Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುವೆಂಪು ತವರೂರಲ್ಲೇ ಕನ್ನಡ ಕಡೆಗಣನೆ...

ಕುವೆಂಪು ತವರೂರಲ್ಲೇ ಕನ್ನಡ ಕಡೆಗಣನೆ ಸರಿಯಲ್ಲ: ಸಿಎಂಗೆ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಪತ್ರ

ವಾರ್ತಾಭಾರತಿವಾರ್ತಾಭಾರತಿ18 Jan 2021 7:45 PM IST
share
ಕುವೆಂಪು ತವರೂರಲ್ಲೇ ಕನ್ನಡ ಕಡೆಗಣನೆ ಸರಿಯಲ್ಲ: ಸಿಎಂಗೆ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಪತ್ರ

ಬೆಂಗಳೂರು, ಜ.18: ದಕ್ಷಿಣ ರಾಜ್ಯಗಳಲ್ಲಿ ಹಿಂದಿ ಹೇರಿಕೆ ವಿಕೋಪಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಜ.16ರಂದು ನಡೆದ ಸರಕಾರಿ ಕಾರ್ಯಕ್ರಮವಾದ ಕ್ಷಿಪ್ರ ಕಾರ್ಯಪಡೆ ಘಟಕ ಶಿಲಾನ್ಯಾಸದ ಸಂದರ್ಭದಲ್ಲಿ ಕನ್ನಡ ಸಾಹಿತ್ಯಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಕುವೆಂಪುರವರ ತವರೂರಲ್ಲೆ ಕನ್ನಡ ಕಡೆಗಣಿಸಿರುವುದು ಸರಿಯಲ್ಲ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಜ.16ರಂದು ಕೇಂದ್ರ ಗೃಹ ಮಂತ್ರಿಗಳು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊರವಲಯದಲ್ಲಿರುವ ಮಿಲಿಟರಿ ಕ್ಯಾಂಪ್‍ನಲ್ಲಿ ಕ್ಷಿಪ್ರ ಕಾರ್ಯಪಡೆ ಘಟಕಕ್ಕೆ ಅಡಿಪಾಯ ಹಾಕಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಈ ಹಿಂದೆ ಅವರು ತಮಿಳುನಾಡಿಗೆ ಭೇಟಿ ಕೊಟ್ಟಿದ್ದಾಗ ತಮಿಳು ಭಾಷೆಯ ಫಲಕಗಳು, ಫ್ಲೆಕ್ಸ್ ಬೋರ್ಡ್‍ಗಳು ಹಾಗೆ ಮಧ್ಯಪ್ರದೇಶದ ಭೇಟಿಯ ಸಮಯದಲ್ಲಿ ಹಿಂದಿ ಭಾಷೆಯ ಫಲಕಗಳು, ಫ್ಲೆಕ್ಸ್ ಬೋರ್ಡ್ ಗಳನ್ನು ರಾರಾಜಿಸಿ ಅವರ ಮಾತೃಭಾಷೆಯ ಮಹತ್ವವನ್ನು ಮೆರೆದರು ಎಂದು ತಿಳಿಸಿದ್ದಾರೆ.

ಆದರೆ, ಕನ್ನಡದ ಮುಕುಟಮಣಿಗೆ ಮೊದಲ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಕುವೆಂಪುರವರ ತವರು ಜಿಲ್ಲೆಯಾದ ಶಿವಮೊಗ್ಗಕ್ಕೆ ಭೇಟಿ ಕೊಟ್ಟಾಗ ಭಾಷೆ ಸೂಕ್ಷ್ಮ ವಿಚಾರವಾಗಿದ್ದರು ಈಗಾಗಲೆ ರಾಜ್ಯ ಪಾಲಿಸುತ್ತಿರುವ ತ್ರಿಭಾಷಾ ಸೂತ್ರವನ್ನೇ ಮರೆತು ಕೇಂದ್ರಗಳ ವಲಯಗಳಲ್ಲಿ ರಾಜ್ಯ ಮೂರನೆ ಸಾಲಿನಲ್ಲಿ ಸೇರುತ್ತವೆ ಎಂಬುದನ್ನು ಮರೆತು ಒಂದು ರಾಜಕೀಯ ಪಕ್ಷದ ಖಾಸಗಿ ಕಾರ್ಯಕ್ರಮದಂತೆ ಕೇಂದ್ರ ನಾಯಕರನ್ನು ಮೆಚ್ಚಿಸಲು ಕನ್ನಡವನ್ನು ಕಡೆಗಣಿಸಿ ಕೇವಲ ಹಿಂದಿ ಭಾಷೆಯ ಫಲಕಗಳನ್ನು ಮೆರೆಸಿ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿದ್ದೀರಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದಾರೆ.

ಈಗಾಗಲೇ ಎಷ್ಟೋ ವಿಚಾರಗಳಾದ ನಾಡು, ನುಡಿ, ಗಡಿ ವಿಚಾರಗಳಿಗೆ ಸಂಬಂಧಿಸಿದಂತೆ ಕನ್ನಡ ಹೋರಾಟಗಾರರ ಪರ ಸರಕಾರ ನಿಲ್ಲದೆ ಇರುವುದು ದುರ್ದೈವದ ಸಂಗತಿ. ಇದೆ ರೀತಿಯ ಆನೆ ನಡೆದದ್ದೆ ದಾರಿ ಎಂಬ ಧೋರಣೆ ಪ್ರಜಾಪ್ರಭುತ್ವದಲ್ಲಿ ಸಲ್ಲದು, ಇದಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಚಂದ್ರಶೇಖರ್ ಆಗ್ರಹಿಸಿದ್ದಾರೆ.

ಹಾಗು ತಮ್ಮ ಸರಕಾರ ಅಧಿಕಾರ ನಡೆಸುತ್ತಿರುವುದು ಪ್ರಜ್ಞಾವಂತ, ಸ್ವಾಭಿಮಾನಿ ಕನ್ನಡ ಮತಬಾಂಧವರಿಂದಲೇ ಎಂಬುದನ್ನು ಮರೆಯಬಾರದು. ಈಗಾಗಲೇ ದಕ್ಷಿಣ ರಾಜ್ಯಗಳಲ್ಲಿ ಹಿಂದಿ ಹೇರಿಕೆಯ ವಿಚಾರ ವಿಕೋಪಕ್ಕೆ ಹೋಗುತ್ತಿದ್ದು ಇದು ಗಾಯದ ಮೇಲೆ ಬರೆ ಎಳೆದಂತೆ ಆಗುವುದಿಲ್ಲವೇ, ಇದು 7.5 ಕೋಟಿ ಕನ್ನಡಿಗರ ಸರಕಾರವೇ ಹೊರತು ಹಿಂದಿ ಭಾಷಿಗರ ಸರಕಾರವಲ್ಲ. ಆದುದರಿಂದ ನಾಡು, ನುಡಿ, ಗಡಿಯನ್ನು ಕಾಪಾಡಬೇಕಾದ ಸರಕಾರಗಳೇ ಈ ರೀತಿ ವರ್ತಿಸುವುದನ್ನು ಬಿಟ್ಟು ಮುಂದಿನ ದಿನಗಳಲ್ಲಿ ಈ ರೀತಿಯ ಅಚಾತುರ್ಯ ನಡೆಯದಂತೆ ಕನ್ನಡಿಗರ ಹಿತ ಕಾಯಬೇಕೆಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X