Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ...

ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ: ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ತರಾಟೆ

ವಾರ್ತಾಭಾರತಿವಾರ್ತಾಭಾರತಿ7 Jan 2021 10:51 PM IST
share
ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ: ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ತರಾಟೆ

ತುಮಕೂರು, ಜ.7: ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ. ಕೆಲಸ ಮಾಡದೆ ಹೆಂಡತಿಯ ಸೀರೆ ತೆಗೆದುಕೊಳ್ಳೋಕೆ ಹೋಗಿದ್ಯಾ. ಮೊದಲು ಇವನನ್ನು ಕೆಲಸದಿಂದ ವಜಾ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಗುಬ್ಬಿ ಎಇಇ ಅವರನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2020-21ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶಿತರಾದ ಸಚಿವರು, ಕೆಲಸ ಮಾಡದೆ ಅಧಿಕಾರಿಗಳು ಜಿಲ್ಲೆಯನ್ನೆ ಸಾಯಿಸುತ್ತಿದ್ದಾರೆ. ಕೊರೋನ, ನೀತಿ ಸಂಹಿತೆ ಹೆಸರಲ್ಲಿ ಜಡಗಟ್ಟಿದ್ದಾರೆ. ಸಭೆ ನಡೆಯುವುದಿಲ್ಲ ಎಂಬ ಉದಾಸೀನತೆ ತಾಳಿರುವ ಅಧಿಕಾರಿಗಳು ಜಿಲ್ಲೆಯಲ್ಲಿ ಒಂದೇ ಒಂದು ಕಾಮಗಾರಿ ಸಮರ್ಪಕವಾಗಿ ಮಾಡಿಲ್ಲ. ಜಿಲ್ಲೆಗೆ ಹಿಡಿದಿರುವ ಗ್ರಹಣ ಯಾವಾಗ ಮುಗಿಯುತ್ತದೆ. ನೀವು ಯಾವಾಗ ಕೆಲಸ ಖಾಲಿ ಮಾಡುತ್ತೀರಾ ಎಂದು ತುಮಕೂರು ವಿಭಾಗದ ಎಇಇ ಹರೀಶ್ ಬಾಬು ವಿರುದ್ಧ ಹರಿಹಾಯ್ದ ಸಚಿವರು, ಕೆಲಸ ಮಾಡದಿದ್ದರೆ ಪರ್ಮನೆಂಟ್ ರಜೆ ಕೊಡಿಸುತ್ತೇನೆ ಎಂದು ಎಚ್ಚರಿಕೆ ಕೊಟ್ಟರು.

ಜಿಲ್ಲೆಯ ಪಿಆರ್‍ಐಡಿ ವಿಭಾಗದ ಅಧಿಕಾರಿಗಳು ಕೆಲಸ ಮಾಡುವ ಮನೋಭಾವವನ್ನೇ ಮರೆತಿದ್ದಾರೆ. ಯಾರು ಕೆಲಸ ಮಾಡುವುದಿಲ್ಲವೋ ಅಂತಹ ಅಧಿಕಾರಿಗಳ ಸಂಬಳ ನಿಲ್ಲಿಸಿ, ನಾನು ಹೇಳೋವರೆಗೂ ಸಂಬಳ ಕೊಡಬೇಡಿ. ಯಾರಿಗೂ ಇಡೀ ಜೀವಮಾನ ಪ್ರಮೋಷನ್ ಸಿಗದಂತೆ ಮಾಡಿ ಎಂದು ಸಿಇಒ ಶುಭಕಲ್ಯಾಣ್ ಅವರಿಗೆ ಸೂಚಿಸಿದರು. 

ತುಮಕೂರು ವಿಭಾಗದ ಪಿಆರ್‍ಇಡಿಯ ಎಇಇ ಹರೀಶ್ ಬಾಬು ಅವರಿಗೆ ತರಾಟೆ ತೆಗೆದುಕೊಂಡ ಅವರು, ನೀನು ಕೆಲಸ ಮಾಡದಿದ್ದರು ನಿನ್ನ ರಕ್ಷಣೆಗೆ ಸೀರೆ ಸುತ್ತುವ ಆ ಕೃಷ್ಣ ಯಾರು ಎಂದು ಪ್ರಶ್ನಿಸಿದ ಸಚಿವರು, ಜಿಲ್ಲೆಯಲ್ಲಿ ಯಾವುದೇ ಇಲಾಖೆಯ ಕೆಲಸ-ಕಾಮಗಾರಿಗಳು ಸಮರ್ಪಕವಾಗಿ ಆಗಿಲ್ಲ. ಬಹುತೇಕ ಎಲ್ಲಾ ಇಲಾಖೆಗಳ ಬಹಳಷ್ಟು ಅನುದಾನ ಖರ್ಚೇ ಆಗಿಲ್ಲ. ನೀತಿ ಸಂಹಿತೆಯಲ್ಲಿ ಯಾವುದೇ ಅಡಚಣೆ ಉಂಟಾಗಿಲ್ಲ. ಆದರೂ, ಎಸ್‍ಇಪಿ, ಟಿಎಸ್‍ಪಿ, ಲಿಂಕ್ ಡಾಕ್ಯುಮೆಂಟ್ ಅನುದಾನ ಖರ್ಚಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತುಮಕೂರು ತಾಲೂಕಿನಲ್ಲಿ 55 ಕಾಮಗಾರಿ ಎಸ್ಟಿಮೆಂಟ್ ಆಗಿದೆ. ಅದರಲ್ಲಿ 4 ವರ್ಕ್ ಆರ್ಡರ್ ಅಗಿದೆ ಎಂದು ಇಇ ಹರೀಶ್ ಬಾಬು ಸಭೆಗೆ ತಿಳಿಸಿದರು. ತುಮಕೂರು ಡಿವಿಜನ್‍ನಲ್ಲಿ 296 ಕೋಟಿ ರೂ. ಖರ್ಚು ಮಾಡುವ ಬದಲು ಕೇವಲ 86 ಲಕ್ಷ ರೂ. ಖರ್ಚು ಮಾಡಲಾಗಿದೆ. ಉಳಿದ 228ಕೋಟಿ ಖರ್ಚು ಮಾಡಿಲ್ಲ. ಇದು ಜಿಲ್ಲೆಗೆ ಹಿನ್ನಡೆಗೆ ಕಾರಣ ಎಂದು ಜೆ.ಸಿ ಮಾಧುಸ್ವಾಮಿ ತಿಳಿಸಿದರು.

ಜಿಲ್ಲೆಯಲ್ಲಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಧಿಕಾರಿಗಳಿಗೆ, ಇಂಜಿನಿಯರಿಂಗ್‍ಗಳಿಗೆ ಕೆರೆಗಳ ಹೆಸರೇ ಗೊತ್ತಿಲ್ಲ. ಇಡೀ ಜಿಲ್ಲೆಯಲ್ಲಿ ಈವರೆಗೆ ಒಂದೇ ಒಂದು ಕಾಮಗಾರಿಯೂ ನಡೆದಿಲ್ಲ. ಪಶು ಇಲಾಖೆ, ಮೀನುಗಾರಿಕೆ, ತೋಟಗಾರಿಕೆ, ಬಿಸಿಎಂ, ಆರೋಗ್ಯ, ಆಯುಷ್ ಇಲಾಖೆಯಿಂದ ಯಾವುದೆ ಕೆಲಸಗಳು ನಡೆಯುತ್ತಿಲ್ಲ. ನೀವು ಸಾಯುವುದಲ್ಲದೆ, ಜನ ಮತ್ತು ಜಿಲ್ಲೆಯನ್ನು ಸಾಯಿಸುತ್ತಿದ್ದೀರಾ ಎಂದು ಆಕ್ರೋಶಿತರಾದರು.

ಎಂಎಲ್‍ಸಿ ನಾರಾಯಣ ಸ್ವಾಮಿ ಹಾಗೂ ಶಾಸಕ ಬಿ.ಸಿ.ನಾಗೇಶ್ ಮಾತನಾಡಿ, ಜಿಲ್ಲೆಯಲ್ಲಿನ ಬಹುತೇಕ ಇಲಾಖೆಗಳ ಕಾಮಗಾರಿಗಳು ಆರಂಭವೇ ಆಗಿಲ್ಲ. ಸಿಇಒ ಮಾತಿಗೆ ಅಧಿಕಾರಿಗಳು ಬೆಲೆಯನ್ನೇ ಕೊಡುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದರು.

ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಬಿ.ಸಿ.ನಾಗೇಶ್, ಮಸಾಲೆಜಯರಾಂ, ರಾಜೇಶ್‍ಗೌಡ, ಜಿ.ಪಂ.ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ರಾಕೇಶ್‍ಕುಮಾರ್, ಸಿಇಒ ಶುಭಾಕಲ್ಯಾಣ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X