ಬಾಬರಿ ಮಸೀದಿ ಧ್ವಂಸ ಪ್ರಕರಣ: ಆರೋಪಿಗಳ ಖುಲಾಸೆಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಮೇಲ್ಮನವಿ

ಲಕ್ನೋ,ಜ.8: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಹಿರಿಯ ಬಿಜೆಪಿ ನಾಯಕರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ ಮತ್ತು ಉಮಾ ಭಾರತಿ ಸೇರಿದಂತೆ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಶುಕ್ರವಾರ ಅಲಹಾಬಾದ್ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ಸಲ್ಲಿಸಲಾಗಿದೆ.
ವಿಶೇಷ ನ್ಯಾಯಾಲಯದಿಂದ ಆರೋಪಿಗಳ ಖುಲಾಸೆಯ ವಿರುದ್ಧ ಸಿಬಿಐ ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪರವಾಗಿ ಅಯೋಧ್ಯೆ ನಿವಾಸಿಗಳಾದ ಹಾಜಿ ಮಹಬೂಬ್ ಮತ್ತು ಹಾಜಿ ಸಯ್ಯದ್ ಅಖ್ಲಾಕ್ ಅಹ್ಮದ್ ಎನ್ನುವವರು ಶುಕ್ರವಾರ ಅಲಹಾಬಾದ್ ಉಚ್ಚ ನ್ಯಾಯಾಲಯದ ಲಕ್ನೋ ಪೀಠದಲ್ಲಿ ಈ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.
ಬಾಬರಿ ಮಸೀದಿ ಧ್ವಂಸದ 28 ವರ್ಷಗಳ ಬಳಿಕ ಕಳೆದ ವರ್ಷ ವಿಶೇಷ ನ್ಯಾಯಾಲಯವು ಎಲ್ಲ 32 ಆರೋಪಿಗಳನ್ನು ಕರಸೇವಕರನ್ನು ಪ್ರಚೋದಿಸಿದ ಆರೋಪದಿಂದ ಮುಕ್ತಗೊಳಿಸಿತ್ತು.
Next Story





