Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಅತ್ಯುತ್ತಮವಾಗಿ ಕರ್ತವ್ಯ...

ಉಡುಪಿ: ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ9 Jan 2021 6:34 PM IST
share
ಉಡುಪಿ: ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪುರಸ್ಕಾರ

ಉಡುಪಿ, ಜ. 9: ಉಡುಪಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಹಚ್ಚಿರುವ ಮತ್ತು ಇಲಾಖಾ ಕರ್ತವ್ಯ ವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನವನ್ನು ಘೋಷಿಸಿದ್ದಾರೆ.

ಪುರಸ್ಕಾರಕ್ಕೆ ಪಾತ್ರರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿವರ ಇಂತಿದೆ. ಸೌದಿಯಲ್ಲಿ ಬಂಧನಕ್ಕೆ ಒಳಗಾಗಿರುವ ಕೋಟೇಶ್ವರದ ಹರೀಶ್ ಬಂಗೇರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದ ಈ ಹಿಂದೆ ಉಡುಪಿ ಸೆನ್ ಅಪರಾಧ ಠಾಣೆಯ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ., ಹಾಗೂ ಈಗಿನ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್, ಎಸ್ಸೈಗಳಾದ ನಾರಾಯಣ, ಲಕ್ಷ್ಮಣ, ಸಿಬ್ಬಂದಿಗಳಾದ ಶ್ರೀಧರ್, ರಾಘವೇಂದ್ರ, ಕೃಷ್ಣಪ್ರಸಾದ್, ಜೀವನ್ ಪ್ರವೀಣ್.

ಹಿರಿಯಡ್ಕದಲ್ಲಿ ನಡೆದ ಕಿಶನ್ ಹೆಗ್ಡೆ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿದ ತಂಡದ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ  ಪದ್ಮನಾಭ, ಆಗಿನ ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್, ಉಡುಪಿ ವೃತ್ತ ನಿರೀಕ್ಷಕ ಮಂಜು ನಾಥ, ಡಿಸಿಐಬಿ ನಿರೀಕ್ಷಕ ಮಂಜಪ್ಪ ಡಿ.ಆರ್., ಮಣಿಪಾಲ ನಿರೀಕ್ಷಕ ಮಂಜುನಾಥ, ಆಗಿನ ಬ್ರಹ್ಮಾವರ ಎಸ್ಸೈ ರಾಘವೆಂದ್ರ ಸಿ., ಕೋಟ ಎಸ್ಸೈ ಸಂತೋಷ್ ಬಿ.ಪಿ., ಎಎಸ್ಸೈ ಕೃಷ್ಣಪ್ಪ, ಡಿಸಿಐಬಿ ಎಎಸ್ಸೈ ರವಿಚಂದ್ರ, ಡಿಸಿಐಬಿ ಸಿಬ್ಬಂದಿಗಳಾದ ರಾಮು ಹೆಗ್ಡೆ, ರಾಘವೆಂದ್ರ, ಬ್ರಹ್ಮಾವರ ವೃತ್ತ ಕಚೇರಿಯ ಸಿಬ್ಬಂದಿಗಳಾದ ವಾಸುದೇವ, ಗಣೇಶ್, ಪ್ರದೀಪ್ ನಾಯಕ್ ಹಾಗೂ ಚಾಲಕ ಶೇಖರ, ಬ್ರಹ್ಮಾವರ ಠಾಣಾ ಸಿಬ್ಬಂದಿಗಳಾದ ದಿಲೀಪ್, ಅಣ್ಣಪ್ಪಮೊಗವೀರ, ರವೀಂದ್ರ, ಹಿರಿಯಡ್ಕ ಠಾಣಾ ಸಿಬ್ಬಂದಿ ಇಂದ್ರೇಶ್.

ಮಣಿಪಾಲದಲ್ಲಿ ಭಾರೀ ಮೌಲ್ಯದ ಮಾದಕ ದ್ರವ್ಯ ಪದಾರ್ಥಗಳನ್ನು ವಶ ಪಡಿಸಿಕೊಂಡ ತಂಡದಲ್ಲಿದ್ದ ಮಣಿಪಾಲ ನಿರೀಕ್ಷಕ ಮಂಜುನಾಥ ಎಂ., ಎಸ್ಸೈ ರಾಜಶೇಖರ ವಂದಲಿ. 2019 ಮತ್ತು ಅದಕ್ಕೂ ಹಿಂದೆ ವರದಿಯಾಗಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ ಮಣಿಪಾಲ ನಿರೀಕ್ಷಕ ಮಂಜುನಾಥ ಎಂ., ಎಸ್ಸೈ ರಾಜಶೇಖರ ವಂದಲಿ, ಕಾಪು ಎಸ್ಸೈ ರಾಜಶೇಖರ ಬಿ.ಸಾಗನೂರು, ಬೈಂದೂರು ಎಸ್ಸೈ ಸಂಗೀತ, ಕೋಟ ಎಸ್ಸೈ ಸಂತೋಷ್ ಬಿ.ಪಿ., ಉಡುಪಿ ನಗರ ಎಸ್ಸೈ ಸಕ್ತಿವೇಲು, ಮಣಿಪಾಲ ಎಎಸ್ಸೈ ದಿವಾಕರ ಶರ್ಮ, ಬೈಂದೂರು ಎಎಸ್ಸೈ ಮಂಜುನಾಥ, ಸಿಬ್ಬಂದಿಗಳಾದ ಉಡುಪಿ ನಗರ ಠಾಣೆಯ ರಿಯಾಜ್ ಅಹ್ಮದ್ ಮತ್ತು ವಿಶ್ವನಾಥ, ಬೈಂದೂರು ಠಾಣೆಯ ನಾಗರಾಜ್, ಕೋಟ ಠಾಣೆಯ ಗಣೇಶ್ ಮತ್ತು ಕೃಷ್ಣ, ಮಣಿಪಾಲ ಠಾಣೆಯ ಆದರ್ಶ ಹಾಗೂ ಕಾಪು ಠಾಣೆಯ ಮಹಾಬಲ ಶೆಟ್ಟಿಗಾರ್ ಮತ್ತು ಅರುಣ್ ಕುಮಾರ್.

ಲೋಕ್ ಅದಾಲತ್ ಪ್ರಕರಣ 2020ನೆ ಸಾಲಿನಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 67 ಪ್ರಕರಣಗಳನ್ನು ಇತ್ಯರ್ಥಪಡಿಸಿ, ನ್ಯಾಯಾಂಗ ವಿಚಾರಣೆಯ ಪ್ರಕರಣಗಳ ಸಂಖ್ಯೆಯನ್ನು ಇಳಿಮುಖ ಮಾಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಬೈಂದೂರು ಎಸ್ಸೈ ಸಂಗೀತ, ಶಂಕರನಾರಾಯಣ ಎಸ್ಸೈ ಶ್ರೀಧರ ನಾಯ್ಕ, ಪಡುಬಿದ್ರೆ ಎಸ್ಸೈ ದಿಲೀಪ್, ಕುಂದಾಪುರ ಎಸ್ಸೈ ಸದಾಶಿವ ಗವರೋಜಿ, ಬ್ರಹ್ಮಾವರ ಎಸ್ಸೈ ರಾಘವೇಂದ್ರ (ಪ್ರಸ್ತುತ ಕಾಪು ಠಾಣೆ) ಹಾಗೂ ಉಡುಪಿ ಸಂಚಾರ ಠಾಣಾ ಎಸ್ಸೈ ಅಬ್ದುಲ್ ಖಾದರ್ ಪುರಸ್ಕಾರ ಪಡೆದುಕೊಂಡಿದ್ದಾರೆ.

ಜನಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕ ಹೊಂದಿ, ಅಲ್ಲಿನ ಆಗು ಹೋಗುಗಳ ಬಗ್ಗೆ ಗಮನಹರಿಸಿ, ಬೀಟ್ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಸಿಬ್ಬಂದಿಗಳಾದ ಕೊಲ್ಲೂರು ಠಾಣೆಯ ನವೀನ್ ದೇವಾಡಿಗ, ಮಲ್ಪೆಯ ರವಿರಾಜ್, ಪಡುಬಿದ್ರೆಯ ಬಸಪ್ಪ, ಶಿರ್ವದ ಅಂದಪ್ಪ ಹಾಗೂ ಕುಂದಾಪುರ ಠಾಣೆಯ ಪ್ರಸನ್ನ ಈ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಪ್ರಶಂಸನಾ ಪತ್ರ ಹಾಗೂ ನಗದು ಪುರಸ್ಕಾರ ಪಡಕೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳು ಇದೇ ರೀತಿ ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಿಕೊಂಡು, ಇನ್ನೂ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಬೇಕು. ಜಿಲ್ಲೆಯ ಇತರ ಅಧಿಕಾರಿ, ಸಿಬ್ಬಂದಿ ಯವರೂ ಕೂಡ ಇದೇ ರೀತಿ ತಮ್ಮ ಕಾರ್ಯದಕ್ಷತೆಯನ್ನು ನಿರ್ವಹಿಸಿ, ಮೇಲಾಧಿಕಾರಿಯವರಿಂದ ಪುರಸ್ಕಾರ ಪಡೆಯಬೇಕು.-ವಿಷ್ಣುವರ್ಧನ್, ಎಸ್ಪಿ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X