Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಬ್ಲ್ಯಾಕ್‌ಮೇಲ್ ಗೆ ಒಳಗಾಗಿದ್ದಾರೋ,...

ಸಿಎಂ ಬ್ಲ್ಯಾಕ್‌ಮೇಲ್ ಗೆ ಒಳಗಾಗಿದ್ದಾರೋ, ಒತ್ತಡಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 Jan 2021 9:47 PM IST
share
ಸಿಎಂ ಬ್ಲ್ಯಾಕ್‌ಮೇಲ್ ಗೆ ಒಳಗಾಗಿದ್ದಾರೋ, ಒತ್ತಡಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ: ಸಿದ್ದರಾಮಯ್ಯ

ಮೈಸೂರು,ಜ.14: ಎಲ್ಲರಿಗೂ ಹಾಗೆ ಬ್ಲ್ಯಾಕ್‌ಮೇಲ್ ಮಾಡೋಕೆ ಆಗಲ್ಲ. ವೀಕ್ ಚೀಫ್ ಮಿನಿಸ್ಟರ್ ಗೆ ಮಾತ್ರ ಬ್ಲ್ಯಾಕ್‌ಮೇಲ್ ಮಾಡುತ್ತಾರೆ. ಅದರ ಬಗ್ಗೆ ಕ್ರಿಮಿನಲ್ ಕೇಸ್ ಹಾಕಲಿ. ಆ ಪಕ್ಷದವರೇ ಆರೋಪ ಮಾಡಿರೋದು, ನಾವೇನು ಆರೋಪ ಮಾಡುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮೊದಲಿಗೆ ರಾಜ್ಯದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು. ನಂತರ ಮಾತನಾಡಿದ ಅವರು, ಅವರ ಪಕ್ಷದವರೇ ಆರೋಪ ಮಾಡುತ್ತಿದ್ದಾರೆ ಅಂದರೆ ಅದರಲ್ಲಿ ಸತ್ಯ ಇದೆ ಅಲ್ವಾ? ನಾವು ಮಾಡಿದರೆ ವಿರೋಧ ಪಕ್ಷದವರು ಅಂತಾರೆ. ಸಿಎಂ ಬ್ಲ್ಯಾಕ್‌ಮೇಲ್ ಗೆ ಒಳಗಾಗಿದ್ದಾರೋ ಅಥವಾ ಒತ್ತಡಕ್ಕೆ ಒಳಗಾಗಿದ್ದಾರೋ ಅನ್ನೋದು ನನಗೆ ಗೊತ್ತಿಲ್ಲ. ಅದಕ್ಕೆಲ್ಲ ತನಿಖೆ ಮಾಡಿ ಅಂತ ಹೇಳಲ್ಲ. ಕ್ರಿಮಿನಲ್ ಕೇಸ್ ಕೊಡಲಿ ಎಂದು ಹೇಳುತ್ತೇನೆ ಎಂದಿದ್ದಾರೆ.

ಬಿಜೆಪಿನಲ್ಲಿ ಕುಟುಂಬ ರಾಜಕಾರಣ ಬಗ್ಗೆ ಹಿಂದೆಯೂ ನಾನು ಹೇಳಿದ್ದೆ. ಬಿಡಿಎ ಹಗರಣದಲ್ಲಿ 7 ಕೋಟಿ 40 ಲಕ್ಷ ರೂ. ಅವರ ಕುಟುಂಬದವರ ಅಕೌಂಟ್ ಗೆ ಹೋಗಿತ್ತು. ಅದರ ಅರ್ಥ ಕುಟುಂಬ ರಾಜಕಾರಣ ಇದೆ ಅಂತ ಅಲ್ವಾ. ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಜನರೇ ಉತ್ತರ ಕೊಡುತ್ತಾರೆ. ನನ್ನ ಕಾಲದಲ್ಲಿ ಜಾರಿಗೊಳಿಸಿದ್ದ ಎಲ್ಲ ಜನಪರ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾಯಕತ್ವ ಬದಲಾವಣೆಗೆ ಸಿದ್ದರಾಮಯ್ಯ ದಿನಾಂಕ ನಿಗದಿ ಮಾಡಲಿ ಎಂಬ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಇಷ್ಟು ದಿನಗಳ ಕಾಲ ಮಂತ್ರಿ ಮಂಡಲ ವಿಸ್ತರಣೆ ಯಾಕೆ ಮಾಡಿರಲಿಲ್ಲ. ಮಂತ್ರಿಮಂಡಲ ವಿಸ್ತರಣೆಗೆ ಯಾಕೆ ಲೇಟ್ ಆಯ್ತು. ಗೋಗರೆದು, ಕೈಕಾಲು ಕಟ್ಟಿ ಮಂತ್ರಿ ಮಂಡಲ ವಿಸ್ತರಣೆ ಮಾಡಿಸಿಕೊಂಡಿರೋದು ಎಂದು ಟೀಕಿಸಿದರು.

ಒಬ್ಬ ಸಚಿವನನ್ನು ಸಂಪುಟದಿಂದ ಬಿಟ್ಟಿದ್ದಾರೆ. ಯಾವ ಕಾರಣಕ್ಕೆ ಬಿಟ್ಟಿದ್ದಾರೆ ಎಂದು ಕಾರಣ ಕೊಟ್ಟಿಲ್ಲ. ಪಕ್ಷೇತರನಾಗಿ ಕಾಂಗ್ರೆಸ್ ಪಕ್ಷದ ಸಹಾಯದೊಂದಿಗೆ ಗೆದ್ದಿದ್ದ ಪಕ್ಷೇತರ ಶಾಸಕ ನಾಗೇಶ್ ರನ್ನ ಕೈಬಿಟ್ಟಿದ್ದಾರೆ. ಅವರನ್ನ ಯಾವ ಕಾರಣಕ್ಕೆ ಡ್ರಾಪ್ ಮಾಡಿದ್ದಾರೆ ಎಂದು ಹೇಳಿಲ್ಲ. ಅವರು ಕೂಡ ಆಪರೇಷನ್ ಕಮಲಕ್ಕೆ ಒಳಪಟ್ಟವರು ಎಂದು ಕಿಡಿಕಾರಿದರು. 

ಈಗ ಮುನಿರತ್ನನನ್ನು ಕೈ ಬಿಟ್ಟಿದ್ದಾರೆ. ಕಾನೂನು ತೊಡಕಿದೆ ಎಂದು ಗೊತ್ತಿದ್ದರೂ ಯಾಕೆ  ಕರೆದುಕೊಂಡರು. ಮಿನಿಸ್ಟರ್ ಮಾಡಲು ಆಗಲಿಲ್ಲ ಎಂದ ಮೇಲೆ ಯಾಕೆ ತೆಗೆದುಕೊಂಡ್ರು ಅವನನ್ನು? ವಿಶ್ವನಾಥ್ ಪಾಪ ಬಾಯಿ ಬಡ್ಕೊತ್ತಿದ್ದಾನೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X