಹಿಳಾ ಸದಸ್ಯ) ಇತರೆ ಸದಸ್ಯರ ಸಂಬಂಧದ ವಿವರಗಳನ್ನು ಹಾಗೂ ಪಡಿತರ ಚೀಟಿದಾರರ ಜಾತಿಯ ವಿವರವನ್ನು (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರೆ) ಜಾತಿ ಪ್ರಮಾಣ ಪತ್ರ ವಿವರಗಳನ್ನು ಸಹ ಅಪ್ಲೊೀಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಜಾತಿಯವರಾಗಿದ್ದಲ್ಲಿ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ನ್ಯಾಯಬೆಲೆ ಅಂಗಡಿಗೆ ಬರಬೇಕಾಗುವುದು. ನ್ಯಾಯಬೆಲೆ ಅಂಗಡಿ ಮಾಲಕರು ಜಾತಿ ಪ್ರಮಾಣ ಪತ್ರದ ಸಂಖ್ಯೆ ನಮೂದಿಸಿ ತಮ್ಮ ಲಾಗಿನ್‌ನಲ್ಲಿಯೇ ಪರಿಶೀ ಲಿಸಿ, ಇತರೆ ವಿವರ ದೊಂದಿಗೆ ತಂತ್ರಾಂಶದಲ್ಲಿ ಮಾಹಿತಿಯನ್ನು ನಮೂದಿಸುವರು. ಕಾರ್ಡುದಾರರು ಕಾರ್ಡಿನಲ್ಲಿ ಇರುವ ಎಲ್ಲಾ ಸದಸ್ಯ ರೊಂದಿಗೆ ತಮ್ಮ ವ್ಯಾಪ್ತಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಗೆ ತಪ್ಪದೇ ಕಡ್ಡಾಯವಾಗಿ ಹಾಜರಾಗಿ ತಮ್ಮ ಬಯೋ ದೃಢೀಕರಣ ಮೂಲಕ ಇ-ಕೆವೈಸಿ ಅಪ್‌ಡೇಟ್ ಮಾಡಬೇಕಾಗಿದೆ.

ವಯೋವೃದ್ಧರು, ಮರಣ, ಕುಷ್ಠರೋಗಿ, ಅಂಗವಿಕಲ(ಬೆರಳುಗಳಿಲ್ಲದ) ಎಂಡೋಸಲ್ಫಾನ್, ಕುಟುಂಬದೊಂದಿಗೆ ವಾಸವಿರದ ಸದಸ್ಯರ ಇ-ಕೆವೈಸಿ ಅಪ್‌ಡೇಟ್ ಮಾಡಲು ಸಾಧ್ಯವಾಗದಿದ್ದಲ್ಲಿ ಅಂತಹ ಸದಸ್ಯರಿಗೆ ಮಾತ್ರ ಇ-ಕೆವೈಸಿ ವಿನಾಯಿತಿಯನ್ನು ನ್ಯಾಯಬೆಲೆ ಅಂಗಡಿ ಮಟ್ಟ ದಲ್ಲಿಯೇ ನೀಡಬಹುದಾಗಿದೆ.

ಈಗಾಗಲೇ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಅಥವಾ ತಿದ್ದುಪಡಿ ಮೂಲಕ ಇ-ಕೆವೈಸಿ ಆಗಿರುವ ಪಡಿತರ ಚೀಟಿದಾರರು ಇ-ಕೆವೈಸಿ ಮಾಡುವ ಅಗತ್ಯವಿರುವುದಿಲ್ಲ. ಉಳಿದ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X