Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತರ ಕರ್ನಾಟಕದಲ್ಲಿ 21 ಸಾವಿರ ಕೋಟಿ...

ಉತ್ತರ ಕರ್ನಾಟಕದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 13 ಹೆದ್ದಾರಿಗಳ ಅಭಿವೃದ್ಧಿ: ನಿತಿನ್ ಗಡ್ಕರಿ

ವಾರ್ತಾಭಾರತಿವಾರ್ತಾಭಾರತಿ15 Jan 2021 8:06 PM IST
share
ಉತ್ತರ ಕರ್ನಾಟಕದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 13 ಹೆದ್ದಾರಿಗಳ ಅಭಿವೃದ್ಧಿ: ನಿತಿನ್ ಗಡ್ಕರಿ

ಬೆಂಗಳೂರು, ಜ.15: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಎಂಎಸ್‍ಎಂಇ ಸಚಿವ ನಿತಿನ್ ಗಡ್ಕರಿ, ಶುಕ್ರವಾರ ಉತ್ತರ ಕರ್ನಾಟಕ ಭಾಗದಲ್ಲಿ 21 ಸಾವಿರ ಕೋಟಿ ರೂ.ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಘೋಷಿಸಿದರು.

ಶುಕ್ರವಾರ ಹೊಸದಿಲ್ಲಿಯಿಂದ ವರ್ಚುಯಲ್ ವೇದಿಕೆ ಮೂಲಕ 323 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಎಲಿವೇಟೆಡ್ ಕಾರಿಡಾರ್ ಹಾಗೂ ಕಲಘಟಗಿ ತಾಲೂಕು ದಾಸ್ತಿಕೊಪ್ಪ ಗ್ರಾಮದಲ್ಲಿ ಬೇಡ್ತಿ ನಾಲೆಗೆ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಭಾರತ ಸರಕಾರವು ಕರ್ನಾಟಕ ರಾಜ್ಯದಲ್ಲಿನ ಹೆದ್ದಾರಿಗಳ ಅಭಿವೃದ್ಧಿಗೆ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ಚತುಷ್ಪಥ ರಸ್ತೆ ನಿರ್ಮಾಣ, ಬೆಳಗಾವಿ ಚತುಷ್ಪಥ ವರ್ತುಲ ರಸ್ತೆ ಸೇರಿದಂತೆ ಒಟ್ಟು 13 ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅಂತೆಯೇ ಹುಬ್ಬಳ್ಳಿ-ಹೊಸಪೇಟೆ ಹೆದ್ದಾರಿ ಸೇರಿದಂತೆ, ಉತ್ತರ ಕರ್ನಾಟಕದ ಪ್ರಗತಿಯಲ್ಲಿರುವ ಯೋಜನೆಗಳನ್ನೂ ಶೀಘ್ರವೇ ಪೂರ್ಣಗೊಳಿಸುವುದಾಗಿ ಅವರು ಭರವಸೆ ನೀಡಿದರು.

ಕರ್ನಾಟಕ ಪ್ರಗತಿಶೀಲ ರಾಜ್ಯವಾಗಿದ್ದು, ಕೃಷಿ ಹಾಗೂ ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಬಡತನ ನಿರ್ಮೂಲನೆಗೆ ರಾಜ್ಯ ಸರಕಾರದೊಂದಿಗೆ ಕೈ ಜೋಡಿಸಿ ಶ್ರಮಿಸುವುದಾಗಿ ಹೇಳಿದ ನಿತಿನ್ ಗಡ್ಕರಿ, ಸಾರಿಗೆ ವಲಯದಲ್ಲಿ ಹಸಿರು ಇಂಧನ ಬಳಕೆಗೆ ಆದ್ಯತೆ ನೀಡುವ ಮೂಲಕ ರೈತರಿಗೂ ಅನುಕೂಲ ಕಲ್ಪಿಸಲಾಗುವುದು ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಎರಡನೆ ಬಾರಿಗೆ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ನಡೆಸುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ರಾಣಿ ಚೆನ್ನಮ್ಮ ವೃತ್ತದ ಎಲಿವೇಟೆಡ್ ಕಾರಿಡಾರ್ ಹಾಗೂ ದಾಸ್ತಿಕೊಪ್ಪ ಗ್ರಾಮದ ಬೇಡ್ತಿ ನಾಲಾ ಮೇಲಿನ ಸೇತುವೆ ನಿರ್ಮಾಣದಿಂದ ಅಂಕೋಲಾ-ಗುತ್ತಿ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ 1.16 ಲಕ್ಷ ಕೋಟಿ ರೂ.ಗಳನ್ನು ಹೆದ್ದಾರಿ ಅಭಿವೃದ್ಧಿಗಾಗಿ ಹೂಡಿಕೆ ಮಾಡುವ ಕೇಂದ್ರ ಸರಕಾರದ ಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ, ರಾಜ್ಯದ ಎಲ್ಲ ಹೆದ್ದಾರಿ ಯೋಜನೆಗಳು ಕಾಲಬದ್ಧವಾಗಿ ಪೂರ್ಣಗೊಳ್ಳಲು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಣಿ ಚೆನ್ನಮ್ಮ ವೃತ್ತದ ಎಲಿವೇಟೆಡ್ ಕಾರಿಡಾರ್ ನಿಂದ ಹುಬ್ಬಳ್ಳಿ ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಅಧಿಕಾರದ ಅವಧಿಯಲ್ಲಿ 77,297 ಕೋಟಿ ರೂಪಾಯಿಗಳ ವೆಚ್ಚದಲ್ಲಿ 222 ಯೋಜನೆಗಳಿಗೆ ಮಂಜೂರಾತಿ ನೀಡಿ, 8,819 ಕಿ.ಮೀ. ರಸ್ತೆಯನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ವಹಿಸಿದ್ದನ್ನು ಶ್ಲಾಘಿಸಿದರು.

ಕರ್ನಾಟಕ ರಾಜ್ಯದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮತ್ತು ಹೆದ್ದಾರಿಯಲ್ಲಿ ಸಂಪೂರ್ಣ ಸಹಕಾರ ನೀಡುತ್ತಿರುವುದಕ್ಕಾಗಿ ಮತ್ತು ಕೋವಿಡ್ 19 ಸಾಂಕ್ರಾಮಿಕ ಸನ್ನಿವೇಶದಲ್ಲಿಯೂ ಕೂಡ ರಸ್ತೆಗಳ ನಿರ್ಮಾಣ ವಿಷಯದಲ್ಲಿ ತೋರಿರುವ ಮುತುವರ್ಜಿ, ಮಾರ್ಗದರ್ಶನ, ಆರ್ಥಿಕ ಹಾಗೂ ತಾಂತ್ರಿಕ ನೆರವು ನೀಡಿದ್ದಕ್ಕಾಗಿ ಕರ್ನಾಟಕ ಜನತೆಯ ಪರವಾಗಿ ಅವರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಹುಬ್ಬಳ್ಳಿ ನಗರದ ಜನತೆಯ ಬಹುದಿನಗಳ ಬೇಡಿಕೆ ಈಡೇರುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಅಂತೆಯೇ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿಸಲು ಹಾಗೂ ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ.ಸಿಂಗ್ ಮತ್ತು ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X