ಪುತ್ತೂರು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿ ಎಸ್.ಜಿ.ಕೃಷ್ಣ ಆಯ್ಕೆ
ಪುತ್ತೂರು ತಾಲೂಕು 20ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ, ಸಾಹಿತಿ ಎಸ್.ಜಿ. ಕೃಷ್ಣ ಅವರು ಆಯ್ಕೆಯಾಗಿದ್ದಾರೆ.
ಪುತ್ತೂರು ತಾಲೂಕಿನ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಆವರಣದಲ್ಲಿ ತಾಲೂಕು ಮಟ್ಟದ 20ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಫೆ.7ರಂದು ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿವೃತ್ತ ಸಹಾಯಕ ಶಿಕ್ಷಣಾಧಿಕಾರಿಯಾಗಿರುವ ಸಾಹಿತಿ, ಕೃಷಿಕ ಎಸ್.ಜಿ. ಕೃಷ್ಣ ಅವರನ್ನು ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮತ್ತು ತಾಲೂಕು ಕಸಾಪ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ಅವರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story