ದ.ಕ. ಜಿಲ್ಲೆ: 37 ಮಂದಿಗೆ ಕೋವಿಡ್ ಪಾಸಿಟಿವ್
ಮಂಗಳೂರು, ಜ.9: ದ.ಕ. ಜಿಲ್ಲೆಯಲ್ಲಿ ಶನಿವಾರ ಮತ್ತೆ 37 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಈ ನಡುವೆ 28 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,216 ಸೋಂಕಿತರ ಪೈಕಿ 32,026 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 732 ಮಂದಿ ಮೃತಪಟ್ಟಿದ್ದಾರೆ. ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ 458 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 21,805 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ವರದಿಯಾಗಿದ್ದು, 23,13,830 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story