ಸಂಪುಟ ವಿಸ್ತರಣೆ ಕುರಿತು ರಾಷ್ಟ್ರೀಯ ನಾಯಕರ ಜೊತೆ ಚರ್ಚೆ: ಯಡಿಯೂರಪ್ಪ

ಬೆಂಗಳೂರು, ಜ.10: ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಲು ದಿಲ್ಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿಂದು ದಿಲ್ಲಿಗೆ ಭೇಟಿ ನೀಡುವ ಸಂದರ್ಭ ಅವರು ಮಾಧ್ಯಮದವರ ಜೊತೆ ಮಾತನಾಡುತ್ತಿದ್ದರು.
ಈ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆಯೇ? ಎಂಬ ಪ್ರಶ್ನೆಗೆ ‘ಗೊತ್ತಿಲ್ಲ’ ಎಂದಷ್ಟೇ ಪ್ರತಿಕ್ರಿಯಿಸಿದ ಸಿಎಂ, ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಹಾಗೂ ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆ ಪಕ್ಷ ಬೆಂಬಲಿತರ ಗೆಲುವಿನ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡುವುದು ಸೇರಿದಂತೆ ಇನ್ನಿತರ ವಿಷಯಗಳ ಕುರಿತು ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ರಾತ್ರಿ ವಾಪಸ್ ಬರಲು ಉದ್ದೇಶಿಸಿದ್ದೇನೆ ಎಂದರು.
Next Story





