ಕಡೆಕಾರು ಗ್ರಾಪಂ ಬಿಜೆಪಿ ಬೆಂಬಲಿತ ಸದಸ್ಯೆ ಕಾಂಗ್ರೆಸ್ ಸೇರ್ಪಡೆ
ಉಡುಪಿ, ಜ.15: ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟೆಗುಡ್ಡೆ- ಕುತ್ಪಾಡಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ವೀಣಾ ಪ್ರಕಾಶ್ ಹಾಗೂ ಅವರ ಪತಿ ಪ್ರಕಾಶ್ ಬಂಗೇರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ದಿವಾಕರ್ ಎ.ಕುಂದರ್ ಇವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಕಡೆಕಾರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ತಾರಾನಾಥ್ ಕೋಟ್ಯಾನ್, ಕಾಂಗ್ರೆಸ್ ಮುಖಂಡರುಗಳಾದ ದಿನೇಶ್ ಪುತ್ರನ್, ಹರೀಶ್ ಕಿಣಿ, ಕೃಷ್ಣಮೂರ್ತಿ ಆಚಾರ್ಯ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಜತಿನ್ ಕಡೆಕಾರು, ಜ್ಯೋತಿ ಹೆಬ್ಬಾರ್, ಮಮತಾ ಶೆಟ್ಟಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕರ್ ಸ್ವಾಗತಿಸಿದರು. ಉಡುಪಿ ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಗಣೇಶ್ ನೆರ್ಗಿ ವಂದಿಸಿದರು.