Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಪಂ ಮತ ಎಣಿಕೆ ಅವ್ಯವಸ್ಥ: ತಾಪಂ...

ಗ್ರಾಪಂ ಮತ ಎಣಿಕೆ ಅವ್ಯವಸ್ಥ: ತಾಪಂ ಸಭೆಯಲ್ಲಿ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ7 Jan 2021 10:13 PM IST
share

ಬಂಟ್ವಾಳ, ಜ.7: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಹಲವು ಅವ್ಯವಸ್ಥೆಗಳಿಗೆ ಕಾರಣವಾಗಿದ್ದರೆ ಇಡೀ ಪ್ರಕ್ರಿಯೆಯೇ ಗೊಂದಲಮಯವಾಗಿತ್ತು ಎಂದು ಗುರುವಾರ ನಡೆದ ಬಂಟ್ವಾಳ ತಾಲೂಕು ಪಂಚಾಯತ್ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ತಾಪಂ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಉಪಸ್ಥಿತಿ ಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಅಕ್ಷರ ದಾಸೋಹ ಸಿಬ್ಬಂದಿ ಯಾರಾದರೂ ಚುನಾವಣೆಗೆ ನಿಂತು ಗೆದ್ದಿದ್ದರೆ, ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವ ಕುರಿತು ಸರ್ಕಾರದ ಸುತ್ತೋಲೆ ಬಂದಿದೆ ಎಂದರು.

ಇದಕ್ಕೆ ಆಕ್ಷೇಪ ಸಲ್ಲಿಸಿದ ಜಿಲ್ಲಾ ಪಂಚಾಯ್ ಸದಸ್ಯ ಎಂ.ಎಸ್.ಮಹಮ್ಮದ್, ಅಕ್ಷರ ದಾಸೋಹ ಕೆಲಸ ಮಾಡುವುದು ಲಾಭದಾಯಕ ಹುದ್ದೆ ಅಲ್ಲ. ಚುನಾವಣೆಗೆ ನಿಲ್ಲುವ ವೇಳೆ ಇಂಥದ್ದೊಂದು ನಿಯಮವನ್ನು ತಿಳಿಸದೆ ಗೆದ್ದ ಮೇಲೆ ಈ ರೀತಿ ಮಾಡುವುದು ಸರಿಯಲ್ಲ ಎಂದರು ಸದಸ್ಯರಾದ ರಮೇಶ್ ಕುಡ್ಮೇರು, ಯಶವಂತ ಪೊಳಲಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ ಅವರೂ ದನಿಗೂಡಿಸಿದರು. 

ಇದೇ ವೇಳೆ ಚುನಾವಣಾ ಪ್ರಕ್ರಿಯೆಯೇ ಗೊಂದಲದ ಗೂಡಾಗಿರುವ ಕುರಿತು ಸದಸ್ಯರು ಪಕ್ಷಬೇಧ ಮರೆತು ದೂರಿದರು. ವಿಷಯ ಪ್ರಸ್ತಾಪಿಸಿದ ತಾಪಂ ಸದಸ್ಯ ಹೈದರ್ ಕೈರಂಗಳ, ಮತದಾನ ಪ್ರಕ್ರಿಯೆಯಿಂದ ಮತ ಎಣಿಕೆಯ ವಿಚಾರಗಳನ್ನು ಎಳೆಎಳೆಯಾಗಿ ವಿವರಿಸಿದರು. 

ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ಅಧಿಕಾರಿಗಳ ಬಳಿಯೂ ಸಮರ್ಪಕ ಮಾಹಿತಿ ಇರಲಿಲ್ಲ. ದಿನಕ್ಕೊಂದು ಸೂಚನೆಗಳನ್ನು ನೀಡುವ ಮೂಲಕ ಗೊಂದಲವನ್ನು ನಿರ್ಮಿಸಿದರು. ಮುಂದಿನ ಚುನಾವಣೆ ವೇಳೆ ಇದು ಪುನಾವರ್ತನೆ ಆಗದಿರಲಿ ಎಂದರು. 

ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ, ಮತ ಎಣಿಕೆಯ ಸಂದರ್ಭ ಪ್ರತಿಯೊಂದು ಪಂಚಾಯಿತಿ ಬೂತ್ ಗಳನ್ನು ಸರಿಯಾಗಿ ಗುರುತುಪಡಿಸಿ ವೇಗದ ಎಣಿಕೆಗೆ ವ್ಯವಸ್ಥೆಯನ್ನು ಕಲ್ಪಿಸಬಹುದಿತ್ತು ಎಂದರು.

ಬಂಟ್ವಾಳ ತಾಲೂಕಿನಲ್ಲಿ 30 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಪ್ರಕರಣಗಳ ಸಂಖ್ಯೆ ಜಾಸ್ತಿ ಆಗಿದೆ. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ವೈದ್ಯಾಧಿಕಾರಿ ಹೇಳಿದರು. 

ಬಂಟ್ವಾಳ ತಾಲೂಕಿನಲ್ಲಿ ಹಕ್ಕಿಜ್ವರ ಬಾರದಂತೆ ಪ್ರತಿಬಂಧಕಗಳನ್ನು ಮಾಡಲಾಗಿದ್ದು, ಕೇರಳದಿಂದ ಕೋಳಿ ಸಾಗಾಟ ವಾಹನಗಳು ಬರುವಾಗ ತಪಾಸಣೆ ಮಾಡಲಾಗುತ್ತಿದೆ ಎಂದು ಬಂಟ್ವಾಳ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ ಡಾ. ಅವಿನಾಶ್ ಭಟ್ ತಿಳಿಸಿದರು. 

ಸಜಿಪಮುನ್ನೂರು ಗ್ರಾಮದ ಕಾಮಗಾರಿಯೊಂದು ವಿದ್ಯುತ್ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಬಾಕಿ ಉಳಿದ ವಿಚಾರದ ಕುರಿತು ಸದಸ್ಯ ಸಂಜೀವ ಪೂಜಾರಿ ಪ್ರಸ್ತಾಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X