ಅರಣ್ಯ ರಕ್ಷಣೆಯಲ್ಲಿ ರಕ್ಷಕ, ವೀಕ್ಷಕರ ಪಾತ್ರ ಮುಖ್ಯ: ಆಶಿಶ್ ರೆಡ್ಡಿ

ಉಡುಪಿ, ಜ.17: ಕರ್ನಾಟಕ ರಾಜ್ಯ ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಹೊಸ ವರ್ಷದ ಡೈರಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಸಮಾರಂಭ ವನ್ನು ಉಡುಪಿ ಕಿದಿಯೂರು ಹೊಟೇಲ್‌ನ ಪವನ್ ರೂಫ್ ಟಾಪ್ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಎಂ.ವಿ. ಮಾತನಾಡಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬಂದಿಗಳು ಸಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಅರಣ್ಯ ರಕ್ಷಣೆಯಲ್ಲಿ ಅರಣ್ಯ ರಕ್ಷಕ ಮತ್ತು ವೀಕ್ಷಕರು ಪಾತ್ರ ಬಹಳ ಮುಖ್ಯವಾಗಿದೆ. ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿ ಸಾರ್ವ ಜನಿಕರಿಗೆ ಉತ್ತಮವಾದ ಸೇವೆ ನೀಡಿ ಬಾಂಧವ್ಯವ್ನು ವೃದ್ಧಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಿವೃತ್ತ ಅರಣ್ಯ ಮತ್ತು ವೀಕ್ಷಕರಾದ ಪ್ರಭಾಕರ್ ಬಿಲ್ಲವ, ಭವಾನಿ ಶಂಕರ್ ಪುತ್ರನ್, ಜೋಗು ಪೂಜಾರಿ ಅವರನ್ನು ಸಮ್ಮಾನಿಸಲಾಯಿತು. ಮುಖ್ಯಮಂತ್ರಿ ಪದಕ ವಿಜೇತ ಕೊಲ್ಲೂರು ವಲಯ ಅರಣ್ಯ ರಕ್ಷಕ ತಿಮ್ಮಪ್ಪ, ಸಮಾಜ ಸೇವಕ ರಾದ ಜೋಸೆಫ್ ರೋಬೆಲ್ಲೋ, ಸುರೇಂದ್ರ ನಾಯ್ಕೋ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಂಜುನಾಥ ಗಣಪತಿ ನಾಯ್ಕ ವಹಿಸಿ ದ್ದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್, ಮಾರ್ಕಂಡೇಯ, ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ, ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಜಿ.ಡಿ.ದಿನೇಶ್, ಸರಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಅಂಪಾರು, ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ರಾಜ್ಯ ಅರಣ್ಯ ರಕ್ಷಕ -ವೀಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜ್ ಚೌಹಾಣ್, ಮಂಗಳೂರು ಸಂಘದ ಅಧ್ಯಕ್ಷ ಜಗದೀಶ್ ಕೆ.ಎನ್., ಗೌರವ ಸಲಹೆಗಾರ ಬಸಪ್ಪ ಹಲಗೇರ ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಕೇಶವ ಪೂಜಾರಿ ಸ್ವಾಗತಿಸಿದರು. ಗೌರವಾಧ್ಯಕ್ಷ ಎಚ್.ದೇವರಾಜ ಪಾಣ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಕಳ ವಲಯದ ಪ್ರಧಾನ ಕಾರ್ಯದರ್ಶಿ ಮಾಂತೇಶ್ ಕಾರ್ಯಕ್ರಮ ನಿರೂಪಿಸಿದರು.







