ರಾಜಸ್ಥಾನ ಸ್ವೀಕರ್ಗೆ ಸುಪ್ರೀಂ ಕೋರ್ಟ್ ನೋಟಿಸ್
ಹೊಸದಿಲ್ಲಿ, ಜ. 7: ರಾಜಸ್ಥಾನದ ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷದೊಂದಿಗೆ ಬಿಎಸ್ಪಿಯ ಎಲ್ಲಾ 6 ಶಾಸಕರು ಸೇರ್ಪಡೆಗೊಂಡಿರುವುದರ ವಿರುದ್ಧ ಸಲ್ಲಿಸಲಾದ ಎರಡು ಪ್ರತ್ಯೇಕ ಮನವಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಗುರುವಾರ ರಾಜಸ್ಥಾನದ ವಿಧಾನಸಭೆ ಸ್ಪೀಕರ್ ಹಾಗೂ ಇತರರಿಗೆ ನೋಟಿಸು ಜಾರಿ ಮಾಡಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿರುವ ಬಿಎಸ್ಪಿಯ 6 ಶಾಸಕರ ವಿರುದ್ಧದ ಅನರ್ಹತೆ ದೂರನ್ನು ಮೂರು ತಿಂಗಳೊಳಗೆ ನಿರ್ಧರಿಸುವಂತೆ ಸ್ಪೀಕರ್ಗೆ ಸೂಚಿಸಿದ ರಾಜಸ್ಥಾನ ಉಚ್ಚ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಸ್ಪಿ ಹಾಗೂ ಬಿಜೆಪಿ ಶಾಸಕ ಮದನ್ ದಿಲ್ವಾರ್ ಪ್ರತ್ಯೇಕ ಮೇಲ್ಮನವಿ ಸಲ್ಲಿಸಿದ್ದರು.
ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಝೀರ್ ಹಾಗೂ ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ಪೀಠ, ವಿಧಾನ ಸಭೆಯ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಸೇರಿರುವ 6 ಶಾಸಕರಿಗೆ ನೋಟಿಸು ಜಾರಿ ಮಾಡಿದೆ.
Next Story