Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಒಂದು ವರ್ಷದ ಬಳಿಕ ತಾಯ್ನಾಡಿಗೆ...

ಒಂದು ವರ್ಷದ ಬಳಿಕ ತಾಯ್ನಾಡಿಗೆ ಹಿಂದಿರುಗಲಿರುವ ಇರಾನ್‍ನ 15 ಮೀನುಗಾರರು

ಮಾನವೀಯತೆ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ10 Jan 2021 10:59 AM IST
share
ಒಂದು ವರ್ಷದ ಬಳಿಕ ತಾಯ್ನಾಡಿಗೆ ಹಿಂದಿರುಗಲಿರುವ ಇರಾನ್‍ನ 15 ಮೀನುಗಾರರು

ಮಂಗಳೂರು, ಜ.10: ಭಾರತೀಯ ಜಲ ಗಡಿಯೊಳಗೆ ಅಕ್ರಮವಾಗಿ ಪ್ರವೇಶಿಸಿ ಲಕ್ಷದ್ವೀಪದ ಬಳಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಡಿ ವರ್ಷದ ಹಿಂದೆ ಬೆಂಗಳೂರು ಜೈಲುಪಾಲಾಗಿರುವ ಇರಾನ್ ದೇಶದ 15 ಮೀನುಗಾರರ ವಿರುದ್ಧ ದಾಖಲಿಸಲಾದ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಆದೇಶದಂತೆ ರದ್ದುಪಡಿಸಲಾಗಿದೆ ಎಂದು ಮೀನುಗಾರರ ಪರ ವಾದ ಮಂಡಿಸಿರುವ ವಕೀಲರಾದ ಖೇತನ್ ಬಂಗೇರ ಹಾಗೂ ಅಭಿಷೇಕ್ ಮಾರ್ಲ ತಿಳಿಸಿದ್ದಾರೆ.

ಒಂದು ವರ್ಷದ ಬಳಿಕ ಮೀನುಗಾರರ ಬಿಡುಗಡೆಯಾಗಲಿದ್ದು, ಕರ್ನಾಟಕ ಹೈಕೋರ್ಟ್ ಮಾನವ ಧರ್ಮದ ಶ್ರೇಷ್ಠ ಗುಣ ಮಾನವೀಯತೆನ್ನು ಎತ್ತಿ ಹಿಡಿದ ತೀರ್ಪು ಇದಾಗಿದೆ ಅನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ಪ್ರಕರಣದ ಹಿನ್ನೆಲೆ: 2019ರ ಅ.21ರಂದು ಭಾರತೀಯ ಕೋಸ್ಟ್ ಗಾರ್ಡ್ ನೌಕೆಗಳು ಗಸ್ತು ತಿರುಗುತ್ತಿದ್ದಾಗ ಲಕ್ಷದ್ವೀಪದ ಬಳಿ ಭಾರತೀಯ ಜಲ ಗಡಿಯೊಳಗೆ ಎರಡು ದೋಣಿಗಳು ಪತ್ತೆಯಾಗಿದ್ದವು. ಅವುಗಳನ್ನು ನಿಲ್ಲಿಸುವಂತೆ ಸೂಚಿಸಿದಾಗ ದೋಣಿಗಳ ನಾವಿಕರು ನೌಕೆಗಳೊಂದಿಗೆ ಪರಾರಿಯಾಗಲು ಯತ್ನಿಸಿದ್ದರು ಎಂದು ಅರೋಪಿಸಿ ದೋಣಿಗಳು ಮತ್ತು ಮೀನುಗಾರರನ್ನು ವಶಕ್ಕೆ ಪಡೆಯಲಾಗಿತ್ತು. ಈ ಕುರಿತು ಅಂದಿನ  ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ಮಾಧ್ಯಮ ಹೇಳಿಕೆ ಮೂಲಕ ತಿಳಿಸಿದ್ದರು.

`ಅವಿಧಿ' ಮತ್ತು `ಇಶಾನ್' ಎಂಬ ಹೆಸರಿನ ಇರಾನ್‍ನ ದೋಣಿಗಳು ಅಕ್ರಮವಾಗಿ ಭಾರತದ ಜಲ ಗಡಿಯೊಳಕ್ಕೆ ಬಂದಿದ್ದವು. ಅಲ್ಲಿ ಮೀನುಗಾರಿಕೆ ನಡೆಸಲು ಅವರು ಯಾವುದೇ ರೀತಿಯ ಪರವಾನಿಗೆ ಹೊಂದಿರಲಿಲ್ಲ. ದಾಖಲೆಗಳನ್ನೂ ಹಾಜರುಪಡಿಸಿರಲಿಲ್ಲ. ನೌಕಾಪಡೆಯ ಅಧಿಕಾರಿಗಳು ವಿಚಾರಣೆ ನಡೆಸುವುದಕ್ಕೆ ಅಡ್ಡಿಪಡಿಸಿದ್ದರು. ಈ ಕಾರಣದಿಂದ ಅವರನ್ನು ವಶಕ್ಕೆ ಪಡೆದು, ಕರೆತರಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದರು.

ಕೋಸ್ಟ್ ಗಾರ್ಡ್‍ನ ಡೆಪ್ಯೂಟಿ ಕಮಾಂಡೆಂಟ್ ಹಾಗೂ ಬೋರ್ಡಿಂಗ್ ಅಧಿಕಾರಿ ಕುಲದೀಪ್ ಶರ್ಮಾ ನೀಡಿರುವ ದೂರಿನಂತೆ ಭಾರತೀಯ ಜಲಗಡಿ ಕಾಯ್ದೆಯ ಅಡಿಯಲ್ಲಿ ಕರಾವಳಿ ಕಾವಲು ಪಡೆಯ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಅಬೂಬಕರ್ ಅನ್ಸಾರಿ ಮೀಯಾ, ಮೂಸಾ ದೆಹದಾನಿ, ಅಝಂ ಅನ್ಸಾರಿ, ಶಿದ್ ಬಾಚೂ, ಅಬ್ದುಲ್ ಮಜೀದ್, ಮಜೀದ್ ರಹ್ಮಾನ್ ದಾವೂದ್, ಮಹಮ್ಮದ್ ಇಸಾಕ್, ಕರೀಂ ಭಕ್ಷ್ ದೂರ್‍ಜಾದೆ, ಮುಹಮ್ಮದ್ ಬಲೂಚ್, ಬಮನ್, ಅಬ್ದುಲ್ ಗನಿ ಬಾಪೂರ್, ನಸೀರ್ ಭದ್ರುಚ್, ಅನ್ವರ್ ಬಲೂಚ್, ನಭೀ ಭಕ್ಷ್ ಮತ್ತು ಯೂಸುಫ್ ಜಹಾನಿ ಎಂಬ ಮೀನುಗಾರರನ್ನು ಬಂಧಿಸಲಾಗಿತ್ತು. ಎಲ್ಲರನ್ನೂ ಇದೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಬಳಿಕ ಮಂಗಳೂರು ಜೈಲಿನಲ್ಲಿ, ನಂತರ ಕೊರೊನ ಸಂದರ್ಭದಲ್ಲಿ ಬೆಂಗಳೂರು ಜೈಲಿನಲ್ಲಿ ಇರಿಸಲಾಗಿತ್ತು.

ಇರಾನ್ ದೇಶದ ರಾಜತಾಂತ್ರಿಕರು ಅಥಾವ ಭಾರತೀಯ ರಾಜತಾಂತ್ರಿಕರು ಈ ಪ್ರಕರಣ ಬಗ್ಗೆ ಸತ್ಯಾಸತ್ಯತೆ ಬಗ್ಗೆ  ರಾಜ್ಯ ಗೃಹ ಇಲಾಖೆಯ ಜೊತೆ ಯಾವೂದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಈ ಕಾರಣದಿಂದಾಗಿ ಒಂದೂವರೆ ವರ್ಷ ಏನೂ ತಪ್ಪು ಮಾಡದ ಮೀನುಗಾರು ಪ್ರಾಕೃತಿಕ ವಿಕೋಪದಿಂದ ಜೈಲು ಸೇರುವಂತೆ ಆಗಿತ್ತು.

ಈ ಕಾನೂನು ಪ್ರಕ್ರಿಯೆ ನಡುವೆ ಕರಾವಳಿ ಪಡೆ ದಾಖಲಿಸಿದ ಎಫ್ ಐ ಆರ್ ರದ್ದುಗೊಳಿಸುವಂತೆ ಮೀನುಗಾರರ ಪರ ಮೇಲ್ಮನವಿ ಹೈಕೋರ್ಟ್ ಗೆ  ಅರ್ಜಿ ಸಲ್ಲಿಸಿದ್ದರು.

ಮೀನುಗಾರರ ಪರ ವಕೀಲರ ವಾದವನ್ನು ಆಲಿಸಿದ ಕರ್ನಾಟಕ ಹೈಕೋರ್ಟ್ ಮೀನುಗಾರಿಕಾ ಪ್ರಕ್ರಿಯೆಯಲ್ಲಿ ಕಾರಣಾಂತಗಳಿಂದ ಹಾಗು ಪ್ರಕೃತಿ ವಿಕೋಪದಿಂದ ಮೀನುಗಾರಿಕಾ ದೋಣಿಯು ನಮ್ಮ ದೇಶದ ಜಲ ಗಡಿ ಪ್ರವೇಶಿಸಿದ್ದಾರೆ. ಅವರ ವಿರುದ್ಧ ಕ್ರಿಮಿನಲ್ ಮೊಕ್ಕದ್ದಮ್ಮೆ ಹೂಡುವುದು ಸರಿಯಲ್ಲ ಹಾಗೂ ಅಂತಾರಾಷ್ತ್ರೀಯ ಸಮುದ್ರದಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿದ್ದು,  ಹಲವು ಬಾರಿ ನಮ್ಮ ದೇಶದ ಮೀನುಗಾರರು ಮತ್ತೊಂದು ದೇಶದ ಜಲ ಗಡಿಯನ್ನು  ಪ್ರವೇಶಿಸಿದ್ದು, ಕೆಲವೊಮ್ಮೆ  ಮಾನವೀಯತೆ ತೋರಿ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಯಾವುದೇ ದುರುದ್ದೇಶ ಇಲ್ಲದೆ ಮತ್ತೊಂದು ದೇಶದ ಜಲ ಗಡಿ ಪ್ರವೇಶಿಸಿದ್ದರೆ ಅಂತಹ ಮೀನುಗಾರರ ವಿರುದ್ಧ ಕ್ರಮಕೈಗೊಳ್ಳುವುದು ಸಮಂಜಸ ಅಲ್ಲ ಎಂದು ಅಭಿಪ್ರಾಯಪಟ್ಟಿತು. 

ಈ ಎಲ್ಲಾ ಕಾರಣದಿಂದ ಇರಾನ್ ದೇಶದ 15 ಮೀನುಗಾರ ವಿರುದ್ಧ ಇದ್ದ ಕ್ರಿಮಿನಲ್ ಮೊಕದ್ದಮ್ಮೆಯನ್ನು ರದ್ದುಪಡಿಸಿತು. ಮಂಗಳೂರಿನ  ಅಡ್ವಕೇಟ್ ಖೇತನ್ ಬಂಗೇರ ಮತ್ತು ಅಡ್ವಕೇಟ್ ಅಭಿಷೇಕ್ ಮಾರ್ಲ ಇಬ್ಬರು ವಕೀಲರ  ಸಮರ್ಥ ವಾದವನ್ನು ಅಲಿಸಿದ  ನ್ಯಾಯಲಯ ಎಫ್ ಐಆರ್ ರದ್ದುಪಡಿಸಿ  ತೀರ್ಪು ನೀಡಿದೆ.

ಸದ್ಯ ಮೀನುಗಾರರು ಬೆಂಗಳೂರಿನ ಪರಪ್ಪನ ಅಗ್ರಾಹಾರ ಜೈಲಿನಲ್ಲಿದ್ದು, ಇನ್ನಷ್ಟೇ ಬಿಡುಗಡೆ ಆಗಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X