ಕಾಸರಗೋಡು : ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ

ಕಾಸರಗೋಡು : ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆಗೈದ ದಾರುಣ ಘಟನೆ ಮುಳಿಯಾರು ಸಮೀಪದ ವಡಕ್ಕಕರೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಪತ್ನಿ ಬೇಬಿಯನ್ನು ನಾಡಕೋವಿಯಿಂದ ಗುಂಡಿಕ್ಕಿ ಕೊಂದ ಬಳಿಕ ಪತಿ ವಿಜಯನ್ ಮನೆ ಸಮೀಪದ ಕಾಡಿನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ಯಿಂದ ತಿಳಿದುಬಂದಿದೆ. ಆದೂರು ಪೊಲೀಸರು ಸ್ಥಳಕ್ಕೆ ತೆರಳಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Next Story





