Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಡಿಯೂರಪ್ಪ ನಮ್ಮ ಪಕ್ಷದ ಶಾಸಕರನ್ನು...

ಯಡಿಯೂರಪ್ಪ ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅಧಿಕಾರ ಅನುಭವಿಸುತ್ತಿದ್ದಾರೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ13 Jan 2021 4:55 PM IST
share
ಯಡಿಯೂರಪ್ಪ ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅಧಿಕಾರ ಅನುಭವಿಸುತ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು, ಜ.13: ಎಚ್. ವಿಶ್ವನಾಥ್ ಅವರು ತಮಗೆ ಲೋಕಸಭೆಗೆ ಟಿಕೆಟ್ ಕೊಡಿಸಿದ್ದು, 2008ರಲ್ಲಿ ವಿಧಾನಸಭೆಗೆ ಟಿಕೆಟ್ ಕೊಡಿಸಿದ್ದು ಯಾರು ಎಂಬುದನ್ನು ನೆನಪು ಮಾಡಿಕೊಂಡು ಹೇಳಲಿ, ಆ ಮೇಲೆ ನನ್ನ ವಿರುದ್ಧ ಮಾತನಾಡಲಿ. ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ ಯಡಿಯೂರಪ್ಪ ಅವರೂ ಇವರನ್ನು ಮಂತ್ರಿ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸುಪ್ರೀಂಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರಿಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ಅವರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥ. ಕಳೆದ 48 ದಿನಗಳಿಂದ ದಿಲ್ಲಿಯಲ್ಲಿ ರೈತರು ಮಳೆ, ಚಳಿ, ಹಸಿವು ಯಾವುದನ್ನೂ ಲೆಕ್ಕಿಸದೆ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ ನರೇಂದ್ರ ಮೋದಿ ಅವರ ಹಠಮಾರಿ ಧೋರಣೆಯೇ ರೈತರ ಎಲ್ಲ ಕಷ್ಟ-ನಷ್ಟಗಳಿಗೆ ನೇರ ಕಾರಣ ಎಂದು ಆರೋಪಿಸಿದರು.

ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ಪೂರ್ತಿ ವರ್ಷ ಮುಖ್ಯಮಂತ್ರಿಯಾಗಿದ್ದಾರಾ? ಎಂದು ಪ್ರಶ್ನಿಸಿದರು.

ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಅಂತನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೋಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಸಂಸ್ಕೃತಿ, ಆಹಾರ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು. ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ ಎಂದು ಅವರು ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಹೆಚ್. ವಿಶ್ವನಾಥ್ ಅವರು ತಮಗೆ ಲೋಕಸಭೆಗೆ ಟಿಕೆಟ್ ಕೊಡಿಸಿದ್ದು, 2008ರಲ್ಲಿ ವಿಧಾನಸಭೆಗೆ ಟಿಕೆಟ್ ಕೊಡಿಸಿದ್ದು ಯಾರು ಎಂಬುದನ್ನು ನೆನಪು ಮಾಡಿಕೊಂಡು ಹೇಳಲಿ, ಆ ಮೇಲೆ ನನ್ನ ವಿರುದ್ಧ ಮಾತನಾಡಲಿ. ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ @BSYBJP ಅವರೂ ಇವರನ್ನು ಮಂತ್ರಿ ಮಾಡಿಲ್ಲ. 1/6#Mysuru

— Siddaramaiah (@siddaramaiah) January 13, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X