Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಪದವಿ, ಇಂಜಿನಿಯರಿಂಗ್,...

ಸರಕಾರಿ ಪದವಿ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್

ಡಿಸಿಎಂ ಡಾ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ8 Jan 2021 9:56 PM IST
share

ಬೆಂಗಳೂರು, ಜ.8: ರಾಜ್ಯದ ಸರಕಾರಿ ಪದವಿ, ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ನೀಡುವ ಮಹತ್ವದ ನಿರ್ಧಾರವನ್ನು ಸರಕಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಶುಕ್ರವಾರ ಬೆಂ.ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ವ್ಯಾಪ್ತಿ ಹಾಲು ಉತ್ಪಾದಕರ ಕುಟುಂಬಗಳ ಪ್ರತಿಭಾವಂತ ನೂರು ಮಕ್ಕಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ ಮಾಡಿ ಮಾತನಾಡಿದ ಅವರು, ಡಿಜಿಟಲ್ ಯುಗದಲ್ಲಿ ಮಕ್ಕಳ ಸಮಗ್ರ ಕಲಿಕೆ ಹಾಗೂ ಖಾಸಗಿ-ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ನಡುವೆ ಡಿಜಿಟಲ್ ಅಂತರವನ್ನು ಅಳಿಸಿ ಹಾಕಲು ಉಚಿತ ಟ್ಯಾಬ್‍ಗಳನ್ನು ವಿತರಿಸಲಾಗುತ್ತಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳು, 14 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಹಾಗೂ 87 ಸರಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಓದುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಸರಕಾರ 155.4 ಕೋಟಿ ರೂ. ವೆಚ್ಚ ಮಾಡುತ್ತಿದೆ ಎಂದರು.

ಸರಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರು. ಇಂಥ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಟ್ಯಾಬ್ಲೆಟ್‍ಗಳನ್ನು ನೀಡುವ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಡಿಜಿಟಲ್ ಅಂತರವನ್ನು ಸಂಪೂರ್ಣವಾಗಿ ಅಳಿಸಿ ಹಾಕಿದಂತಾಗಿದೆ ಎಂದರು.

155.4 ಕೋಟಿ ರೂ.ವೆಚ್ಚ: ಈ ಟ್ಯಾಬ್ಲೆಟ್‍ಗಳ ಖರೀದಿಗೆ ಒಟ್ಟು 155.4 ಕೋಟಿ ರೂ. ವೆಚ್ಚವಾಗುತ್ತಿದ್ದು, ಪ್ರತಿ ಒಂದು ಟ್ಯಾಬ್ಲೆಟ್ ಅನ್ನು 10 ಸಾವಿರ ರೂ.ಬೆಲೆಯಂತೆ ಖರೀದಿ ಮಾಡಲಾಗುತ್ತಿದೆ. ಸರಕಾರಿ ಪದವಿ ಕಾಲೇಜುಗಳಲ್ಲಿ ಪ್ರಥಮ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 11,500 ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‍ಗಳನ್ನು ಕೊಡಲಾಗುತ್ತದೆ. ಇಷ್ಟೂ ಟ್ಯಾಬ್ಲೆಟ್‍ಗಳ ಖರೀದಿಗೆ 115 ಕೋಟಿ ರೂ.ವೆಚ್ಚವಾಗುತ್ತಿದೆ. ಹಾಗೆಯೇ, ಪಾಲಿಟೆಕ್ನಿಕ್‍ಗಳಲ್ಲಿ ಓದುತ್ತಿರುವ ಪ್ರಥಮ ಮತ್ತು ದ್ವಿತೀಯ ವರ್ಷದ 28,908 ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಟ್ಯಾಬ್ಲೆಟ್‍ಗಳಿಗೆ 28.91 ಕೋಟಿ ರೂ.ಹಾಗೂ ಇಂಜಿನಿಯರಿಗ್ ಕಾಲೇಜುಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 11,488 ವಿದ್ಯಾರ್ಥಿಗಳ ಟ್ಯಾಬ್ಲೆಟ್‍ಗಳಿಗೆ 11.49 ಕೋಟಿ ರೂ. ಸೇರಿ ಒಟ್ಟು 155.4 ಕೋಟಿ ರೂ. ವೆಚ್ಚವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

ಈ ಮುನ್ನವೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ವಿದ್ಯಾರ್ಥಿಗಳು ಸುಲಭ ವ್ಯಾಸಂಗಕ್ಕೆ ಈ ಟ್ಯಾಬ್ಲೆಟ್‍ಗಳು ಸಹಾಯಕ. ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇವು ಪೂರಕ ಎಂದ ಅವರು, ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ಟ್ಯಾಬ್ಲೆಟ್‍ಗಳ ಗುಣಮಟ್ಟ ಹಾಗೂ ಕಲಿಕೆಗೆ ಬೇಕಾದ ಎಲ್ಲ ಫೀಚರುಗಳ ಬಗ್ಗೆ ಅತಿಹೆಚ್ಚು ಗಮನ ನೀಡಲಾಗಿದೆ. ವೈಫೈ, ಸಿಮ್ ಬಳಕೆಯಿಂದ ಇವುಗಳಿಗೆ ಇಂಟರ್‍ನೆಟ್ ಸಂಪರ್ಕ ಸಾಧಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್ ಬಳಕೆಯ ಮೂಲಕವೇ ಆನ್‍ಲೈನ್ ತರಗತಿಯಲ್ಲಿ ಪಾಲ್ಗೊಳ್ಳಬಹುದು ಎಂದರು.

ಹಾಲು ಉತ್ಪಾದಕರ ಶ್ಲಾಘನೆ: ಇದೇ ವೇಳೆ ಜಿಲ್ಲಾ ಹಾಲು ಒಕ್ಕೂಟ ಹಾಗೂ ಹಾಲು ಉತ್ಪಾದಕರನ್ನು ಶ್ಲಾಘಿಸಿದ ಅವರು, ರೈತರ ಶ್ರಮದಿಂದ ಒಳ್ಳೆಯ ಕೆಲಸ ಆಗುತ್ತಿದೆ. ರೈತರ ಜೀವನದ ಗುಣಮಟ್ಟ ಸುಧಾರಿಸಲು ಈ ಕ್ರಮ ಕೈಗೊಳ್ಳಕೊಳ್ಳಲಾಗಿದೆ. ನಗರ ಮತ್ತು ಗ್ರಾಮೀಣ ಭಾಗದ ಜನರಲ್ಲಿ ವ್ಯತ್ಯಾಸ ಇರಬಾರದು. ಅದಕ್ಕೆ ಪೂರಕವಾಗಿ ಸರಕಾರ ಈ ಕೆಲಸ ಮಾಡಲಾಗುತ್ಯದೆ. ತಂತ್ರಜ್ಞಾನದ ಬಳಕೆ ಮೂಲಕ ಎಲ್ಲವನ್ನೂ ಸಾಧಿಸಬಹುದು ಎಂದರು.

ರೈತರ ಜತೆ ಸರಕಾರ ಇದೆ. ಹಾಲು ಉತ್ಪಾದಕರು ಆರ್ಥಿಕವಾಗಿ ಶಕ್ತರಾಗಬೇಕು. ಇಡೀ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ರಾಮನಗರ ಜಿಲ್ಲೆಯನ್ನು ಕಟ್ಟೋಣ. ಮುಂದಿನ ದಿನಗಳಲ್ಲಿ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುವುದರ ಜತೆಗೆ, ರೈತರ ಮಕ್ಕಳ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲಾಗುವುದು ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X