Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವ್ಯಾಕ್ಸಿನ್ ಲಸಿಕೆಯ 20 ಸಾವಿರ...

ಕೋವ್ಯಾಕ್ಸಿನ್ ಲಸಿಕೆಯ 20 ಸಾವಿರ ಡೋಸ್‍ಗಳು ರಾಜ್ಯಕ್ಕೆ ಬರಲಿವೆ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ13 Jan 2021 8:15 PM IST
share
ಕೋವ್ಯಾಕ್ಸಿನ್ ಲಸಿಕೆಯ 20 ಸಾವಿರ ಡೋಸ್‍ಗಳು ರಾಜ್ಯಕ್ಕೆ ಬರಲಿವೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜ.13: ಕೋವ್ಯಾಕ್ಸಿನ್ ಲಸಿಕೆಯ 20 ಸಾವಿರ ಡೋಸ್‍ಗಳು ರಾಜ್ಯಕ್ಕೆ ಬರಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವ್ಯಾಕ್ಸಿನ್‍ನ ಒಂದು ವೈಲ್‍ನಲ್ಲಿ 10 ಎಂಎಲ್ ಲಸಿಕೆ ಇದೆ. ಕೋವಿಶೀಲ್ಡ್ ನ ಒಂದು ವೈಲ್‍ನಲ್ಲಿ 5 ಎಂಎಲ್ ಇದೆ. ಕೋವ್ಯಾಕ್ಸಿನ್‍ನ ಒಂದು ವೈಲ್‍ನಿಂದ 20 ಮಂದಿಗೆ ಲಸಿಕೆ ನೀಡಬಹುದು. ಎರಡು ಲಸಿಕೆಗಳ ನಡುವೆ ಇರುವ ವ್ಯತ್ಯಾಸ ಇಷ್ಟೇ. ರಾಜ್ಯದಲ್ಲಿ ಇವೆರಡೂ ಲಸಿಕೆಗಳನ್ನು ನೀಡಲಾಗುವುದು. ಆದರೆ ಲಸಿಕೆ ಪಡೆಯುವವರು ಯಾವ ಲಸಿಕೆ ಬೇಕೆಂದು ಕೇಳುವಂತಿಲ್ಲ ಎಂದರು.

ಯಾವ ಜಿಲ್ಲೆಗಳಿಗೆ ಎಷ್ಟು ಲಸಿಕೆ ನೀಡಬೇಕು, ಯಾವ ಸಿಬ್ಬಂದಿಗೆ ನೀಡಬೇಕು ಮೊದಲಾದವುಗಳ ಬಗ್ಗೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಜನವರಿ 16ರಿಂದ ಲಸಿಕೆ ವಿತರಣೆ ಆರಂಭಿಸುವುದಕ್ಕೆ ಸಿದ್ಧತೆಯಾಗಿ ಎಲ್ಲ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಮಾಡಲಾಗುತ್ತಿದೆ ಎಂದು ಸುಧಾಕರ್ ತಿಳಿಸಿದರು.

ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ ಸಚಿವರಿಗೆ ಶುಭಾಶಯ ತಿಳಿಸುತ್ತೇನೆ. ಕೊನೆ ಗಳಿಗೆಯಲ್ಲಿ ಕೆಲವರಿಗೆ ಸಂಪುಟಕ್ಕೆ ಸೇರಲು ಸಾಧ್ಯವಾಗಿಲ್ಲ. ಅಂತಹವರಿಗೆ ಸೂಕ್ತ ಸಮಯದಲ್ಲಿ ಪಕ್ಷ ಉತ್ತಮ ಅವಕಾಶ ನೀಡಲಿದೆ. ನಮ್ಮ ಸರಕಾರ ಪಾರದರ್ಶಕವಾಗಿ ಕೆಲಸ ಮಾಡಲಿದ್ದು, ಎಲ್ಲ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಕೆಲಸ ಮಾಡಲಿದೆ ಎಂದು ಅವರು ಹೇಳಿದರು.

ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾದಾಗ ಅಸಮಾಧಾನ ಸಹಜ. ಅದು ಪ್ರಜಾಪ್ರಭುತ್ವ ವ್ಯವಸ್ಥೆಯ ಒಂದು ಭಾಗ ಎಂದ ಅವರು, ಎಲ್ಲ ಬಿಜೆಪಿ ಶಾಸಕರು ಒಗ್ಗಟ್ಟಾಗಿದ್ದಾರೆ. ಯಾರೂ ಗುಂಪುಗಾರಿಕೆ ಮಾಡುತ್ತಿಲ್ಲ. ಪಕ್ಷದ ಕೆಳಗೆ ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂದು ಹೇಳಿದರು.

ನೋಟಿಸ್ ಅಲ್ಲ, ಮನವಿ: ಚಿತ್ರನಟ ಯಶ್ ಬಹಳ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಅವರ ಮೇಲೆ ನನಗೂ ಅಭಿಮಾನವಿದೆ. ಯಶ್ ಅವರ ಹೊಸ ಸಿನಿಮಾ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯಿಂದ ಯಶ್ ಅವರಿಗೆ ಮನವಿ ಮಾಡಲಾಗಿದೆ. ಆದರೆ ಇದು ನೋಟಿಸ್ ಅಲ್ಲ. ಚಿತ್ರದಲ್ಲಿ ಸಿಗರೇಟು ಸೇದುವ ದೃಶ್ಯ ಇದೆ ಎಂದು ಕೇಳಿದ್ದೇನೆ. ಈ ದೃಶ್ಯವನ್ನು ತೆಗೆದುಹಾಕಿದರೆ ಸಮಾಜಕ್ಕೆ ಅನುಕೂಲ ಎಂದು ಮನವಿ ಮಾಡಲಾಗಿದೆ. ಯಶ್ ಅವರ ಅಭಿಮಾನಿಗಳಲ್ಲಿ ಅನೇಕ ಯುವಜನರು ಇದ್ದಾರೆ. ಇದು ಎಲ್ಲ ಚಿತ್ರಗಳಿಗೂ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X