Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ 243 ಕಡೆ ಕೊರೋನ ಲಸಿಕೆ ವಿತರಣೆ:...

ರಾಜ್ಯದ 243 ಕಡೆ ಕೊರೋನ ಲಸಿಕೆ ವಿತರಣೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

''237 ಕಡೆ ಕೋವಿಶೀಲ್ಡ್, 6 ಕಡೆ ಕೋವ್ಯಾಕ್ಸಿನ್''

ವಾರ್ತಾಭಾರತಿವಾರ್ತಾಭಾರತಿ15 Jan 2021 7:44 PM IST
share
ರಾಜ್ಯದ 243 ಕಡೆ ಕೊರೋನ ಲಸಿಕೆ ವಿತರಣೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜ.15: ರಾಜ್ಯದ 243 ಕಡೆಗಳಲ್ಲಿ ಶನಿವಾರ (ಜನವರಿ 16) ಕೊರೋನ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 10 ಕಡೆಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೊರೋನ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಲಸಿಕೆ ವಿತರಣೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ಒಂದರಲ್ಲೇ 10 ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲೂ ನೀಡಲಾಗುವುದು. ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದ 237 ಕೇಂದ್ರ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಲಸಿಕೆ ನೀಡಲು ಮೊದಲಿಗೆ ಜನಪ್ರತಿನಿಧಿಗಳನ್ನೆ ಆರಿಸಬಹುದಿತ್ತು. ಆದರೆ ಕೊರೋನ ನಿಯಂತ್ರಣಕ್ಕೆ ಶ್ರಮಿಸುತ್ತಿರುವವರಿಗೆ ಮೊದಲ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುತ್ತಿದೆ. ಬಳಿಕ ಇತರೆ ರೋಗಗಳಿಂದ ಬಳಲುವವರಿಗೆ ಲಸಿಕೆ ನೀಡಲಾಗುವುದು ಎಂದು ಸುಧಾಕರ್ ಹೇಳಿದರು.

7,17,439 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಮೊದಲ ದಿನ 24,300 ಮಂದಿಗೆ ನೀಡುವ ಗುರಿ ಇದೆ. ನಮ್ಮಲ್ಲಿ ಒಟ್ಟು 8,14,500 ಡೋಸ್ ಲಸಿಕೆ ಲಭ್ಯವಿದ್ದು, ಒಂದು ವಾರದೊಳಗೆ ಮೊದಲ ಹಂತದ ವಿತರಣೆ ಪ್ರಕ್ರಿಯೆ ಮುಗಿಯುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.

ಸರಕಾರಿ ಮಾಹಿತಿ ಮಾತ್ರ ನಂಬಿ: ಲಸಿಕೆಯಿಂದ ಅಡ್ಡಪರಿಣಾಮ ಉಂಟಾದರೆ, ಸ್ಥಳದಲ್ಲೆ ತುರ್ತು ಚಿಕಿತ್ಸೆ ವ್ಯವಸ್ಥೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿ ಜನಸಾಮಾನ್ಯರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಸರಕಾರದ ಸಾಮಾಜಿಕ ಜಾಲತಾಣಗಳಿಂದ ಬಿಡುಗಡೆ ಮಾಡುವ ಮಾಹಿತಿ ಮಾತ್ರ ಅಧಿಕೃತ ಹಾಗೂ ಸತ್ಯ ಎಂದು ಸುಧಾಕರ್ ಸ್ಪಷ್ಟಪಡಿಸಿದರು.

ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಲಸಿಕೆ ಸಂಪೂರ್ಣ ಸುರಕ್ಷಿತ. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೆ ಡೋಸ್ ನೀಡಲಾಗುತ್ತದೆ. ಜನರು ಯಾವುದೇ ಆತಂಕವಿಲ್ಲದೆ ವಿಶ್ವಾಸದಿಂದ ಲಸಿಕೆ ಪಡೆಯಿರಿ. ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,210 ಐಎಲ್‍ಆರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಇದೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X