Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಿಪ್ಪರಲಾಗ ಹಾಕಿದರೂ ಇನ್ನು ಬಿಜೆಪಿ...

ತಿಪ್ಪರಲಾಗ ಹಾಕಿದರೂ ಇನ್ನು ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ13 Jan 2021 10:17 PM IST
share
ತಿಪ್ಪರಲಾಗ ಹಾಕಿದರೂ ಇನ್ನು ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ಜ.13: ರಾಜ್ಯದಲ್ಲಿ ನಡೆದ ಗ್ರಾ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಶೇ.70 ರಷ್ಟು ಗೆದ್ದಿದ್ದು, ಮುಂದೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಕಾರ್ಯಕರ್ತರು ಧೃತಿಗೆಡಬೇಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಭರವಸೆ ನೀಡಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬುಧವಾರ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ, ವರುಣಾ ವಿಧಾನಸಭಾ ಕ್ಷೇತ್ರದ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಅಭಿನಂದನಾ ಸಮಾರಂಭ “ಗ್ರಾಮ ಜನಾಧಿಕಾರ ಸನ್ಮಾನ” ಸಮಾರಂಭ ಉದ್ಘಾಟಿಸಿ ನಂತರ ಅವರು ಮಾತನಾಡಿದರು.

ರಾಜ್ಯದಲ್ಲಿ ಶೇ.70 ರಷ್ಟು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿಯವರು ಶೇ.60 ರಷ್ಟು ಆಯ್ಕೆಯಾಗಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ನಾನು ಯಡಿಯೂರಪ್ಪ ಅವರನ್ನು ನಾಲ್ಕು ಬಾರಿ ಕರೆದಿದ್ದೇನೆ. ಎಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಬಿಜೆಪಿ ಬೆಂಬಲಿತರು ಗೆದ್ದಿದ್ದಾರೆ ಎಂದು ತಿಳಿಸಿ ಎಂದು. ಆದರೆ ಅವರು ಇದುವರೆಗೂ ನನ್ನ ಮಾತಿಗೆ ಉತ್ತರ ಕೊಟ್ಟಿಲ್ಲ ಎಂದು ಕಿಡಿಕಾರಿದರು.

ಬಿಜೆಪಿಯವರು ಮೀಸಲಾತಿ ವಿರೋಧಿಗಳು. ಬಿಜೆಪಿಯವರು ಯಾವತ್ತು ಮೀಸಲಾತಿ ಪರ ಇಲ್ಲ. ಅಂತಹವರಿಗೆ ಮಣೆ ಹಾಕಬೇಡಿ. ಮುಂದೆ ತಿಪ್ಪರಲಾಗ ಹಾಕಿದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ನಾನು ಹಣಕಾಸಿನ ಮಂತ್ರಿಯಾಗಿದ್ದಾಗ ಮಹಿಳೆಯರಿಗೆ ಮೀಸಲಾತಿ ತಂದಿದ್ದೆ. ಈ ಬಗ್ಗೆ ಬಿಜೆಪಿಯವರು ಇಲ್ಲ ಎಂದು ಹೇಳಲಿ ನೋಡೊಣ. ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಮೀಸಲಾತಿ ತಂದಿದ್ದೇವೆ. ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ನೀಡಿದ್ದರು. ಮೀಸಲಾತಿ ವಿರೋಧ ಮಾಡಿದವರು ಬಿಜೆಪಿಯವರು. ಇಂತಹವರಿಗೆ ಪಂಚಾಯತ್ ಸದಸ್ಯರು ಬೆಂಬಲ ಕೊಡುತ್ತೀರಾ ? ಬಿಜೆಪಿಯವರು ಮೀಸಲಾತಿ ವಿರೋಧಿಗಳು. ನಾನು ಸುಳ್ಳು ಹೇಳುತ್ತಿಲ್ಲ, ಬೇಕಿದ್ದರೆ ಎಲ್ಲಾ ಹಿರಿಯ ನಾಯಕರನ್ನು ಕೇಳಿ. ಬಿಜೆಪಿಯವರು ಯಾವತ್ತೂ ಮೀಸಲಾತಿ ಪರ ಇಲ್ಲ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಶೇ 24.1ರಷ್ಟು ಮೀಸಲಾತಿ ನೀಡಿ ಕಾನೂನು ಮಾಡಿ ಜಾರಿಗೆ ತಂದಿದ್ದು ನಾನು. ಇದನ್ನ ಗ್ರಾ.ಪಂ ಸದಸ್ಯರು ಜನರ ಬಳಿ ಹೇಳಬೇಕು. ಇಡೀ ದೇಶದಲ್ಲಿ ಮೀಸಲಾತಿ ಬಗ್ಗೆ ಕಟ್ಟುನಿಟ್ಟಿನ ಕಾನೂನು ಮಾಡಿದ್ದ ಸಿದ್ದರಾಮಯ್ಯ ಸರ್ಕಾರ. ಬಡ್ತಿ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಹೊಡೆದು ಹಾಕಿತು. ಅದಕ್ಕೆ ಪರ್ಯಾಯವಾಗಿ ಕಾನೂನು ಮಾಡಿ ಜಾರಿಗೆ ತಂದಿದ್ದುನಾನು. ಹಾಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಬಿಜೆಪಿಯತ್ತ ಮುಖ ಕೂಡ ಮಾಡಬಾರದು ಎಂದು ಹೇಳಿದರು.

ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯರನ್ನು ಸೆಳೆದುಕೊಳ್ಳಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ ನಂಬರ್ ಒನ್. ಜೆಡಿಎಸ್ ನಂಬರ್ ಟು, ಬಿಜೆಪಿ ನಂಬರ್ ಮೂರನೇ  ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಕಾಂಗ್ರೆಸ್ ನಂಬರ್ ಒನ್, ಬಿಜೆಪಿ ನಂಬರ್ ಟು, ಜೆಡಿಎಸ್ ನಂಬರ್ ಮೂರು ಸ್ಥಾನದಲ್ಲಿದೆ. ಇದನ್ನೇ ಆಧಾರವಾಗಿಟ್ಟುಕೊಂಡರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದರು.

ಹಾಗೆಯೇ ನಮ್ಮ ಹಾಗೂ ಜೆಡಿಎಸ್ ಶಾಸಕರುಗಳನ್ನು ಕೊಂಡುಕೊಂಡು ಯಡಿಯೂರಪ್ಪ ಸಿಎಂ ಆಗಿದ್ದಾರೆ. 17 ಮಂದಿ ಪೈಕಿ 14 ಮಂದಿ ಕಾಂಗ್ರೆಸ್ ಶಾಸಕರು, 3 ಮಂದಿ ಜೆಡಿಎಸ್ ಶಾಸಕರು ಬಿಜೆಪಿಗೆ ಹೋದರು. ಆದರೂ ಕೂಡ ಎಚ್.ಡಿ ಕುಮಾರಸ್ವಾಮಿ ಮಾತ್ರ ಸಿದ್ದರಾಮಯ್ಯ ಆಪ್ತರು ಬಿಜೆಪಿಗೆ ಹೋಗಿದ್ದಾರೆ ಅಂತಾರೆ. ಹಾಗಾದರೆ ಜೆಡಿಎಸ್ ನಿಂದ ಬಿಜೆಪಿಗೆ ಹೋದ ಮೂವರು ಶಾಸಕರು ನಿಮಗೇನಾಗಿದ್ದರು ? ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು. 

ಮುಂದೆ ಅಧಿಕಾರಕ್ಕೆ ಬರೋದು ಕಾಂಗ್ರೆಸ್. ಯಡಿಯೂರಪ್ಪ ಜನರ ಆಶೀರ್ವಾದದಿಂದ ಮುಖ್ಯಮಂತ್ರಿ ಆಗಿಲ್ಲ. 17 ಶಾಸಕರಿಗೆ ಹಣ, ಅಧಿಕಾರ ಕೊಡುತ್ತೇವೆ ಅಂದಿದಕ್ಕೆ ಹೋಗಿದ್ದಾರೆ. ಅವರಿಗೆ ಮಾನ ಮರ್ಯಾದೆ ಇಲ್ಲ. ಅದಕ್ಕೆ ಅವರು ಬಿಜೆಪಿಗೆ ಹೋದರು. ನೀವು ಹಾಗೆಲ್ಲಾ ಮಾಡಬೇಡಿ. ನಿಮಗೆ ಮಾನ ಮರ್ಯಾದೆ ಇದೆ. ಮಾನ ಮರ್ಯಾದೆ ಇಲ್ಲದವರು ಹಣ, ಅಧಿಕಾರಕ್ಕಾಗಿ ಹೋದರು. ನೀವು ಮಾನ ಮರ್ಯಾದೆ ಇರುವವರಾಗಿರುವುದುದರಿಂದ ನೀವು ಹೋಗಬಾರದು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮಾಜಿ ಸಂಸದ ಆರ್.ಧ್ರುವನಾರಾಯಣ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಕಾಂಗ್ರೆಸ್ ಮುಖಂಡರುಗಳಾದ ಸುನೀಲ್ ಬೋಸ್, ಎಸ್.ಸಿ.ಬಸವರಾಜು, ಶಿವಣ್ಣ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅಚ್ಛೇದಿನ್ ಬದಲಾಗಿ ಕೊರೋನ ಆಯೇಗಾ ಆಗಿದೆ: ಸಿದ್ದರಾಮಯ್ಯ ವ್ಯಂಗ್ಯ
ದೇಶದಲ್ಲಿ ಅಚ್ಛೇ ದಿನ್ ಆಯೇಗಾ ಬದಲಾಗಿ ಕೊರೋನ ಆಯೇಗಾ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯ ಅಚ್ಛೇದಿನ್ ಆಯೇಗಾ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಪ್ರಧಾನಿ ನರೇಂದ್ರ ಮೋದಿ ದೊಡ್ಡದಾಗಿ ಭಾಷಣ ಬಿಗಿದು ಅಚ್ಛೇದಿನ್ ಆಯೇಗಾ... ಅಚ್ಛೇದಿನ್ ಆಯೇಗಾ.. ಎಂದು ಕಳೆದ ಆರು ವರ್ಷಗಳಿಂದಲೂ ಹೇಳುತ್ತಿದ್ದಾರೆ. ಆದರೆ ಅಚ್ಛೇದಿನ್ ಬದಲಾಗಿ ಕೊರೋನ ಆಯೇಗಾ ಆಗಿದೆ. ಕೊರೋನಾ ಓಡಿಸಲು ಜಾಗಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳುವ ಪ್ರಧಾನಿಯನ್ನು ನೋಡಿರುವುದು ಇದೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುನ್ನ ಸ್ವಿಸ್ ಬ್ಯಾಂಕ್‍ನಿಂದ ಕಪ್ಪು ಹಣ ತಂದು ಎಲ್ಲರ ಅಕೌಂಟ್‍ಗೂ 15 ಲಕ್ಷ ಹಾಕುತ್ತೇನೆ ಎಂದು ಹೇಳಿದರು. ಆದರೆ ಇದೂವರೆಗೂ ಅದು ಈಡೇರಿಲ್ಲ. ಕ್ರೂಡ್ ಆಯಿಲ್ ಕಡಿಮೆ ಇದ್ದರೂ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಇನ್ನೂ ಅಡಿಗೆ ಅನಿಲ ಕೂಡ ನಾಲ್ಕು ಪಟ್ಟು ಹೆಚ್ಚಳವಾಗಿದೆ. ಇನ್ನೆಲ್ಲಿಯ ಅಚ್ಛೇದಿನ್ ಎಂದು ಲೇವಡಿ ಮಾಡಿದರು.

ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ ಯುವಕರನ್ನು ದಾರಿ ತಪ್ಪಿಸಿದರು. ಉದ್ಯೋಗ ಕೇಳಲು ಹೋದರೆ ಪಕೋಡ ಮಾರಿ ಎಂದು ಹೇಳುತ್ತಾರೆ. ಇಂತಹ ಪ್ರಧಾನಿ ನಮಗೆ ಬೇಕಾ ಎಂದು ಕೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X