Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ...

ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ16 Jan 2021 10:46 PM IST
share
ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜ.16: ರಾಜ್ಯದಲ್ಲಿ ಕೊರೋನ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ ವೀಡಿಯೋ ಸಂವಾದ ನಡೆದ ಬಳಿಕ ಮಾತನಾಡಿದ ಸಚಿವರು, ಶೇ.62ರಷ್ಟು ಮಂದಿ ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಂಡಿದ್ದು, ಬಹಳ ಆಶಾದಾಯಕವಾಗಿದೆ. ಮೊದಲ ದಿನ 21,658 ಮಂದಿಗೆ ಲಸಿಕೆ ನೀಡಬೇಕೆಂದು ನಿಗದಿಯಾಗಿತ್ತು. ಈ ಪೈಕಿ 13,408 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಯಾರಿಗೂ ಗಂಭೀರ ಸಮಸ್ಯೆ, ಅಡ್ಡ ಪರಿಣಾಮ ಕಂಡುಬಂದಿಲ್ಲ. ಚುಚ್ಚುಮದ್ದು ನೀಡಿದಾಗ ಕೆಲವರಿಗೆ ಊತ ಬಂದಿರಬಹುದು. ಆದರೆ ಅದು ಕೇವಲ ಅರ್ಧಗಂಟೆಯಲ್ಲಿ ಕಡಿಮೆಯಾಗಿ ಮನೆಗೆ ತೆರಳಿದ್ದಾರೆ ಎಂದರು.

ಸೋಮವಾರದಿಂದ ಮತ್ತೆ ಹೆಚ್ಚು ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ರವಿವಾರ ಹೆಚ್ಚಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ. ನಾನು ನಾನಾ ಭಾಗಗಳಲ್ಲಿ ಸಂಚರಿಸಿ ಲಸಿಕೆ ಪಡೆಯುವಂತೆ ಉತ್ತೇಜಿಸಲಿದ್ದೇನೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಶೇ.84ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ. ಉತ್ತರ ಕನ್ನಡದಲ್ಲಿ ಶೇ.80ರಷ್ಟು ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಅಂದರೆ, ಶೇ.37ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ. ದ.ಕ ಜಿಲ್ಲೆಯಲ್ಲಿ 660 ಮಂದಿಗೆ ಲಸಿಕೆ ನೀಡುವ ಗುರಿ ಇದ್ದು, 223 ಮಂದಿ ಮಾತ್ರ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದು ವಿದ್ಯಾವಂತರ ಜಿಲ್ಲೆಯಾಗಿದ್ದು, ಹೆಚ್ಚಿನವರು ಲಸಿಕೆ ಪಡೆಯಬೇಕು ಎಂದು ಕೋರಿದರು.

ಬೆಂಗಳೂರು ನಗರದಲ್ಲಿ ಶೇ.62: ಬೆಂಗಳೂರು ನಗರದಲ್ಲಿ ಶೇ.53ರಷ್ಟು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.65ರಷ್ಟು ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಳ್ಳಲಾಗಿದೆ. ಮಲ್ಲಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಡಿಮೆ ಪ್ರಮಾಣದಲ್ಲಿ ಶೇ.28ರಷ್ಟು ಆಗಿದೆ. ಮೊದಲ ದಿನ ಲಸಿಕೆ ಪಡೆಯದವರು ಮುಂದಿನ ದಿನಗಳಲ್ಲಿ ಲಸಿಕೆ ಪಡೆಯಲಿದ್ದಾರೆ.

ರಾಜ್ಯದಲ್ಲಿ 7.43 ಲಕ್ಷ ಮಂದಿಯನ್ನು ಗುರುತಿಸಿದ್ದು, 8 ಲಕ್ಷ ಲಸಿಕೆ ಬಂದಿದೆ. ಇನ್ನೂ 8 ಲಕ್ಷ ಲಸಿಕೆ ಕಳುಹಿಸಿಕೊಡಬೇಕೆಂದು ಕೇಂದ್ರ ಸರಕಾರಕ್ಕೆ ಕೋರಲಾಗಿದೆ ಎಂದರು.

ಪೌರಕಾರ್ಮಿಕರೊಬ್ಬರಿಗೆ ಮೊದಲ ಲಸಿಕೆ ನೀಡುವ ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆ ಪ್ರತಿಪಕ್ಷಗಳಿಗೆ ಅರ್ಥವಾಗಿಲ್ಲ. ಆದರೆ ಸಾಮಾನ್ಯ ಜನರಿಗೆ ಅರ್ಥವಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X