Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ:...

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: 14ಕ್ಕೇರಿದ ಸಾವಿನ ಸಂಖ್ಯೆ, ಮಾಜಿ ಶಾಸಕರ ಸೊಸೆ ಮೃತ್ಯು

ಹಲವರ ಸ್ಥಿತಿ ಗಂಭೀರ

ವಾರ್ತಾಭಾರತಿವಾರ್ತಾಭಾರತಿ15 Jan 2021 6:31 PM IST
share
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: 14ಕ್ಕೇರಿದ ಸಾವಿನ ಸಂಖ್ಯೆ, ಮಾಜಿ ಶಾಸಕರ ಸೊಸೆ ಮೃತ್ಯು

ಧಾರವಾಡ, ಜ.15: ಟಿಪ್ಪರ್ ಹಾಗೂ ಮಿನಿ ಬಸ್ ನಡುವೆ ಶುಕ್ರವಾರ ನಸುಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಮಾಜಿ ಶಾಸಕ ಗುರುಸಿದ್ದನಗೌಡರ ಸೊಸೆ ದಾರುಣವಾಗಿ ಮೃತಪಟ್ಟಿದ್ದಾರೆ.

ಮೃತರನ್ನು ಪೂರ್ಣಿಮಾ, ಪ್ರವೀಣಾ, ಪ್ರೀತಿ ರವಿಕುಮಾರ, ಮಾನಸಿ, ಪರಂಜ್ಯೋತಿ, ರಾಜೇಶ್ವರಿ ಶಿವಕುಮಾರ, ಶಕುಂತಲಾ, ಉಷಾ, ವೇದಾ, ನಿರ್ಮಲಾ, ಮಂಜುಳಾ ನಿಲೇಶ, ರಜನಿ ಶ್ರೀನಿವಾಸ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ದಾವಣಗೆರೆಯ ವಿದ್ಯಾನಗರ, ಎಂಸಿಸಿ ಎ-ಬ್ಲಾಕ್ ಮತ್ತು ಎಂಸಿಸಿಬಿ-ಬ್ಲಾಕ್‍ನ ನಿವಾಸಿಗಳಾಗಿದ್ದು, ಸೇಂಟ್ ಪೌಲ್ಸ್ ಕಾನ್ವೆಂಟ್ ಶಾಲೆಯ ಹಳೇ ವಿದ್ಯಾರ್ಥಿಗಳಾದ ಇವರು ಈ ಬಾರಿ ಗೋವಾಕ್ಕೆ ಪ್ರವಾಸ ಹೊರಟಿದ್ದರು ಎಂದು ತಿಳಿದುಬಂದಿದೆ.

ಪ್ರಮುಖವಾಗಿ ಗುರುಸಿದ್ದನಗೌಡರ ಪುತ್ರ ಡಾ.ರವಿಕುಮಾರ್ ಅವರ ಪತ್ನಿ ಪ್ರೀತಿ ರವಿಕುಮಾರ್, ಡಾ. ಪ್ರಕಾಶ್ ಮತ್ತಿಹಳ್ಳಿ ಅವರ ಪತ್ನಿ ಡಾ.ವೀಣಾಪ್ರಕಾಶ್ ಸಹ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಚಾಲಕರಿಬ್ಬರು ಸಹ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಏನಿದು ಘಟನೆ?: 15 ಮಂದಿ ಮಹಿಳೆಯರು ಬಾಲ್ಯ ಸ್ನೇಹಿತರಾಗಿದ್ದು, ತಮ್ಮದೇ ಆದ ಕ್ಲಬ್ ಸ್ಥಾಪಿಸಿಕೊಂಡಿದ್ದರು. ಪ್ರತಿವರ್ಷ ಸಂಕ್ರಾಂತಿ ದಿನದಂದು ಪ್ರವಾಸ ಕೈಗೊಳ್ಳುವ ಪರಿಪಾಠವಿಟ್ಟುಕೊಂಡಿದ್ದರು. ಇವರೆಲ್ಲರೂ ಪ್ರತಿಷ್ಠಿತ ಕುಟುಂಬಗಳ ಹಿನ್ನೆಲೆಯುಳ್ಳವರಾಗಿದ್ದು ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಗೋವಾದಲ್ಲಿ ಸಂತೋಷಕೂಟ ಆಚರಿಸಲೆಂದು ಮಿನಿ ಬಸ್ಸಿನಲ್ಲಿ 17 ಜನರಿದ್ದ ಈ ತಂಡ ಶುಕ್ರವಾರ ನಸುಕಿನ 3:30ರ ಸುಮಾರಿಗೆ ದಾವಣಗೆರೆಯಿಂದ ಹೊರಟಿದ್ದರು.

ಹುಬ್ಬಳ್ಳಿ ಧಾರವಾಡ ನಡುವಿನ ಇಟ್ಟಿಗಟ್ಟಿ ಬಳಿಯ ಅಪಘಾತ ವಲಯದಲ್ಲಿ ವೇಗವಾಗಿ ನುಗ್ಗಿದ ಟಿಪ್ಪರ್ ಮಿನಿಬಸ್‍ಗೆ ನೇರವಾಗಿ ಢಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಬಸ್ಸು ಸಂಪೂರ್ಣ ನುಜ್ಜುಗುಜ್ಜಾಗಿದೆ. ಏನಾಯಿತು ಎಂದು ಅರಿಯುವಷ್ಟರಲ್ಲೇ 14 ಜನರ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ಹೇಳಲಾಗುತ್ತಿದೆ.

ಟಿಪ್ಪರ್(ಕೆಎ22ಸಿ1649) ಹಾಗೂ ಮಿನಿ ಬಸ್(ಕೆಎ64–1316) ಚಾಲಕರಿಬ್ಬರೂ ಮೃತಪಟ್ಟಿದ್ದಾರೆ. ಧಾರವಾಡದ ಸ್ನೇಹಿತರೊಬ್ಬರ ಮನೆಯಲ್ಲಿ ಉಪಾಹಾರ ಸೇವಿಸಿ ಮುಂದೆ ಗೋವಾದತ್ತ ಪ್ರಯಾಣ ಬೆಳೆಸುವ ಈ ಸ್ನೇಹಿತೆಯರ ಯೋಜನೆಯನ್ನು ವಿಧಿ ವಿಫಲಗೊಳಿಸಿದೆ.

ಘಟನೆಯಲ್ಲಿ ನಾಲ್ಕೈದು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ನು, ಘಟನಾ ಸ್ಥಳಕ್ಕೆ ಎಸ್ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಧಾನಿ ಸಂತಾಪ

ಧಾರವಾಡ ಜಿಲ್ಲೆಯ ಇಟ್ಟಿಗಟ್ಟಿಯ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮೃತರ ಕುಟುಂಬದ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಆ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಬೈಪಾಸ್ ರಸ್ತೆ ನಿರ್ಮಾಣಕ್ಕೆ ಮನವಿ: ಶೆಟ್ಟರ್

ಇಟ್ಟಿಗಟ್ಟಿ ಬಳಿ ನಡೆದ ಭೀಕರ ರಸ್ತೆ ಅಪಘಾತದ ಸುದ್ದಿ ಕೇಳಿ ತುಂಬ ಬೇಸರವಾಗಿದೆ. ಆದಷ್ಟು ಬೇಗ ಬೈಪಾಸ್ ರಸ್ತೆಯನ್ನು 6 ಲೇನ್ ರಸ್ತೆಯನ್ನಾಗಿ ಮಾಡಲು ನಿತಿನ್ ಗಡ್ಕರಿ ಅವರಿಗೆ ತಿಳಿಸಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X