Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್ ಲಸಿಕೆ ತಾಲೀಮಿಗೆ ಒಳಗಾದ...

ಕೋವಿಡ್ ಲಸಿಕೆ ತಾಲೀಮಿಗೆ ಒಳಗಾದ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ

ಮೊದಲ ಹಂತದಲ್ಲಿ 8,405 ಕೋವಿಡ್ ಯೋಧರಿಗೆ ಲಸಿಕೆ

ವಾರ್ತಾಭಾರತಿವಾರ್ತಾಭಾರತಿ8 Jan 2021 9:47 PM IST
share

ಬೆಂಗಳೂರು, ಜ. 8: ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಲಸಿಕೆ ತಾಲೀಮಿಗೆ ಚಾಲನೆ ನೀಡಿದರಲ್ಲದೆ, ಸ್ವತಃ ತಾವೇ ಅಣಕು ತಾಲೀಮಿಗೆ ಒಳಗಾದರು.

ಶುಕ್ರವಾರ ಬೆಳಗ್ಗೆಯೇ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಲಸಿಕೆ ತಾಲೀಮು ನಡೆಸುವ ಎಲ್ಲ ವ್ಯವಸ್ಥೆಗಳನ್ನು ಪರಿಶೀಲನೆ ಮಾಡಿದರಲ್ಲದೆ, ಅಣಕು ತಾಲೀಮಿಗೆ ಮೊದಲು ತಾವೇ ನೋಂದಾಯಿಸಿಕೊಂಡು ಟೆಂಪರೇಚರ್ ಪರೀಕ್ಷೆಗೆ ಒಳಗಾದರು. ಬಳಿಕ ಲಸಿಕೆ ಪಡೆಯುವ ಹಾಗೂ ಇಪ್ಪತ್ತು ನಿಮಿಷ ಪ್ರತ್ಯೇಕ ಕೊಠಡಿಯಲ್ಲಿ ವೈದ್ಯರ ನಿಗಾದಲ್ಲಿರುವ ಪ್ರಕ್ರಿಯೆಯನ್ನು ಪರಿಶೀಲಿಸಿದರು.

ಇವೆಲ್ಲ ಪ್ರಕ್ರಿಯೆಗಳ ಬಗ್ಗೆ ಡಿಸಿಎಂ ತೃಪ್ತಿ ವ್ಯಕ್ತಪಡಿಸಿದರಲ್ಲದೆ, ಲಸಿಕೆ ನೀಡುವ ಕಾರ್ಯಕ್ರಮ ಜನಾಂದೋಲನದ ರೀತಿಯಲ್ಲಿ ಕೈಗೊಳ್ಳಲು ಸರಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಪ್ರತಿಯೊಬ್ಬರಿಗೂ ಲಸಿಕೆ ಸಿಗುತ್ತದೆ ಎಂದರು. ಸ್ವತಃ ನಾನೇ ಲಸಿಕೆಯನ್ನು ಪಡೆಯುವ ಅಣಕು ಪ್ರಕ್ರಿಯೆಗೆ ಒಳಗಾಗಿದ್ದೇನೆ. ಅತ್ಯಂತ ವೈಜ್ಞಾನಿಕ ಮತ್ತು ಸುರಕ್ಷಿತವಾಗಿ ಇಡೀ ಪ್ರಕ್ರಿಯೆ ನಡೆಯುತ್ತದೆ ಎಂದು ಮಾಹಿತಿ ನೀಡಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಲಸಿಕೆ ನೀಡುವುದು ಸವಾಲಿನ ಕೆಲಸ. ಅದಕ್ಕೆ ನಾಲ್ಕು ಹಂತಗಳ ಪೂರ್ವ ಸಿದ್ಧತೆ ಅಗತ್ಯವಿರುತ್ತದೆ. ಈ ಹಿನ್ನೆಲೆಯಲ್ಲಿ ಲಸಿಕೆ ತಾಲೀಮು ಕೆಲಸ ಕೈಗೊಳ್ಳಲಾಗಿದೆ. ಇಡೀ ರಾಜ್ಯಾದ್ಯಂತ ಇಂದು ತಾಲೀಮು ನಡೆಯುತ್ತಿದೆ. ರಾಮನಗರ ಜಿಲ್ಲೆ ಒಂದರಲ್ಲೇ 8,405 ಕೋವಿಡ್ ಯೋಧರಿಗೆ ಕೋವಿನ್‍ನಲ್ಲಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.

ಅನಂತರ ಪರಿಶೀಲನೆ, ಲಸಿಕೆ ಹಾಕುವುದು ಮತ್ತು ಲಸಿಕೆ ಪಡೆದವರನ್ನು ನಿಗಾದಲ್ಲಿ ಇರಿಸುವ ವ್ಯವಸ್ಥೆಯೂ ಆಗುತ್ತದೆ. ಮೊದಲ ಡೋಸ್ ಕೊಟ್ಟು 28 ದಿನಗಳ ನಂತರ ಎರಡನೇ ಡೋಸ್ ನೀಡಲಾಗುವುದು. ಇದು ಪ್ರಥಮ ಹಂತವಾಗಿರುತ್ತದೆ. ಎರಡನೇ ಹಂತದಲ್ಲಿ ಶೇ.8ರಿಂದ 10ರಷ್ಟು ಸಾರ್ವಜನಿಕರಿಗೆ, 3ನೆ ಹಂತದಲ್ಲಿ ಶೇ.20ರಷ್ಟು ಸಾರ್ವಜನಿಕರಿಗೆ ಲಸಿಕೆ ನೀಡುವ ಕೆಲಸ ಆಗುತ್ತದೆ ಎಂದರು.

ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 87 ಕೇಂದ್ರಗಳಲ್ಲಿ 8,405 ಕೋವಿಡ್ ಯೋಧರಿಗೆ ಲಸಿಕೆ ನೀಡಲಾಗುವುದು. ಎಲ್ಲಡೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಎರಡನೇ ಹಂತದ ಹೊತ್ತಿಗೆ ಈ ಕೇಂದ್ರಗಳ ಸಂಖ್ಯೆಯನ್ನು 395ಕ್ಕೆ ಹೆಚ್ಚಿಸಲಾಗುವುದು. ಜತೆಗೆ, ಲಸಿಕೆ ಸಾಗಾಣಿಕೆ, ಪೂರೈಕೆ ಜಾಲ, ಸಿಬ್ಬಂದಿ, ಕೋಲ್ಡ್ ಸ್ಟೊರೇಜ್ ಇತ್ಯಾದಿ ಸೇರಿ ಸರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮಲ್ಲಿ ಅತ್ಯುತ್ತಮ ನಿರ್ವಹಣಾ ವ್ಯವಸ್ಥೆ ಇದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಜಿಲ್ಲಾಧಿಕಾರಿ ಅರ್ಚನಾ, ಆರೋಗ್ಯಾಧಿಕಾರಿ ಡಾ.ನಿರಂಜನ, ಎಸ್ಪಿ ಗಿರೀಶ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X