ಉಡುಪಿ ಜಿಲ್ಲೆಯ 6 ಮಂದಿಯಲ್ಲಿ ಕೋವಿಡ್ ಸೋಂಕು ದೃಢ
ಉಡುಪಿ, ಜ.10: ರವಿವಾರ ಜಿಲ್ಲೆಯಲ್ಲಿ ಕೇವಲ 6 ಮಂದಿಯಲ್ಲಿ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದೆ. ದಿನದಲ್ಲಿ 9 ಮಂದಿ ಸೋಂಕಿ ನಿಂದ ಗುಣಮುಖರಾದರೆ, ಸದ್ಯ 99 ಮಂದಿ ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ನಾಲ್ವರು ಪುರುಷರು ಹಾಗೂ ಇಬ್ಬರು ಮಹಿಳೆಯರು. ಇವರಲ್ಲಿ ನಾಲ್ವರು ಉಡುಪಿ ತಾಲೂಕಿ ನವರು ಹಾಗೂ ಇಬ್ಬರು ಕಾರ್ಕಳ ತಾಲೂಕಿನರು. ಪಾಸಿಟಿವ್ ಬಂದ ತಲಾ ಇಬ್ಬರು ಪುರುಷ ಹಾಗೂ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ. ಇವರಲ್ಲಿ ಮೂವರು ಸೋಂಕಿತರು ಹೋಮ್ ಐಸೋಲೇಷನ್ನಲ್ಲಿದ್ದಾರೆ ಎಂದರು.
9 ಮಂದಿ ಗುಣಮುಖ: ಶನಿವಾರ ಜಿಲ್ಲೆಯ 9 ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿ ನಿಂದ ಮುಕ್ತಿ ಪಡೆದ ವರ ಸಂಖ್ಯೆ ಈಗ 22,907ಕ್ಕೇರಿದೆ. ಸದ್ಯ 99 ಮಂದಿ ಕೊೀವಿಡ್ಗೆ ಸಕ್ರಿಯರಿದ್ದಾರೆ ಎಂದರು.
2132 ಮಂದಿ ನೆಗೆಟಿವ್: ಶನಿವಾರ ಜಿಲ್ಲೆಯ ಒಟ್ಟು 2137 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 2132 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಐವರಲ್ಲಿ ಮಾತ್ರ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಇದುವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,195 ಆಗಿದೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಶನಿವಾರದವರೆಗೆ ಒಟ್ಟು 3,12,456 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,89,261 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 23,195 ಮಂದಿ ಈವರೆಗೆ ಪಾಸಿಟಿವ್ ಬಂದಿದ್ದರೆ, 22,907 ಮಂದಿ ಚೇತರಿಸಿಕೊಂಡಿದ್ದಾರೆ.
ಇಂದು ಸಹ ಜಿಲ್ಲೆಯಲ್ಲಿ ಕೋವಿಡ್ಗೆ ಯಾರೂ ಬಲಿಯಾಗಿಲ್ಲ. ಹೀಗಾಗಿ ಇಂದಿನವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 189 ಮಾತ್ರ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.