ಯುವ ಕಾಂಗ್ರೆಸ್ ಚುನಾವಣೆ ಪ್ರಕ್ರಿಯೆ ಆರಂಭ

ಬೆಂಗಳೂರು, ಜ. 10: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ ಪ್ರಕ್ರಿಯೆ ರವಿವಾರ ಆರಂಭಗೊಂಡಿದ್ದು, ಇನ್ನೆರಡು ದಿನಗಳ ಕಾಲ ಜರುಗಲಿದೆ.
ಬೆಂಗಳೂರು ದಕ್ಷಿಣ ಸೇರಿದಂತೆ 12 ಜಿಲ್ಲೆಗಳಲ್ಲಿ ಆನ್‍ಲೈನ್ ಮತದಾನದ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಸೋಮವಾರ ಬೆಂಗಳೂರು ಕೇಂದ್ರ ಸೇರಿದಂತೆ 11 ಜಿಲ್ಲೆಗಳಲ್ಲಿ ನಡೆಯಲಿದ್ದು, ಜ.12ರಂದು ಬೆಂಗಳೂರು ಗ್ರಾಮಾಂತರ ಸೇರಿ 14 ಜಿಲ್ಲೆಗಳಲ್ಲಿ ಈ ಚುನಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿರಲಿದೆ ಎಂದು ತಿಳಿದುಬಂದಿದೆ.
2020-21ನೇ ಚುನಾವಣೆಯು ಆನ್‍ಲೈನ್ ಆ್ಯಪ್ ಮೂಲಕ ನಡೆಯುತ್ತಿದ್ದು, ಬೆಳಗ್ಗೆ 9ರಿಂದ ಸಂಜೆ 4ಗಂಟೆವರೆಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಎನ್‍ಎಸ್‍ಯುಐ ರಾಜ್ ಘಟಕದ ಅಧ್ಯಕ್ಷರಾಗಿದ್ದ ಎಚ್.ಎಸ್ ಮಂಜುನಾಥ್, ಶಾಸಕ ಎನ್.ಎ.ಹಾರೀಸ್ ಪುತ್ರ ಮುಹಮ್ಮದ್ ನಲಪಾಡ್, ಮಾಜಿ ಸಚಿವ ಎಂ.ಆರ್.ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಅಧ್ಯಕ್ಷ ಸ್ಥಾನದ ಕಣದಲ್ಲಿದ್ದಾರೆ.
Next Story





