ಚಾಮರಾಜನಗರ: ರಸ್ತೆ ಅಪಘಾತಕ್ಕೆ ಮೂವರು ಬಲಿ, 14 ಮಂದಿಗೆ ಗಾಯ

ಚಾಮರಾಜನಗರ. ಜ.8: ತಮಿಳುನಾಡಿನಿಂದ ಮೈಸೂರಿಗೆ ಬರುತ್ತಿದ್ದ ಟೆಂಪೊ ಟ್ರಾವೆಲರ್ ವೊಂದು ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿರುವ ಘಟನೆ ಸುವರ್ಣಾವತಿ ಜಲಾಶಯ ಸಮೀಪದ ಗುಡಿಬೋರೆ ಎಂಬಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಸಂಭವಿಸಿದೆ.
ಗುಡಿಬೋರೆ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಇಂದು ಮುಂಜಾನೆ 4:30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 14 ಮಂದಿ ಗಾಯಗೊಂಡಿದ್ದಾರೆ.
ತಮಿಳುನಾಡಿನ ತಿರುಪೂರ್ ನಿಂದ ಮೈಸೂರಿಗೆ ಬರುತ್ತಿದ್ದ ಈ ಟೆಂಪೊ ಟ್ರಾವೆಲರ್ ಮುಂಜಾನೆ 4:30ರ ಸುಮಾರಿಗೆ ಗುಡಿಬೋರೆ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ ಎನ್ನಲಾಗಿದೆ.
ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ.
ಗಾಯಾಳುಗಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರಲ್ಲಿ ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈ ಬಗ್ಗೆ ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






.gif)
.gif)
.gif)
.gif)
.gif)

