ಉಡುಪಿ: ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಗೆ ಚಾಲನೆ

ಉಡುಪಿ, ಜ.10: ಉಡುಪಿ ರಂಗಭೂಮಿ ಆಶ್ರಯದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾದ ದಿ.ಡಾ. ಟಿಎಂಎ ಪೈ, ದಿ.ಎಸ್.ಎಲ್.ನಾರಾಯಣ ಭಟ್ ಮತ್ತು ದಿ.ಮಲ್ಪೆ ಮಧ್ವ ರಾಜ್ ಸ್ಮಾರಕ 41ನೆ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಗೆ ಇಂದು ಚಾಲನೆ ನೀಡಲಾಯಿತು.
ಏಳು ದಿನಗಳ ಕಾಲ ನಡೆಯುವ ಈ ಸ್ಪರ್ಧೆಯನ್ನು ಉದ್ಘಾಟಿಸಿದ ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕಾ ಮಾತನಾಡಿ, ನಾಟಕ ಕಲೆಯು ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿದೆ. ನಾಟಕವು ಹೃದಯಕ್ಕೆ ಹತ್ತಿವಾದ ಕಲೆಯಾಗಿದೆ ಎಂದು ತಿಳಿಸಿದರು.
ಉದ್ಯಮಿಗಳಾದ ರತ್ನಕುಮಾರ್, ಸುರೇಶ್ ಪಿ.ಎಸ್. ಮುಖ್ಯ ಅತಿಥಿಗಳಾಗಿ ದ್ದರು. ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು. ರಂಗಭೂಮಿ ಉಪಾಧ್ಯಕ್ಷ ಎಂ.ನಂದಕುಮಾರ್ ಪ್ರಾಸ್ತಾವಿಕ ವಾಗಿ ಮಾತನಾಡಿದರು.
ಉಪಾಧ್ಯಕ್ಷ ಭಾಸ್ಕರ್ ರಾವ್ ಕಿದಿಯೂರು ಸ್ವಾಗತಿಸಿದರು. ಪ್ರಧಾನ ಕಾರ್ಯ ದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ತೀರ್ಪುಗಾರರ ಪರಿಚಯ ಮಾಡಿದರು. ಅಮೃತಾಂಜಲಿ ವಂದಿಸಿದರು. ಪೂರ್ಣಿಮಾ ಸುರೇಶ್ ಕಾರ್ಯಕ್ರಮ ನಿರೂ ಪಿಸಿದರು. ಬಳಿಕ ಕೋಲಾರ ಮಾಲೂರು ರಂಗ ವಿಜಯಾ ತಂಡ ದಿಂದ ‘ತೊರೆದು ಜೀವಿಸಬಹುದೇ...’ ನಾಟಕ ಪ್ರದರ್ಶನ ನಡೆಯಿತು.







