Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಗ್ರಾಮ ಪಂಚಾಯತ್‍ಗಳಿಗೆ,...

ಕಾಂಗ್ರೆಸ್ ಗ್ರಾಮ ಪಂಚಾಯತ್‍ಗಳಿಗೆ, ಸದಸ್ಯರಿಗೆ ಮೌಲ್ಯವೇ ಇಲ್ಲದಂತೆ ಮಾಡಿತ್ತು: ಸಚಿವ ಈಶ್ವರಪ್ಪ

ಮಡಿಕೇರಿಯಲ್ಲಿ ಜನಸೇವಕ್ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ11 Jan 2021 11:47 PM IST
share
ಕಾಂಗ್ರೆಸ್ ಗ್ರಾಮ ಪಂಚಾಯತ್‍ಗಳಿಗೆ, ಸದಸ್ಯರಿಗೆ ಮೌಲ್ಯವೇ ಇಲ್ಲದಂತೆ ಮಾಡಿತ್ತು: ಸಚಿವ ಈಶ್ವರಪ್ಪ

ಮಡಿಕೇರಿ, ಜ.11: ಸರಕಾರ ಗ್ರಾಮೀಣ ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪ್ರತೀ ಪಂಚಾಯತ್‍ಗೆ ತಲಾ ಒಂದು ಕೋಟಿ ರೂ.ಗಳಷ್ಟು ಅನುದಾನವನ್ನು ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿ ಗ್ರಾ.ಪಂ ಗಳನ್ನು ಸ್ಥಳೀಯ ಸರಕಾರವನ್ನಾಗಿ ಮಾರ್ಪಡಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಜನಸೇವಕ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯವನ್ನು ಆಳಿದ ಕಾಂಗ್ರೆಸ್ ಇಷ್ಟು ವರ್ಷಗಳಲ್ಲಿ ಗ್ರಾಮ ಪಂಚಾಯತ್‍ಗಳಿಗೆ ಹಾಗೂ ಸದಸ್ಯರಿಗೆ ಮೌಲ್ಯವೇ ಇಲ್ಲದಂತೆ ಮಾಡಿತ್ತು ಎಂದು ಟೀಕಿಸಿದರು.

ಗ್ರಾಮ ಪಂಚಾಯತ್‍ಗೆ ಆಯ್ಕೆಯಾದ ಸದಸ್ಯರು ಗ್ರಾಮೀಣ ಜನರ ಭಾವನೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದರೊಂದಿಗೆ ಗ್ರಾಮ ಪಂಚಾಯತ್‍ಗಳನ್ನು ಮಾದರಿ ಗ್ರಾಮ ಪಂಚಾಯತ್‍ಗಳನ್ನಾಗಿ ಮಾಡಬೇಕು ಎಂದರು.

ಗ್ರಾಮೀಣ ಪ್ರದೇಶದಲ್ಲಿ ಜನರ ಕೆಲಸಗಳನ್ನು ಮಾಡಿಕೊಡಲು ಪಂಚಾಯತ್‍ಗಳಲ್ಲಿ ವಿದ್ಯುತ್ ಸಮಸ್ಯೆ ಅಡ್ಡಯಾಗುತ್ತಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯದ ಎಲ್ಲಾ ಪಂಚಾಯತ್‍ಗಳಿಗೆ ಸೋಲಾರ್ ಅಳವಡಿಸಲು 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ ಅವರು, ಸ್ವಚ್ಛಭಾರತ್ ಯೋಜನೆಯಡಿ ಪ್ರತೀ ಪಂಚಾಯತ್‍ಗಳಿಗೆ ತಲಾ 20 ಲಕ್ಷ ರೂ.ಗಳನ್ನು ಕೇಂದ್ರ ಸರಕಾರ ಬಿಡುಗಡೆ ಮಾಡುತ್ತಿದೆ. ಆದರೆ 6 ಸಾವಿರ ಗ್ರಾಮ ಪಂಚಾಯತ್‍ಗಳ ಪೈಕಿ ಕೇವಲ 1500 ಗ್ರಾ.ಪಂ.ಗಳು ಮಾತ್ರ ಈ ಯೋಜನೆಯ ಸದುಪಯೋಗಪಡೆದುಕೊಂಡಿದ್ದು, ಉಳಿದ 4500 ಪಂಚಾಯತ್‍ಗಳಿಗೆ ಇದು ಸಾಧ್ಯವಾಗಿಲ್ಲವೇಕೆ ಎಂದು ಪ್ರಶ್ನಿಸಿದರು.

ಜನಪ್ರತಿನಿಧಿಗಳಾಗಿ ಆಯ್ಕೆಯಾದ ಗ್ರಾ.ಪಂ.ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಆಗಬೇಕಾಗಿರುವ ಕೆಲಸಗಳ ಬಗ್ಗೆ ಸಮಗ್ರವಾದ ಯೋಜನೆಯನ್ನು ರೂಪಿಸಿಕೊಂಡು ಮುಂದಿನ ಐದು ವರ್ಷಗಳಲ್ಲಿ ಪಂಚಾಯತ್‍ಗಳನ್ನು ಮಾದರಿ ಪಂಚಾಯತ್‍ಗಳನ್ನಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದ ಅವರು, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರನ್ನು ಆಯ್ಕೆ ಮಾಡಿದ ಜನರೇ ಗ್ರಾ.ಪಂ.ಸದಸ್ಯರನ್ನೂ ಆಯ್ಕೆ ಮಾಡಿರುವುದರಿಂದ ತಾವುಗಳು ಗ್ರಾ.ಪಂ.ಗಳನ್ನು ಸ್ಥಳೀಯ ಸರಕಾರಗಳನ್ನಾಗಿ ರೂಪಿಸಬೇಕು ಎಂದು ಸಲಹೆ ಮಾಡಿದರು.

ಬಿಜೆಪಿ ನುಡಿದಂತೆ ನಡೆಯುವ ಪಕ್ಷವಾಗಿದ್ದು, ಯಾವುದೇ ಕಾರಣಕ್ಕೂ ಮತದಾರರಿಗೆ ಸುಳ್ಳು ಭವರವಸೆಗಳನ್ನು ನೀಡದಿರಿ ಎಂದು ಹೇಳಿದ ಅವರು, ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಅನುದಾನವನ್ನು ಬಳಸಿಕೊಂಡು ಮಾಡಬಹುದಾದ ಅಭಿವೃದ್ಧಿ ಕೆಲಸಗಳನ್ನು ಮಾತ್ರ ಮಾಡಿಕೊಡುವ ಭರವಸೆ ನೀಡಬೇಕೆಂದು ಕಿವಿಮಾತು ಹೇಳಿದರು.

ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳನ್ನು ಶೇ.100ರಷ್ಟು ಗೆಲ್ಲಿಸುವ ಹೊಣೆಗಾರಿಗೆ ಗ್ರಾ.ಪಂ. ಸದಸ್ಯರ ಮೇಲಿದ್ದು, ಸದಸ್ಯರು ಪಕ್ಷ ಮತ್ತು ಕಾರ್ಯಕರ್ತರ ನಡುವಿನ ಕೊಂಡಿಯಂತೆ ಕಾರ್ಯನಿರ್ವಹಿಸಬೇಕು ಎಂದು ಈಶ್ವರಪ್ಪ ನುಡಿದರು.

ಬಿಜೆಪಿ ಸ್ಥಾಪನೆಯಾದಾಗ ಪಕ್ಷಕ್ಕೆ ಯಾವುದೇ ಅಧಿಕಾರವಿರಲಿಲ್ಲ. ಆದರೆ ರಾಮಮಂದಿರ ನಿರ್ಮಾಣ, ಆರ್ಟಿಕಲ್ 370ರ ರದ್ದತಿ, ಗೋಹತ್ಯೆ ನಿಷೇಧ ಮುಂತಾದ ವಿಷಯಗಳ ಬಗ್ಗೆ ಅಂದೇ ಪಕ್ಷ ತನ್ನ ಅಜೆಂಡಾವನ್ನಾಗಿಸಿತ್ತು. ಆದರೆ ವಿರೋಧ ಪಕ್ಷಗಳು ಇವೆಲ್ಲವೂ ರಾಜಕೀಯಕ್ಕಾಗಿ ನೀಡುವ ಭರವಸೆಗಳೆಂದು ಲೇವಡಿ ಮಾಡಿದ್ದವು. ಆದರೆ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ತಾನು ಹೇಳಿದಂತೆ ನಡೆದುಕೊಳ್ಳುತ್ತಿದೆ. ಇದರಿಂದಾಗಿಯೇ ಇಂದು ಗ್ರಾಮ ಮಟ್ಟದದಿಂದ ಲೋಕಸಭೆಯವರೆಗೂ ಮತದಾರರು ಆಶೀರ್ವಾದ ಮಾಡುತ್ತಿದ್ದಾರೆ. ಜನರ ಈ ಪ್ರೀತಿ, ವಿಶ್ವಾಸವನ್ನು ಉಳಿಸುವ ಕೆಲಸವನ್ನು ಪಕ್ಷದಿಂದ ಆಯ್ಕೆಯಾದ ಜನಪ್ರತಿನಿಧಿಗಳು ಮಾಡಬೇಕು ಎಂದು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X