Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾ.ಪಂ ಸದಸ್ಯರ ಗೌರವಧನ ಏರಿಕೆಯಾಗಲಿ:...

ಗ್ರಾ.ಪಂ ಸದಸ್ಯರ ಗೌರವಧನ ಏರಿಕೆಯಾಗಲಿ: ಸಚಿವ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ11 Jan 2021 11:40 PM IST
share
ಗ್ರಾ.ಪಂ ಸದಸ್ಯರ ಗೌರವಧನ ಏರಿಕೆಯಾಗಲಿ: ಸಚಿವ ಶ್ರೀನಿವಾಸ ಪೂಜಾರಿ

ಮಡಿಕೇರಿ ಜ.11 : ಗ್ರಾಮ ಪಂಚಾಯತ್ ಸದಸ್ಯರಿಗೆ ನೀಡುವ ಗೌರವಧನವನ್ನು 2 ಸಾವಿರ ರೂ.ಗಳಿಗೆ ಏರಿಕೆ ಮಾಡಬೇಕು ಎಂದು ರಾಜ್ಯ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಲಹೆ ನೀಡಿದ್ದಾರೆ.

ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಜನಸೇವಕ್ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ ಗೌರವಧನ ಜಾರಿ ಮಾಡಿದ ಕೀರ್ತಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಅಂದು 250 ರೂ.ಗಳಿಂದ ಆರಂಭವಾದ ಗೌರವಧನದ ಮೊತ್ತ ಇದೀಗ ಒಂದು ಸಾವಿರ ರೂ.ಗಳಿಗೆ ಏರಿಕೆಯಾಗಿದೆ. ಆದರೆ ಇಂದಿನ ಪರಿಸ್ಥಿತಿಯಲ್ಲಿ ಅವರಿಗೆ ನೀಡಲಾಗುವ ಗೌರವಧನ ಅತ್ಯಲ್ಪವಾಗಿದ್ದು, ಇದನ್ನು ಕನಿಷ್ಠ 2 ಸಾವಿರ ರೂ.ಗಳಿಗೆ ಏರಿಸುವಂತಾಗಬೇಕು. ಆ ಮೂಲಕ ಗ್ರಾ.ಪಂ.ಸದಸ್ಯರು ಆತ್ಮಸ್ಥೈರ್ಯದಿಂದ ತಮ್ಮ ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ನಿಭಾಯಿಸಲು ಅನುಕೂಲ ಮಾಡಿಕೊಡಬೇಕು ಎಂದು ಅವರು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಲ್ಲಿ ಮನವಿ ಮಾಡಿದರು.

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವ ಹೊಣೆಗಾರಿಕೆ ಗ್ರಾ.ಪಂ.ಗೆ ಆಯ್ಕೆಯಾದ ಬಿಜೆಪಿ ಬೆಂಬಲಿತ ಸದಸ್ಯರ ಮೇಲಿದೆ ಎಂದು ತಿಳಿಸಿದ ಅವರು, ಇದಕ್ಕಾಗಿ ಈಗಿನಿಂದಲೇ ಯೋಜನೆ ರೂಪಿಸುವಂತೆ ಕಿವಿಮಾತು ಹೇಳಿದರು.

ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳು ಮೀಸಲಾತಿಯಡಿ ಲಾಟರಿ ಮೂಲಕ ಆಯ್ಕೆಯಾಗುವುದರಿಂದ ಯಾವುದೇ ಸದಸ್ಯರು ಅಧಿಕಾರಕ್ಕಾಗಿ ಒತ್ತಡ ಹೇರದಿರಿ ಎಂದು ಕಿವಿಮಾತು ಹೇಳಿದ ಶ್ರೀನಿವಾಸ ಪೂಜಾರಿ ಅವರು, ಮೀಸಲಾತಿ ಯಾವುದೇ ಬಂದರೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಗ್ರಾ.ಪಂ. ಸದಸ್ಯರ ಮೂಲಕವೇ ಮುಂದಿನ ಜಿ.ಪಂ. ಹಾಗೂ ತಾ.ಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿದ್ದು, ಅದಕ್ಕಾಗಿ ಇಂದಿನಿಂದಲೇ ಸಿದ್ಧತೆ ಮಾಡಬೇಕು ಎಂದು ಸಲಹೆ ಮಾಡಿದರು.

ಜನರ ಭಾವನೆಗಳಿಗೆ ಸ್ಪಂದಿಸಿ ಕೆಲಸ ಮಾಡಿದಾಗ ಗ್ರಾಮ ಪಂಚಾಯತ್‍ನ್ನು ಗ್ರಾಮ ಸರಕಾರವನ್ನಾಗಿ ಮಾಡಲು ಸಾಧ್ಯವಿದೆ ಎಂದು ಹೇಳಿದ ಅವರು, ಕೆ.ಎಸ್.ಈಶ್ವರಪ್ಪ ಅವರು ಗ್ರಾಮೀಣ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅದನ್ನು ಸಾಕಾರ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕೃಷಿ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಮಾತನಾಡಿ, ಬಿಜೆಪಿ ಕಾರ್ಯಕರ್ತರನ್ನು ಆಧರಿತ ಪಕ್ಷವಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಸುಭದ್ರ ಸರಕಾರ ರಚನೆಗೆ ಮುಂದಾಗಬೇಕು. ಬಿಜೆಪಿ ರೈತರ ಪರವಾದ ಪಕ್ಷವಾಗಿದ್ದು, ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಗಳು ಹಾಗೂ ರಾಜ್ಯ ಸರಕಾರ ಜಾರಿಗೆ ತಂದಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳು ರೈತರ ಪರವಾದ ಕಾಯ್ದೆಗಳಾಗಿವೆ. ರೈತರ ಜೀವನದಲ್ಲಿ ಬದಲಾವಣೆ ತರುವುದೇ ಈ ಕಾಯ್ದೆಗಳ ಮುಖ್ಯ ಉದ್ದೇಶವಾಗಿದ್ದು, ದೇಶದ ಜನಸಂಖ್ಯೆ ಶೇ.48ರಷ್ಟಿರುವ ರೈತರನ್ನು ಕಡೆಗಣಿಸಿದ ಪರಿಣಾಮವಾಗಿಯೇ ಇಂದು ದೇಶ ಇಂತಹ ಸ್ಥಿತಿಗೆ ತಲುಪಿದೆ ಎಂದು ಹೇಳಿದರು. ವಿಪಕ್ಷಗಳು ಕಾಯ್ದೆಗಳ ಬಗ್ಗೆ ಜನರಲ್ಲಿ ಗೊಂದಲ ಮೂಡಿಸುತ್ತಿದ್ದು, ಗ್ರಾ.ಪಂ.ಗೆ ಆಯ್ಕೆಯಾದ ಸದಸ್ಯರು ಈ ಕಾಯ್ದೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವಂತಾಗಬೇಕು ಎಂದು ಹೇಳಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಹಿಂದೆ ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ಚಿಂತಾಜನಕವಾಗಿತ್ತು. ಗ್ರಾಮೀಣ ಪ್ರದೇಶದ ಜನತೆ ವಾಹನ ಸೌಕರ್ಯ ಪಡೆಯಬೇಕಾದರೆ ತಮ್ಮ ಪಕ್ಕದ ಪಟ್ಟಣಗಳಿಗೆ ನಡೆದು ಹೋಗಬೇಕಾದ ಸ್ಥಿತಿ ಇತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ದೇಶವನ್ನಾಳುವ ಪ್ರಧಾನಿ ನರೇಂದ್ರ ಮೋದಿ ಅವರು, ಗ್ರಾಮೀಣ ಜನತೆಯ ಸಂಕಷ್ಟವನ್ನು ಅರಿತು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರ ಪರಿಣಾಮವಾಗಿ ಎಲ್ಲಾ ಗ್ರಾಮಗಳಿಗೂ ಸಂಪರ್ಕ ರಸ್ತೆಗಳಾಗಿವೆ. ಮನೆಮನೆಗೂ ಶೌಚಾಲಯ, ವಿದ್ಯುತ್, ಕುಡಿಯುವ ನೀರಿನ ಸೌಲಭ್ಯಗಳಾಗುತ್ತಿವೆ. ಹಿಂದೆ ಒಂದು ಲಕ್ಷ ರೂ.ಕೂಡಾ ಅನುದಾನ ಪಡೆಯದ ಪಂಚಾಯತ್‍ಗಳು ಇಂದು ಒಂದು ಕೋಟಿ ರೂ.ಗಳ ಅನುದಾನ ಪಡೆಯುವಂತಾಗಿದೆ. ಹಳ್ಳಿಯ ಚಿತ್ರಣವನ್ನು ಮೋದಿಯವರು ಅರಿತಿರುವುದರಿಂದಲೇ ಇದೆಲ್ಲ ಸಾಧ್ಯವಾಗಿದೆ ಎಂದು ಹೇಳಿದರು.

ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಗ್ರಾ.ಪಂ.ಚುನಾವಣೆಯಲ್ಲಿ ಜನತೆ ನಿರೀಕ್ಷೆಗೂ ಮೀರಿ ಬಿಜೆಪಿಗೆ ಆಶೀರ್ವಾದ ಮಾಡಿದ್ದು, ಇದರಿಂದ ನಮ್ಮೆಲ್ಲರ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಯಕ್ರಮಗಳು ಗ್ರಾಮ ಪಂಚಾಯತ್‍ಗಳ ಮೂಲಕ ಅನುಷ್ಠಾನವಾಗುವ ವಿಶ್ವಾಸದಿಂದ ಜನರು ಬಿಜೆಪಿಯನ್ನು ಬೆಂಬಲಿಸಿದ್ದು, ಜನರ ಪ್ರೀತಿ-ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕೆಲಸ ಮಾಡಬೇಕು ಎಂದು ಗ್ರಾ.ಪಂ. ಸದಸ್ಯರಿಗೆ ಸಲಹೆ ಮಾಡಿದರು.

ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಗ್ರಾ.ಪಂ.,ಸದಸ್ಯರಾದವರು ತಾವು ಗ್ರಾಮದ ಪ್ರಥಮ ಸೇವಕರು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಅದನ್ನು ಬಿಟ್ಟು ಅಧಿಕಾರ ಮದ ಏರಿಸಿಕೊಂಡರೆ ಮುಂದೆ ಭಾರೀ ನಷ್ಟ ಅನುಭವಿಸಬೇಕಾಗುತ್ತದೆ. ಜನರ ಕೆಲಸ ಕಾರ್ಯಗಳನ್ನು ನಗುಮೊಗದಿಂದಲೇ ಮಾಡಿಕೊಡಿ, ಕಾಮಗಾರಿಗಳು ನಡೆಯುವಾಗ ಸ್ಥಳದಲ್ಲಿದ್ದು, ಗುಣಮಟ್ಟವನ್ನು ಕಾಪಾಡುವುದರ ಜೊತೆಗೆ ಆ ಕಾಮಗಾರಿಯ ಬಗ್ಗೆ ಜನತೆಗೆ ತಿಳಿಸುವ ಕೆಲಸವಾಗಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಮಾತನಾಡಿ, ಗ್ರಾ.ಪಂ. ಸದಸ್ಯರ ಗೌರವಧನವನ್ನು ಹೆಚ್ಚಿಸುವುದರ ಜೊತೆಗೆ ಗ್ರಾ.ಪಂ.ಗಳಿಗೆ ನೀಡುವ ಅನುದಾನವನ್ನೂ ಹೆಚ್ಚಿಸುವಂತಾಗಬೇಕು ಎಂದು ಸಚಿವ ಈಶ್ವರಪ್ಪ ಅವರಲ್ಲಿ ಮನವಿ ಮಾಡಿದರು.

ಪಕ್ಷದ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ.ಹರೀಶ್, ಪಶ್ಚಿಮಘಟ್ಟ ಸಂರಕ್ಷಣಾ ಪಡೆ ಸಮಿತಿಯ ಅಧ್ಯಕ್ಷ ರವಿಕುಶಾಲಪ್ಪ, ಉದಯಕುಮಾರ್ ಶೆಟ್ಟಿ ಮತ್ತಿತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X