Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫೆ.6ರಂದು ಜನರಲ್ ತಿಮ್ಮಯ್ಯ ಮ್ಯೂಸಿಯಂ...

ಫೆ.6ರಂದು ಜನರಲ್ ತಿಮ್ಮಯ್ಯ ಮ್ಯೂಸಿಯಂ ರಾಷ್ಟ್ರಪತಿಗಳಿಂದ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ17 Jan 2021 10:44 PM IST
share
ಫೆ.6ರಂದು ಜನರಲ್ ತಿಮ್ಮಯ್ಯ ಮ್ಯೂಸಿಯಂ ರಾಷ್ಟ್ರಪತಿಗಳಿಂದ ಉದ್ಘಾಟನೆ

ಮಡಿಕೇರಿ,ಜ.17 : ಭಾರತೀಯ ಸೇನೆಯಲ್ಲಿ ಅಪ್ರತಿಮ ಸಾಧನೆ ತೋರುವುದರೊಂದಿಗೆ ಪುಟ್ಟ ಜಿಲ್ಲೆ ಕೊಡಗಿನ ಕೀರ್ತಿಯನ್ನು ದೇಶ-ವಿದೇಶಗಳಿಗೆ ಹಬ್ಬಿಸಿದ ಜನರಲ್ ತಿಮ್ಮಯ್ಯ ಅವರು ಜನಿಸಿದ ಮನೆ 'ಸನ್ನಿಸೈಡ್' ನ್ನು ಮ್ಯೂಸಿಯಂ ಆಗಿ ಪರಿವರ್ತಿಸಲಾಗಿದ್ದು ಫೆ.6ರಂದು ಲೋಕಾರ್ಪಣೆಗೊಳ್ಳಲಿದೆ.

ಮ್ಯೂಸಿಯಂ ಉದ್ಘಾಟನೆಗೆ ಸ್ವತಃ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೇ ಕೊಡಗಿಗೆ ಆಗಮಿಸಲಿದ್ದು, ಅಂದು ಅಪರಾಹ್ನ 3.15ರಿಂದ 4 ಗಂಟೆಯವರೆಗೆ ಕಾರ್ಯಕ್ರಮ ನಿಗದಿಯಾಗಿದೆ.

ತಿಮ್ಮಯ್ಯ ಅವರು ಹುಟ್ಟಿದ ಮನೆ `ಸನ್ನಿ ಸೈಡ್'ನಲ್ಲಿ ಜನರಲ್ ತಿಮ್ಮಯ್ಯ ಮ್ಯೂಸಿಯಂ ನಿರ್ಮಾಣವಾಗಿದ್ದು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷ  ಕರ್ನಲ್ ಕೆ.ಸಿ. ಸುಬ್ಬಯ್ಯ ಅವರ  ಆಹ್ವಾನದ ಮೇರೆಗೆ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಲಿದ್ದಾರೆ. 

ಅಪ್ರತಿಮ ಸೇನಾನಿ ಪದ್ಮಭೂಷಣ ಖ್ಯಾತಿಯ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಸೇನಾ ಬದುಕಿನ ಐತಿಹ್ಯ ಅವರ ಸಾಧನೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ  2006ರ ಬಜೆಟ್‍ನಲ್ಲಿ `ಸನ್ನಿಸೈಡ್' ನಿವಾಸವನ್ನು ತಿಮ್ಮಯ್ಯ ಸ್ಮಾರಕ ಭವನವನ್ನಾಗಿ ಪರಿವರ್ತಿಸುವ ಯೋಜನೆಯನ್ನು ಪ್ರಕಟಿಸಿತ್ತು.

ಆದರೆ ಆ ಸಂದರ್ಭ ಈ ಜಾಗ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀನದಲ್ಲಿತ್ತು. ಈ ಇಲಾಖೆಯಿಂದ ಇದನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವಾಪಾಸ್ಸು ಪಡೆಯುವುದೂ ಸೇರಿದಂತೆ ಅನುದಾನ ಬಿಡುಗಡೆಯಲ್ಲಿ ವಿಳಂಬ, ಆಡಳಿತಾತ್ಮಕ ವಿಚಾರ ನಂತರದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆ ಮತ್ತಿತರ ಕಾರಣಗಳಿಂದಾಗಿ ಈ ಯೋಜನೆ ಕಾರ್ಯಗತವಾಗಲು 15 ವರ್ಷಗಳೇ ಹಿಡಿದಿವೆ. ಈ ನಡುವೆ ಫೀ.ಮಾ. ಕಾರ್ಯಪ್ಪ-ಜನರಲ್ ತಿಮ್ಮಯ್ಯ ಫೋರಂನ ಪ್ರಮುಖರು ಸಾಕಷ್ಟು ಪ್ರಯತ್ನವನ್ನು ಈ ನಿಟ್ಟಿನಲ್ಲಿ ನಡೆಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಜಿಲ್ಲಾಡಳಿತ, ಜನಪ್ರತಿನಿಧಿಗಳ ಪ್ರಯತ್ನವೂ ಇದರಲ್ಲಿದ್ದು, ಇದೀಗ ತಿಮ್ಮಯ್ಯ ಅವರು ಜನಿಸಿದ ಮನೆ ಜನಾಕರ್ಷಣೆಯ ತಾಣವಾಗಿ ರೂಪುಗೊಳ್ಳಲಿದೆ.

ವಿಶೇಷ ಆಕರ್ಷಣೆಗಳು: ಹಳೆಯ ಮನೆಯನ್ನೇ ವ್ಯವಸ್ಥಿತವಾಗಿ ಯಥಾಸ್ಥಿತಿಯಲ್ಲಿ ಕಾಪಾಡಿಕೊಳ್ಳಲಾಗಿದ್ದು, ತಿಮ್ಮಯ್ಯ ಅವರ ಹುಟ್ಟಿನಿಂದ ಅವರ ಬದುಕು-ಸಾಹಸ ಸಾಧನೆಗಳ ಯಶೋಗಾಥೆಯನ್ನು ಬಿಂಬಿಸುವ ಪ್ರಯತ್ನ ನಡೆದಿದೆ. ಮನೆ ಒಳಭಾಗದ ವಿನ್ಯಾಸ ವಿವಿಧ ಬಗೆಯ ಆಯುಧಗಳು, ಭಾವಚಿತ್ರಗಳು ಗಮನ ಸೆಳೆಯಲಿವೆ.

ಕೇಂದ್ರದ ಹೊರ ಆವಣರದಲ್ಲಿ ಯುದ್ಧ ಸ್ಮಾರಕ, ಯುದ್ಧ ವಿಮಾನ, ಟ್ಯಾಂಕರ್, ಬೃಹತ್ ಗಾತ್ರದ ಸೇನಾ ಬೂಟ್‍ಗಳು ನೋಡುಗರಲ್ಲಿ ಜನರಲ್ ತಿಮ್ಮಯ್ಯ ಅವರ ಬದುಕನ್ನು ನೆನಪಿಸುತ್ತವೆ. ಆಡಿಯೋ-ವೀಡಿಯೋ ಮೂಲಕವೂ ಮಾಹಿತಿಗಳೂ ಇಲ್ಲಿ ಲಭ್ಯವಾಗಲಿದೆ.

ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಮಧುಕರ್ ಪವಾರ್ ಅವರು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಇತ್ತೀಚೆಗಷ್ಟೆ ದಕ್ಷಿಣ ವಲಯ ಐಜಿಪಿಯಾಗಿ ಅಧಿಕಾರ ವಹಿಸಿಕೊಂಡಿರುವ ಅವರು ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಹಾಗೂ ಅಧಿಕಾರಿಗಳೊಂದಿಗೆ ಇಲಾಖೆಯ ಕಾರ್ಯವೈಖರಿ ಕುರಿತು ಚರ್ಚಿಸಿದ್ದು, ಬಳಿಕ ಜನರಲ್ ತಿಮ್ಮಯ್ಯ ಮ್ಯೂಸಿಯಂ ಸ್ಥಳ, ಹೆಲಿಪ್ಯಾಡ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X