ಕಾರ್ಮಿಕರ ಅಪಘಾತ ಪರಿಹಾರ ಯೋಜನೆ: ಹೆಸರು ನೋಂದಣಿಗೆ ಸೂಚನೆ
ಉಡುಪಿ, ಜ.15: ಖಾಸಗಿ ವಾಣಿಜ್ಯ ವಾಹನಗಳಲ್ಲಿ ಕಾರ್ಯನಿರ್ವಹಿಸು ತ್ತಿರುವ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಅನ್ವಯಿಸುವಂತೆ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯ ಪರಿಷ್ಕೃತ ಯೋಜನೆಯನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಜಾರಿಗೊಳಿಸಲಾಗಿದೆ.
ಸಂಬಂಧಪಟ್ಟ ಅಸಂಘಟಿತ ವಲಯದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‌ಗಳು, ಕಾರ್ಮಿಕ ಅಧಿಕಾರಿಗಳ ಕಛೇರಿ, ಉಡುಪಿ ಉಪವಿಭಾಗ, ಎ ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ:201, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ನೋಂದಾಯಿಸಿ ಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story





