ಬ್ರೈಲ್ಕಿಟ್ ವಿತರಿಸಲು ಅರ್ಜಿ ಆಹ್ವಾನ
ಮಂಗಳೂರು, ಜ.13: ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸೆಸೆಲ್ಸಿ ಹಾಗೂ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿಕಲಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್ ಹಾಗೂ ಇನ್ನಿತರ ಸಾಧನಗಳನ್ನು ಒಳಗೊಂಡ ಬ್ರೈಲ್ಕಿಟ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಜ.27ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಪಂ ಕಟ್ಟಡ, ಅಶೋಕನಗರ ಅಂಚೆ, ಕೊಟ್ಟಾರ, ಮಂಗಳೂರು ದೂ.ಸಂ.: 0824-2458173ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story