Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಗೆ...

ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಗೆ ಸುಗ್ರೀವಾಜ್ಞೆ ಅಸಿಂಧು: ಸುಪ್ರೀಂಕೋರ್ಟ್ ನಿವೃತ್ತ ನ್ಯಾ.ಗೋಪಾಲಗೌಡ

''ಕಾಯ್ದೆಯನ್ನು ನ್ಯಾಯಾಲಯ ರದ್ದುಪಡಿಸಿ ಅರಬಿ ಸಮುದ್ರಕ್ಕೆ ಎಸೆಯುವುದು ಖಚಿತ''

ವಾರ್ತಾಭಾರತಿವಾರ್ತಾಭಾರತಿ10 Jan 2021 5:07 PM IST
share
ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಗೆ ಸುಗ್ರೀವಾಜ್ಞೆ ಅಸಿಂಧು: ಸುಪ್ರೀಂಕೋರ್ಟ್ ನಿವೃತ್ತ ನ್ಯಾ.ಗೋಪಾಲಗೌಡ

ಬೆಂಗಳೂರು, ಜ.10: ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿರುವ ಸುಗ್ರೀವಾಜ್ಞೆ ಹಾಗೂ ಅದಕ್ಕೆ ರಾಜ್ಯಪಾಲರು ಹಾಕಿರುವ ಅಂಕಿತ ಅಸಿಂಧು ಆಗಿದ್ದು, ಇದರ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ ಪ್ರಕರಣ ದಾಖಲಿಸಲಾಗುವುದೆಂದು ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾ.ಗೋಪಾಲಗೌಡ ತಿಳಿಸಿದ್ದಾರೆ.

ರವಿವಾರ ಕರ್ನಾಟಕ ರಾಜ್ಯ ರೈತ ಸಂಘ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಸರಕಾರದ ಗೋ ಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಯ ಕಾನೂನು ರೈತರ ಪಾಲಿಗೆ ಮರಣಶಾಸನ ಆಗಲಿದೆಯೇ ಎಂಬುದರ ಕುರಿತು ಆಯೋಜಿಸಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂವಿಧಾನದ ಮೂಲಭೂತ ಹಕ್ಕುಗಳು, ನಿರ್ದೇಶನ ತತ್ವಗಳು ಹಾಗೂ ಮಾನವೀಯ ಮೌಲ್ಯಗಳ ವಿರುದ್ಧ ರಾಜ್ಯ ಸರಕಾರ ಗೋ ಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಗೆ ಸುಗ್ರೀವಾಜ್ಞೆ ತಂದಿದೆ. ಅದಕ್ಕೆ ರಾಜ್ಯಪಾಲರು ಸಂವಿಧಾನದ ಕಾನೂನುಗಳನ್ನು ಮೀರಿ ಅಂಕಿತ ಹಾಕಿದ್ದಾರೆ. ಹೀಗಾಗಿ ಈ ಕಾಯ್ದೆಯು ನ್ಯಾಯಾಲಯದಲ್ಲಿ ಅಸಿಂಧುಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಸುಗ್ರೀವಾಜ್ಞೆಯಿಂದ ಪಾಸಾದ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಬೇಕಾದರೆ, ತುರ್ತು ಪರಿಸ್ಥಿತಿಯ ಸಂದರ್ಭ ಇರಬೇಕು. ಆದರೆ, ಸದ್ಯ ರಾಜ್ಯದಲ್ಲಿ ಅಂತಹ ಯಾವುದೇ ಪರಿಸ್ಥಿತಿಯಿರಲಿಲ್ಲ. ಹಾಗೂ ಈ ಕಾಯ್ದೆಯು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಆದರೆ, ಪರಿಷತ್‍ನಲ್ಲಿ ಈ ಕಾಯ್ದೆಗೆ ಅಂಗೀಕಾರ ಸಿಗಲಾರದೆಂಬ ಕಾರಣದಿಂದ ಅದನ್ನು ಮಂಡಿಸಲು ಬಿಜೆಪಿ ಹಿಂದೇಟು ಹಾಕಿದೆ. ಹೀಗಾಗಿ ರಾಜ್ಯಪಾಲರು ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ಸುಗ್ರಿವಾಜ್ಞೆಗೆ ಅಂಕಿತ ಹಾಕಿದ್ದು ಕಾನೂನು ಬಾಹಿರವೆಂದು ಅವರು ತಿಳಿಸಿದ್ದಾರೆ.

ನಮ್ಮ ಸಂವಿಧಾನವು ಸಾರ್ವಭೌಮತೆಯನ್ನು ಶಾಸಕಾಂಗಕ್ಕಾಗಲಿ, ಕಾರ್ಯಾಂಗಕ್ಕಾಗಲಿ ಹಾಗೂ ನ್ಯಾಯಾಂಗಕ್ಕಾಗಲಿ ನೀಡಲಿಲ್ಲ. ಬದಲಿಗೆ, ಈ ಅಧಿಕಾರವನ್ನು ದೇಶದ ಸಾಮಾನ್ಯ ಜನತೆಗೆ ನೀಡಲಾಗಿದೆ. ಹೀಗಾಗಿ ಜನವಿರೋಧಿಯಾದ ಯಾವುದೇ ಕಾನೂನು ದೇಶದಲ್ಲಿ ನೆಲೆಯೂರಲೂ ಸಾಧ್ಯವೇ ಇಲ್ಲವೆಂದು ಅವರು ತಿಳಿಸಿದ್ದಾರೆ.

ಪಂಚಾಯತ್ ವ್ಯಾಪ್ತಿಯಲ್ಲಿ ಹೋರಾಟ: ಕೇಂದ್ರ ಸರಕಾರ ಜಾರಿ ಮಾಡುತ್ತಿರುವ ಜನವಿರೋಧಿ ಕೃಷಿ ತಿದ್ದುಪಡಿ ಕಾಯ್ದೆಗಳು, ಜಾನುವಾರು ಹತ್ಯೆ ನಿಷೇಧ ಕಾಯ್ದೆ ಹೀಗೆ ಎಲ್ಲ ಅಪಾಯಕಾರಿ ಕಾನೂನುಗಳ ವಿರುದ್ಧ ರಾಜ್ಯದ ಪಂಚಾಯತ್ ಮಟ್ಟದಲ್ಲಿ ಅರಿವಿನ ಕಾರ್ಯಕ್ರಮಗಳನ್ನು ರೂಪಿಸಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವೀರಸಂಗಯ್ಯ ಮಾತನಾಡಿ, ರೈತ ಸಂಘಟನೆಗಳು ರಾಜ್ಯ ಸರಕಾರಕ್ಕೆ ಒಂದು ಲೀಟರ್ ಹಾಲಿನ ದರವನ್ನು 40 ರೂ.ಗೆ ಹೆಚ್ಚಿಸಿ, ಬಾಕಿಯಿರುವ 550 ಕೋಟಿ ರೂ. ಪ್ರೋತ್ಸಾಹ ಧನ ಬಿಡಗುಡೆ ಮಾಡಿಯೆಂದು ಹಲವು ಬಾರಿ ಮನವಿ ಮಾಡಿಕೊಂಡಿದ್ದೆವು. ಆದರೆ, ಸರಕಾರ ಹೈನುಗಾರಿಕೆಯನ್ನೇ ಸಂಪೂರ್ಣವಾಗಿ ನಿಷೇಧ ಮಾಡಲು ಎಲ್ಲ ರೀತಿಯ ಕಾರ್ಯತಂತ್ರಗಳು ರೂಪಿಸುತ್ತಿದೆ. ಅದರ ಮೊದಲ ಭಾಗವಾಗಿ ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಯನ್ನು ಜಾರಿ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರಕಾರದ ಅವಧಿಯು ರೈತರ ಪಾಲಿಗೆ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಹೀಗಾಗಿ ರೈತ ಸಮುದಾಯ ಕೃಷಿ ಹಾಗೂ ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಗಳ ಬಗ್ಗೆ ಸರಿಯಾದ ಅರಿವನ್ನು ಪಡೆದುಕೊಂಡು ಒಕ್ಕೊರಲಿನಿಂದ ಹೋರಾಟಕ್ಕೆ ಮುಂದಾಗಬೇಕೆಂದು ಅವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷೆ ಸಿರಿ ಗೌರಿ ಪ್ರಸ್ತಾವನೆ ಮಾಡಿದರು. ಆಹಾರ ತಜ್ಞ ಕೆ.ಸಿ.ರಘು, ವಿ.ಗಾಯತ್ರಿ ವಿಷಯ ಮಂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಹಿಸಿದ್ದರು.

ದೇಶದ ಜನತೆಗೆ ಇಂದಿಗೂ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ಬಿಜೆಪಿ ಸರಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಹೀಗಾಗಿ ಇವೆಲ್ಲ ಕಾಯ್ದೆಗಳನ್ನು ನ್ಯಾಯಾಲಯವು ರದ್ದುಪಡಿಸಿ ಅರಬಿ ಸಮುದ್ರಕ್ಕೆ ಎಸೆಯುವುದು ಖಚಿತ.

-ನ್ಯಾ.ಗೋಪಾಲಗೌಡ, ನಿವೃತ್ತ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X