ಮಂಗಳೂರು, ಜ.10: ಅಂಬ್ಲಮೊಗರು ಗ್ರಾಮದ ಎಲ್ಯಾರ್ ನಿವಾಸಿ ಎ. ಮುಹಮ್ಮದ್ (59) ರವಿವಾರ ಅಪರಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವೃತ್ತಿಯಲ್ಲಿ ಕೃಷಿಕರಾಗಿದ್ದ ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಮೃತರು ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.