Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಲಸಿಕೆಯಿಂದ ಯಾರಿಗೂ ಅಡ್ಡ...

ಕೊರೋನ ಲಸಿಕೆಯಿಂದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

243 ಸ್ಥಳಗಳಲ್ಲಿ 24,300 ಆರೋಗ್ಯ ಸಿಬ್ಬಂದಿಗೆ ಮೊದಲ ದಿನ ಲಸಿಕೆ

ವಾರ್ತಾಭಾರತಿವಾರ್ತಾಭಾರತಿ16 Jan 2021 6:31 PM IST
share
ಕೊರೋನ ಲಸಿಕೆಯಿಂದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜ. 16: ಕೊರೋನ ನಿಯಂತ್ರಣ ಲಸಿಕೆ ನೀಡಿದ ಕ್ಷಣ ಐತಿಹಾಸಿಕವಾಗಿದ್ದು, ದೊಡ್ಡ ದಾಖಲೆಯಂತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಬಣ್ಣಿಸಿದ್ದಾರೆ.

ಶನಿವಾರ ಬೆಂಗಳೂರು ವೈದ್ಯಕೀಯ ಕಾಲೇಜಿನ ಪಿಎಂಎಸ್‍ಎಸ್‍ವೈ ಆಸ್ಪತ್ರೆಯಲ್ಲಿ ಕೊರೋನ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ, ಬಿಡದಿಯ ಕೆ.ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡಲಾಯಿತು.

ನಂತರ ಮಾತನಾಡಿದ ಸಚಿವ ಸುಧಾಕರ್, ಇದು ಐತಿಹಾಸಿಕ ದಿನವಾಗಿದ್ದು, ದಾಖಲೆಯಂತಿದೆ. ಬೇರೆ ರೋಗಗಳಿಗೆ ಲಸಿಕೆ ಪಡೆಯಲು ವರ್ಷಗಳು ತಗಲಿದೆ. ಆದರೆ, 10 ತಿಂಗಳಲ್ಲಿ ಕೊರೋನ ನಿಯಂತ್ರಣ ಲಸಿಕೆ ಅಭಿವೃದ್ಧಿಪಡಿಸಲಾಗಿದೆ. ಮೊದಲು ಸಂಶೋಧಕರಿಗೆ, ಸಂಸ್ಥೆಗಳಿಗೆ ಭಾರತೀಯರು ಆಭಾರಿಯಾಗಿದ್ದಾರೆ. ಇವರಿಗೆ ಸಲಹೆ ನೀಡಿದ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಮಾರ್ಗದರ್ಶನ ನೀಡಿದ ಸಿಎಂಗೆ ಧನ್ಯವಾದಗಳು ಎಂದು ಹೇಳಿದರು.

ರಾಜ್ಯದ 243 ಸ್ಥಳಗಳಲ್ಲಿ ಕೊರೋನ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಿದ್ದು, ಇಂದು ಒಂದೇ ದಿನ 24,300 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು. ಸ್ವಚ್ಛತಾ ಸಿಬ್ಬಂದಿ ನಾಗರತ್ನ, ತಾಂತ್ರಿಕ ಸಲಹಾ ಸಮಿತಿಯ 70 ವರ್ಷದ ವೈದ್ಯರು, ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಡಾ.ಸುದರ್ಶನ್ ಬಲ್ಲಾಳ್ ಲಸಿಕೆ ಪಡೆದಿದ್ದಾರೆ. ಖ್ಯಾತ ವೈದ್ಯರು ಲಸಿಕೆ ಪಡೆಯುವ ಮೂಲಕ ಸಾರ್ವಜನಿಕರಲ್ಲಿರುವ ಅಂಜಿಕೆ ನಿವಾರಿಸಲಾಗುತ್ತಿದೆ. ಈ ಲಸಿಕೆ ಅತ್ಯಂತ ಸಮರ್ಪಕವಾಗಿರುವುದಕ್ಕೆ ವೈದ್ಯರು ಲಸಿಕೆ ಪಡೆದಿದ್ದಾರೆ ಎಂಬುದನ್ನು ಜನರು ತಿಳಿಯಬೇಕು ಎಂದು ಅವರು ಸಲಹೆ ಮಾಡಿದರು.

210 ರೂ. ಲಸಿಕೆ: ಸರಕಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಮಾಹಿತಿ ಮಾತ್ರ ಅಧಿಕೃತವಾಗಿದೆ. ಬೇರೆ ಕಡೆ ಪ್ರಕಟಿಸುವ ತಪ್ಪು ಮಾಹಿತಿಯನ್ನು ಜನರು ನಂಬಬಾರದು. ಅಡ್ಡ ಪರಿಣಾಮ ಉಂಟಾದರೆ ತಕ್ಷಣ ಸೂಕ್ತ ಚಿಕಿತ್ಸೆ ಲಭ್ಯವಿದೆ. ಕ್ಲಿನಿಕಲ್ ಟ್ರಯಲ್‍ನಲ್ಲೇ 20-30 ಸಾವಿರ ಜನರ ಮೇಲೆ ಪ್ರಯೋಗ ಮಾಡಲಾಗಿದೆ. ಆದುದರಿಂದ ಆತಂಕ ಬೇಕಿಲ್ಲ. ವಿದೇಶಗಳಲ್ಲೂ ಈ ಲಸಿಕೆಗೆ ಬೇಡಿಕೆಯಿದ್ದು, ಅತ್ಯಂತ ಕಡಿಮೆ ದರದ ಲಸಿಕೆಯಾಗಿದೆ. ಕೇವಲ 210 ರೂ.ನಲ್ಲಿ ಲಸಿಕೆ ಹಾಕಿಸಿಕೊಳ್ಳಬಹುದು. ವಿದೇಶಗಳಲ್ಲಿ 2-3 ಸಾವಿರ ರೂ.ದರವಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ, ಎರಡನೇ ಹಂತದಲ್ಲಿ ಕೋಮಾರ್ಬಿಡಿಟಿ ಇರುವವರಿಗೆ ಲಸಿಕೆ ನೀಡಲಾಗುವುದು ಎಂದರು.

ರಾಜಕೀಯ ಬೇಡ: ವಿರೋಧ ಪಕ್ಷಗಳು ಲಸಿಕೆ ವಿಚಾರವನ್ನು ರಾಜಕೀಯ ವಿಚಾರ ಮಾಡಿರುವುದಕ್ಕೆ ವಿಷಾದವಾಗಿದೆ. ಪ್ರತಿಪಕ್ಷಗಳು ಇಷ್ಟೊಂದು ಕೆಳಮಟ್ಟಕ್ಕೆ ಇಳಿಯಬಾರದು. ಈ ಲಸಿಕೆ ಪಡೆಯುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದರು. ಈಗ ಲಸಿಕೆ ಪಡೆದವರಿಗೆ ಯಾವುದೇ ಅಡ್ಡ ಪರಿಣಾಮ ಆಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅವರು ಸ್ಪಷ್ಟನೆ ನೀಡಿದರು.

ನಾನು ಪಡೆಯಬೇಕೆಂದಿದ್ದೆ: ಜಯನಗರ ಸಾರ್ವಜನಿಕ ಆಸ್ಪತ್ರೆ, ಸೇಂಟ್ ಜಾನ್ಸ್, ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆ ವಿತರಣೆ ಪ್ರಕ್ರಿಯೆಯ ಪರಿಶೀಲನೆ ನಡೆಸಿದ ಅವರು, ಲಸಿಕೆಯನ್ನು ಮೊದಲಿಗೆ ನಾನು ಕೂಡ ಪಡೆಯಬೇಕೆಂದಿದ್ದೆ. ಆದರೆ, ಮೊದಲ ಹಂತದಲ್ಲಿ ಕೊರೋನ ಯೋಧರಿಗೆ ನೀಡಬೇಕೆಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ವಿವರಣೆ ನೀಡಿದರು.

ಲಸಿಕೆ ವಿತರಣೆಗೆ ಇನ್ನಷ್ಟು ವ್ಯವಸ್ಥೆ ಮಾಡಲಾಗುವುದು. ಒಂದು ವಾರದಲ್ಲೇ ಆರೋಗ್ಯ ಸಿಬ್ಬಂದಿಗೆ ಲಸಿಕೆ ವಿತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಕಾಂಗ್ರೆಸ್‍ನವರು ವಿಐಪಿ ಸಂಸ್ಕೃತಿಯಿಂದ ಹೊರಬರುವುದಿಲ್ಲ. ಅವರಿಗೆ ಇನ್ನೂ ಬುದ್ಧಿ ಬಂದಿಲ್ಲ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಾಗಿಲ್ಲ. ಜನರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X