Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯಡಿಯೂರಪ್ಪ ನಾಲಿಗೆ ಕಳೆದುಕೊಂಡ ನಾಯಕ :...

ಯಡಿಯೂರಪ್ಪ ನಾಲಿಗೆ ಕಳೆದುಕೊಂಡ ನಾಯಕ : ಎಚ್.ವಿಶ್ವನಾಥ್

'ಮುಖ್ಯಮಂತ್ರಿ ಬಗ್ಗೆ ಕಳಕಳಿ, ಗೌರವ ಇತ್ತು'

ವಾರ್ತಾಭಾರತಿವಾರ್ತಾಭಾರತಿ15 Jan 2021 12:36 PM IST
share
ಯಡಿಯೂರಪ್ಪ ನಾಲಿಗೆ ಕಳೆದುಕೊಂಡ ನಾಯಕ : ಎಚ್.ವಿಶ್ವನಾಥ್

ಹುಬ್ಬಳ್ಳಿ : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ನನಗೆ ಕಳಕಳಿ ಇದೆ. ಅವರ ಬಗ್ಗೆ ನನಗೆ ಗೌರವ ಇತ್ತು. ಆದರೆ, ಈಗ ಯಡಿಯೂರಪ್ಪ ನಾಲಿಗೆ ಕಳೆದುಕೊಂಡ ನಾಯಕ ಎಂದು ಪರಿಷತ್ ಸದಸ್ಯ ಎಚ್. ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಬಿಎಸ್ ವೈ ಈಗ ಮಾತು ತಪ್ಪಿದ ನಾಯಕ ಎಂದು ಟೀಕಿಸಿದರು.

ಪ್ರಧಾನಿ ಮೋದಿ ಕುಟುಂಬ ರಾಜಕಾರಣ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಯಡಿಯೂರಪ್ಪ ಕುಟುಂಬದ ರಾಜಕಾರಣ ಅತಿಯಾಗಿದೆ. ಅವರ ಪುತ್ರ ವಿಜಯೇಂದ್ರ ಇಲ್ವಾ..? ರಾಘವೇಂದ್ರ ಎಂ.ಪಿ ಇದ್ದಾರೆ. ಸಚಿವ ಈಶ್ವರಪ್ಪನ ಸಹ ಕುಟುಂಬ ರಾಜಕಾರಣದಿಂದ ಹೊತರಾಗಿಲ್ಲ. ಕುಟುಂಬ ರಾಜಕಾರಣವೇ ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎಂದು ದೂರಿದರು.

ಅಮಿತ್ ಶಾ ಪುತ್ರನ ವಿಚಾರದಲ್ಲಿ ಮೋದಿ ಬೇಸರ ಮಾಡಿಕೊಂಡಿದ್ದಾರೆ. ಯಡಿಯೂರಪ್ಪ ಕಾಮಧೇನು ಇದ್ದಂತೆ, 30 ವರ್ಷದಿಂದ ನೋಡುತ್ತಿದ್ದೇನೆ. ಯಡಿಯೂರಪ್ಪನವರ ಜೀವ ವಿಜಯೇಂದ್ರನ ಕೈಯಲ್ಲಿ ಇದೆ. ಬಾಲ ನಾಗಮ್ಮನ ಕಥೆಯಂತಾಗಿದೆ ಯಡಿಯೂರಪ್ಪ ಬದುಕು ಎಂದು ಲೇವಡಿ ಮಾಡಿದರು.

ನಾನು ಯಡಿಯೂರಪ್ಪ ನಾಯಕತ್ವದ ಬಗ್ಗೆ ಅಲ್ಲ. ಅವರ ನಡುವಳಿಕೆ ಬಗ್ಗೆ ಮಾತನಾಡಲು ಜ.17ರಂದು ಅಮಿತ್ ಶಾ ಬೆಳಗಾವಿ ಭೇಟಿಗೆ ಅವಕಾಶ ಕೇಳಿದ್ದೇನೆ. ಯಾರು ಮಾತನಾಡುತ್ತಾರೆ ಅವರನ್ನು ವಿಲನ್ ಮಾಡಲಾಗುತ್ತಿದೆ. ಸರಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರಶ್ನೆ ಮಾಡಬಾರದಾ ಎಂದು ಸಿ.ಪಿ.ಯೋಗೇಶ್ವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ 9,700 ವೈಯಕ್ತಿಕ ದೂರುಗಳಿವೆ,‌ ಮೆಗಾ ಸಿಟಿ ಹಗರಣ ನಡೆದಿದೆ. ಜನರಿಂದ‌ ಹಣ ಪಡೆದು ವಂಚಿಸಿದ್ದಾರೆ, ಅಂತವರು ಮಂತ್ರಿಯಾದ್ರೆ ಹೇಗೆ?  ಎಂದು ಪ್ರಶ್ನಿಸಿದರು.

78 ವರ್ಷದ ಯಡಿಯೂರಪ್ಪ ಅವರಿಗೆ ಅಧಿಕಾರದ ವ್ಯಾಮೋಹ ಇರಬೇಕಾದ್ರೆ, 77 ವರ್ಷದ ನನಗೆ ಅಧಿಕಾರದ ವ್ಯಾಮೋಹ ಇದ್ದರೆ ತಪ್ಪೇನು. ನಾನು ಪಕ್ಷಾಂತರಿ ಅಲ್ಲ. ನಾಯಕತ್ವದ ವಿರುದ್ಧ ಧ್ವನಿ ಎತ್ತಿ ಪಕ್ಷ ಬದಲಿಸಿದ್ದೇನೆ. ನಾನು ಈ ಎಲ್ಲ ವಿಚಾರಗಳನ್ನು ಪುಸ್ತಕ ರೂಪದಲ್ಲಿ ಹೊರತರುವ ಯೋಚನೆಯಲ್ಲಿದ್ದೇನೆ. ‘ಬಾಂಬೆ-ಡೇಸ್ ‘ ಪುಸ್ತಕದಲ್ಲಿ ಸರಕಾರ ರಚನೆಯ ಪ್ರಹಸನದ ಬಗ್ಗೆ ಬರೆಯುತ್ತಿದ್ದೇನೆ. ಇನ್ನು ನಾಲ್ಕೈದು ಅಧ್ಯಾಯಗಳು‌ ಬಾಕಿ ಇದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X