ದ.ಕ. ಜಿಲ್ಲೆ : 37 ಮಂದಿಗೆ ಕೊರೋನ ಸೋಂಕು
ಮಂಗಳೂರು, ಜ.7: ದ.ಕ. ಜಿಲ್ಲೆಯಲ್ಲಿ ಹೊಸದಾಗಿ 37 ಮಂದಿಗೆ ಸೋಂಕು ತಗುಲಿದ್ದು, ಗುರುವಾರ ಏಳು ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,117 ಮಂದಿ ಸೋಂಕಿತರ ಪೈಕಿ 31,960 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 732 ಮಂದಿ ಮೃತಪಟ್ಟಿದ್ದು, 395 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 21,096 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 22,39,804 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story