ನೂತನ ಸಚಿವ ಅಂಗಾರಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ
ಮಂಗಳೂರು : ರಾಜ್ಯದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ದ.ಕ. ಜಿಲ್ಲೆಗೆ ಪ್ರಥಮವಾಗಿ ಆಗಮಿಸಿದ ಅಂಗಾರ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯವಾಗಿ ಸ್ವಾಗತಿಸಲಾಯಿತು.
ಮೇಯರ್ ದಿವಾಕರ ಪಾಂಡೇಶ್ವರ, ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಜ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ನಿಗಮ ಮಂಡಳಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಸಂತೋಷ್ ಕುಮಾರ್, ತುಳು ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಮೊದಲಾದವರು ನೂತಮ ಸಚಿವರನ್ನು ಬರಮಾಡಿಕೊಂಡರು.