ಕೇಂದ್ರ ಸರಕಾರದ ವಿರುದ್ಧ ಎನ್‌ಎಸ್‌ಯುಐ ಪ್ರತಿಭಟನೆ

ಮಂಗಳೂರು, ಜ.12: ಕೇಂದ್ರ ಸರ್ಕಾರದ ನಿರುದ್ಯೋಗ ಹೆಚ್ಚಳದ ವಿರುದ್ಧ ರಾಷ್ಟ್ರೀಯ ಯುವ ದಿನದ ಹಿನ್ನೆಲೆಯಲ್ಲಿ ಎನ್‌ಎಸ್‌ಯುಐ ದ.ಕ.ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ಎನ್‌ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಮಾತನಾಡಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಇಂದು ಯುವಕರನ್ನು ವಂಚಿಸಿದ್ದು, ಮುಂದಿನ ಚುನಾವಣೆ ಯಲ್ಲಿ ವಿದ್ಯಾರ್ಥಿಗಳು, ಯುವಕರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದೆ ಎಂದರು.
ಈ ಸಂದರ್ಭ ಶೌನಕ್ ರೈ, ವಿನಯ್, ಶೇಖ್ ಅಫ್ಸಾನ್, ಅಂಕುಶ್ ರೈ, ಶಫೀಕ್, ಹಬೀಬ್ ಮ್ಯಾಕ್, ಸುನೀಲ್, ಕೌಶಿಕ್, ಶಾದ್ ಮತ್ತಿತರರು ಉಪಸ್ಥಿತರಿದ್ದರು.
Next Story





