Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದ ಜನ ವಿರೋಧಿ ನೀತಿ ಖಂಡಿಸಿ...

ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಜ.20ರಂದು 'ರಾಜಭವನ ಚಲೋ': ಡಿ.ಕೆ.ಶಿವಕುಮಾರ್

''ಏಳು ಜನ್ಮ ಎತ್ತಿ ಬಂದರೂ ಕಾಂಗ್ರೆಸ್ ನಿರ್ಮೂಲನೆ ಅಸಾಧ್ಯ''

ವಾರ್ತಾಭಾರತಿವಾರ್ತಾಭಾರತಿ14 Jan 2021 7:55 PM IST
share
ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಜ.20ರಂದು ರಾಜಭವನ ಚಲೋ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜ. 14: ‘ರೈತರಿಗೆ ಮಾರಕವಾಗಿರುವ ಕೃಷಿ ಕರಾಳ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ, ವಿದ್ಯುತ್, ಆಸ್ತಿ ತೆರಿಗೆ, ಇಂಧನ ಬೆಲೆ ಏರಿಕೆಯಂತಹ ಸರಕಾರದ ಜನ ವಿರೋಧಿ ನಿರ್ಧಾರ ಖಂಡಿಸಿ ಇದೇ 20ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರಕಾರದ ಕೃಷಿ ಕರಾಳ ಕಾಯ್ದೆ ವಿರುದ್ಧ ಇಡೀ ದೇಶದ ರೈತರು ವಿಶ್ವವೇ ಗಮನಿಸುವಂತಹ ದೊಡ್ಡಮಟ್ಟದ ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ರೈತರ ನೋವು ಅರಿತು ಈ ಕಾಯ್ದೆಗೆ ತಾತ್ಕಾಲಿಕ ತಡೆ ನೀಡಿದೆ. ಸುಪ್ರೀಂಕೋರ್ಟ್ ರಚಿಸಿರುವ ಸಮಿತಿ ಬಗ್ಗೆ ನಮ್ಮ ಪಕ್ಷ ಈಗಾಗಲೇ ತನ್ನ ಅಭಿಪ್ರಾಯ ತಿಳಿಸಿದೆ. ತಡೆಯಾಜ್ಞೆ ರೈತರಿಗೆ ಸಮಾಧಾನ ತಂದಿಲ್ಲ. ಹೀಗಾಗಿ ಮುಂದೆಯೂ ರೈತರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆ ಎಂದರು.

ಜ.15ಕ್ಕೆ ರಾಷ್ಟ್ರಾದ್ಯಂತ ರೈತರಿಗೆ ಬೆಂಬಲವಾಗಿ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಆಂದೋಲನ ಮಾಡುತ್ತಿದೆ. ಎಲ್ಲ ರಾಜ್ಯಗಳಲ್ಲಿ ರಾಜಭವನ ಮುತ್ತಿಗೆ ನಡೆಯಲಿದೆ. ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಈ ಕರಾಳ ಕಾಯ್ದೆ ಹಿಂಪಡೆಯಲು ಆಗ್ರಹಿಸಲಾಗುವುದು. ರಾಜ್ಯದಲ್ಲಿ ದಿಲ್ಲಿ ನಾಯಕರೊಂದಿಗೆ ಚರ್ಚಿಸಿ ರೈತರಿಗೆ ಶಕ್ತಿ ತುಂಬಲು ಇದೇ 20ರಂದು ಬೃಹತ್ ಚಳುವಳಿ ಹಮ್ಮಿಕೊಂಡಿದ್ದು, ಫ್ರೀಡಂ ಪಾರ್ಕ್‍ನಿಂದ ರಾಜಭವನದವರೆಗೆ ಮೆರವಣಿಗೆ ನಡೆಯಲಿದೆ. ಜತೆಗೆ ರಾಜಭವನ ಮುತ್ತಿಗೆ ಹಾಕುತ್ತೇವೆ. ರಾಜ್ಯದ ಎಲ್ಲ ರೈತರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಜತೆಗೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧವೂ ಹೋರಾಟ ಮಾಡುತ್ತಿದ್ದೇವೆ. ಕೊರೋನದಿಂದಾಗಿ ರಾಜ್ಯದಲ್ಲಿ ವ್ಯಾಪಾರ ವಹಿವಾಟು ನಿಂತು ಹೋಗಿದ್ದು ಜನ ನರಳಾಡಿದ್ದಾರೆ. ಸರಕಾರ ಯಾರ ಪರವಾಗಿಯೂ ನಿಂತಿಲ್ಲ. ಈಗ ಚೇತರಿಸಿಕೊಳ್ಳುವ ಹಂತದಲ್ಲಿ ಮೂರು ಭಾರಿ ವಿದ್ಯುತ್ ಬೆಲೆ ಏರಿಕೆ ಮಾಡ್ತಿದ್ದಾರೆ. ಗ್ಯಾಸ್ ಬೆಲೆಯೂ ಏರಿಕೆಯಾಗಿದೆ. ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚುತ್ತಲೇ ಇದೆ ಎಂದು ಟೀಕಿಸಿದರು.

ಆಸ್ತಿ ತೆರಿಗೆ ಮನ್ನಾಗೆ ನಾವು ಆಗ್ರಹಿಸುತ್ತಿರುವಾಗ, ವಿಶೇಷ ತೆರಿಗೆಯನ್ನು ಸರಕಾರ ವಿಧಿಸಿದೆ. ಖಾಲಿ ಜಾಗ ಇಟ್ಟುಕೊಂಡಿದ್ದರೂ ತೆರಿಗೆ ಬೀಳಲಿದೆ. ಈ ಮೂಲಕ ಹಣ ವಸೂಲಿಗೆ ಸರಕಾರ ಮುಂದಾಗಿದೆ. ಈ ಎಲ್ಲ ವಿಚಾರವಾಗಿ ನಮ್ಮ ಹೋರಾಟ ನಡೆಯಲಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ನಿರ್ಮೂಲನೆ ಅಸಾಧ್ಯ: ಏಳು ಜನ್ಮ ಎತ್ತಿ ಬಂದರೂ ಕಾಂಗ್ರೆಸ್ ನಿರ್ಮೂಲನೆ ಅಸಾಧ್ಯ. ನಿನ್ನೆ ಸಿಎಂ ಕಾಂಗ್ರೆಸ್ ದೇಶಕ್ಕೆ ಮಾರಕ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ನಿಮ್ಮ ಪಾರ್ಟಿಯಲ್ಲಿರುವವರೆಲ್ಲ ಕಾಂಗ್ರೆಸ್ಸಿಗರೇ. ಅವರ ಇತಿಹಾಸ ಕಾಂಗ್ರೆಸ್ ಎಂದು ತಿರುಗೇಟು ನೀಡಿದರು.

‘ಯಡಿಯೂರಪ್ಪನವರೇ ನೀವು ಅಧಿಕಾರಕ್ಕೆ ಬಂದು ನಿಮಗೆ ಮಾತನಾಡುವ ಶಕ್ತಿ ಬಂದಿದ್ದೇ ಕಾಂಗ್ರೆಸ್ಸಿನಿಂದ. ನಾವು ತಯಾರು ಮಾಡಿದ ನಾಯಕರಿಂದ ಎಂಬುದನ್ನು ನೀವು ಮರೆಯಬೇಡಿ. ಈ ದೇಶಕ್ಕೆ ಸಂವಿಧಾನ ತಂದಿದ್ದು ಕಾಂಗ್ರೆಸ್ ಪಕ್ಷ. ಈ ದೇಶದ ಬುನಾದಿಯೇ ಕಾಂಗ್ರೆಸ್ ಬುನಾದಿ. ಕಾಂಗ್ರೆಸ್ ಪಕ್ಷ ನಿರ್ಮೂಲನೆ ಮಾಡುವ ಬಗ್ಗೆ ನಿಮ್ಮ ತಲೆಯಲ್ಲಿರುವ ಭ್ರಮೆಯನ್ನ ತೆಗೆದು ಹಾಕಿ.'

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X