Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ.11ರಿಂದ ಆಕಾಶವಾಣಿಯಲ್ಲಿ ‘ಕಲಿಯುತ್ತಾ...

ಜ.11ರಿಂದ ಆಕಾಶವಾಣಿಯಲ್ಲಿ ‘ಕಲಿಯುತ್ತಾ ನಲಿಯೋಣ’ ಕಾರ್ಯಕ್ರಮ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ9 Jan 2021 8:15 PM IST
share
ಜ.11ರಿಂದ ಆಕಾಶವಾಣಿಯಲ್ಲಿ ‘ಕಲಿಯುತ್ತಾ ನಲಿಯೋಣ’ ಕಾರ್ಯಕ್ರಮ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜ.9: ಶಿಕ್ಷಣ ಇಲಾಖೆ, ಆಕಾಶವಾಣಿ ಮೂಲಕ ಜ.11ರಿಂದ ‘ಕಲಿಯುತ್ತಾ-ನಲಿಯೋಣ’ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಒಂದನೆ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ(ಆದರೆ ಶಾಲೆಗೆ ಹೋಗಲಾರದ) ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ಜ.11 ರಿಂದ ಎ.5ರ ವರೆಗೆ  ಆಕಾಶವಾಣಿ ಪ್ರಸಾರ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಪ್ರತಿವಾರ ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿನಿತ್ಯ ಬೆಳಗ್ಗೆ 10 ಗಂಟೆಯಿಂದ 10.15ರವರೆಗೆ ಒಂದು ಮತ್ತು ಎರಡನೆ ತರಗತಿಗಳಿಗಾಗಿ ಹಾಗೂ 10.15 ರಿಂದ 10.30 ಗಂಟೆಯವರೆಗೂ 3 ಮತ್ತು 4ನೆ ತರಗತಿಗಳಿಗಾಗಿ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ ಇಲಾಖೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸುರೇಶ್ ಕುಮಾರ್ ವಿವರಿಸಿದ್ದಾರೆ.

ಈ ಕಾರ್ಯಕ್ರಮಗಳ ಮೂಲಕ ನಲಿ-ಕಲಿಯ ಆಶಯಗಳಾದ ಆಲಿಸುವಿಕೆ, ವಸ್ತು ಗುರುತಿಸುವಿಕೆ, ಸ್ವ ಕಲಿಕೆ, ಸಂತಸದಾಯಕ ಕಲಿಕೆ, ಶಬ್ದ ಪರಿಚಯ ಹೀಗೆ ಶಬ್ದಗಳ ಏರಿಳಿತದ ಮೂಲಕ ವಿಷಯಗಳನ್ನು ವಿನೂತನ ಮಾದರಿಯಲ್ಲಿ ತಿಳಿಸಲಾಗುತ್ತದೆ. ಒಂದರಿಂದ ನಾಲ್ಕನೆ ತರಗತಿಯವರೆಗೆ ಓದುತ್ತಿರುವ ಮಕ್ಕಳ ಎಲ್ಲ ಪೋಷಕರಿಗೆ ಈ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಆಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಅಲ್ಲಿ ಪ್ರಸಾರಗೊಳ್ಳುವ ಹಾಡು, ಕಥೆ ಇತ್ಯಾದಿಗಳನ್ನು ನಿಮ್ಮ ಮಕ್ಕಳಿಗೆ ಮತ್ತೊಮ್ಮೆ ಹೇಳುವುದರ ಮೂಲಕ ಹೇಳಿಸುವ ಮೂಲಕ ಮಕ್ಕಳಿಗೆ ನಲಿಯುವುದರ ಜೊತೆಗೆ ಕಲಿಯುವುದನ್ನು ಅಭ್ಯಾಸ ಮಾಡಿಸಿ ಎಂದು ಅವರು ಕೋರಿದ್ದಾರೆ.

ಮಕ್ಕಳು ಹೇಳಿದ ಕಥೆಗಳೂ ಪ್ರಸಾರ: ತಮ್ಮ ಮಕ್ಕಳಿಂದ ಯಾವುದಾದರೂ ಕಥೆ ಹಾಡು ಒಗಟು ಹೇಳಬಹುದಾದರೆ ವಾಟ್ಸಪ್ ನಂಬರ್ 9449417612ಗೆ ಕಳಿಸಿದರೆ ಅದನ್ನು ಪ್ರಸಾರ ಮಾಡಲಾಗುವುದು. ಈ ಕಾರ್ಯಕ್ರಮ ರಾಜ್ಯದ 13 ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗುತ್ತದೆ. ಮತ್ತು ನಂತರ ಈ ಕಾರ್ಯಕ್ರಮಗಳು ಯೂಟ್ಯೂಬ್‍ನಲ್ಲಿ ಲಭ್ಯವಿರುತ್ತವೆ. ಈ ಎಳೆ ಕಂದಗಳ ಮನಸ್ಸುಗಳನ್ನು ವಿಕಸನಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗುತ್ತಿರುವ ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಪೋಷಕರಲ್ಲಿ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X