Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಹಕ್ಕಿಜ್ವರ ಪತ್ತೆಯಾಗಿಲ್ಲ;...

ರಾಜ್ಯದಲ್ಲಿ ಹಕ್ಕಿಜ್ವರ ಪತ್ತೆಯಾಗಿಲ್ಲ; ಮೊಟ್ಟೆ, ಮಾಂಸ ಆತಂಕವಿಲ್ಲದೆ ಸೇವಿಸಿ: ಸಚಿವ ಪ್ರಭು ಚೌಹಾಣ್

ವಾರ್ತಾಭಾರತಿವಾರ್ತಾಭಾರತಿ8 Jan 2021 9:21 PM IST
share
ರಾಜ್ಯದಲ್ಲಿ ಹಕ್ಕಿಜ್ವರ ಪತ್ತೆಯಾಗಿಲ್ಲ; ಮೊಟ್ಟೆ, ಮಾಂಸ ಆತಂಕವಿಲ್ಲದೆ ಸೇವಿಸಿ: ಸಚಿವ ಪ್ರಭು ಚೌಹಾಣ್

ಬೆಂಗಳೂರು, ಜ.8: ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ಕಂಡುಬಂದಿಲ್ಲ. ಆದರೂ, ಇಲಾಖೆಯ ಅಧಿಕಾರಿಗಳು ಹೆಚ್ಚು ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರು ಯಾವುದೇ ಆತಂಕ ಪಡದೆ ಮೊಟ್ಟೆ ಮತ್ತು ಮಾಂಸವನ್ನು ಸೇವಿಸಬಹುದಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಝೂಮ್ ಮೂಲಕ ಆಯೋಜಿಸಿದ್ದ ಉನ್ನತ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇರಳ ರಾಜ್ಯವನ್ನು ಹೊರತುಪಡಿಸಿ ಇತರೆ ರಾಜ್ಯಗಳಿಗೆ ಕೋಳಿ ಮತ್ತು ಕೋಳಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಣಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ. ಕೇರಳದಿಂದ ಒಳಬರುವ ಕೋಳಿ, ಕುಕ್ಕುಟ, ಕೋಳಿ ಉತ್ಪನ್ನಗಳ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗಡಿ ಭಾಗದಲ್ಲಿ ಹೈಅಲರ್ಟ್: ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳು ಹಾಗೂ ಇತರೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕೋಳಿ ಶೀತ ಜ್ವರದ ರೋಗಗಳನ್ನು ತಡೆಗಟ್ಟಲು, ರೋಗ ನಿಯಂತ್ರಣ ಸಮಿತಿ ಸಭೆಗಳನ್ನು ಜರುಗಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅರಣ್ಯ ಇಲಾಖೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜೊತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೇರಳ ರಾಜ್ಯದ ಗಡಿ ಭಾಗದ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಕಾಡು ಹಕ್ಕಿಗಳು, ನೀರು ಹಕ್ಕಿಗಳು, ವಲಸೆ ಹಕ್ಕಿಗಳು, ಬಾತುಕೋಳಿಗಳು, ಗೀಜಗದ ಹಕ್ಕಿಗಳು ಇತ್ಯಾದಿ ವಿವಿಧ ಪ್ರಭೇದದ ಹಕ್ಕಿಗಳ ಅಸಹಜ ಸಾವು ಅಥವಾ ಹಕ್ಕಿ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ನಗರ ಸಭೆ/ಪುರಸಭೆ ವ್ಯಾಪ್ತಿಯಲ್ಲಿ: ನಗರ ಸಭೆ, ಪುರಸಭೆ ವ್ಯಾಪ್ತಿಯ ಪ್ರದೇಶದಲ್ಲಿ ಹಕ್ಕಿಗಳು, ಕೋಳಿಗಳ ಮರಣ ಸಂಭವಿಸಿದ್ದಲ್ಲಿ ಅದರ ಸಮೀಪ ಸಾರ್ವಜನಿಕರು ಹೋಗದಂತೆ ಮತ್ತು ಮುಟ್ಟದಂತೆ ತಿಳುವಳಿಕೆ ನೀಡುವುದು ಹಾಗೂ ವೈಯಕ್ತಿಕ ಸುರಕ್ಷತೆಯನ್ನು ಅನುಸರಿಸಿ ಅವುಗಳನ್ನು ಜೈವಿಕ ಸುರಕ್ಷತಾ ಕ್ರಮಗಳೊಂದಿಗೆ ವಿಲೇವಾರಿ ಮಾಡಲು ಪಶುಸಂಗೋಪನೆ ಇಲಾಖೆಯಿಂದ ಸಿಬ್ಬಂದಿಯವರಿಗೆ ಸೂಚನೆ ನೀಡಲಾಗಿದೆ.

ಪಕ್ಷಿಧಾಮ/ಪ್ರಾಣಿ ಸಂಗ್ರಹಾಲಯದಲ್ಲಿ ನಿಗಾ: ಎಲ್ಲಾ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ ಹಾಗೂ ನೀರು ಸಂಗ್ರಹಣಾ ಸ್ಥಳಗಳ ಬಗ್ಗೆ ನಿಗಾವಹಿಸಬೇಕು. ಕೋಳಿ, ವಲಸೆ ಹಕ್ಕಿಗಳು ವನ್ಯ ಪಕ್ಷಿಗಳ ಅಸ್ವಾಭಾವಿಕ ಮರಣ ಕಂಡುಬಂದಲ್ಲಿ ನಿಗಾವಹಿಸಿ, ವರದಿಗಳನ್ನು ಸಲ್ಲಿಸಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶೀ ರಾಜೇಂದ್ರಕುಮಾರ್ ಕಠಾರಿಯಾ, ಅಯುಕ್ತ ಎಚ್. ಬಸವರಾಜೇಂದ್ರ, ನಿರ್ದೇಶಕ ಡಾ.ಬಿ.ಎಸ್ ಶಿವಾರಾಮ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅರಣ್ಯ, ನಗರಾಭಿವ್ಬೃದ್ಧಿ, ಸಾರಿಗೆ, ಗೃಹ ಇಲಾಖೆ, ಕಂದಾಯ ಇಲಾಖೆ, ಹಣಕಾಸು ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X