Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋಹತ್ಯೆ ನಿಷೇಧ ಕಾಯಿದೆ ಬಗ್ಗೆ...

ಗೋಹತ್ಯೆ ನಿಷೇಧ ಕಾಯಿದೆ ಬಗ್ಗೆ ಗ್ರಾಮಸಭೆಗಳಲ್ಲಿ ಮಾಹಿತಿ: ಸಚಿವ ಪ್ರಭು ಚವ್ಹಾಣ್

ವಾರ್ತಾಭಾರತಿವಾರ್ತಾಭಾರತಿ19 Jan 2021 7:21 PM IST
share
ಗೋಹತ್ಯೆ ನಿಷೇಧ ಕಾಯಿದೆ ಬಗ್ಗೆ ಗ್ರಾಮಸಭೆಗಳಲ್ಲಿ ಮಾಹಿತಿ: ಸಚಿವ ಪ್ರಭು ಚವ್ಹಾಣ್

ಉಡುಪಿ, ಜ.19: ರಾಜ್ಯದಲ್ಲಿ ಜಾರಿಗೆ ಬಂದಿರುವ ಜಾನುವಾರು ಹತ್ಯೆ ಪ್ರತಿ ಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ-2020 ಬಗ್ಗೆ ಇಲಾಖಾಧಿಕಾರಿಗಳು ಗ್ರಾಮಸಭೆಗಳನ್ನು ನಡೆಸಿ ಜನರಿಗೆ ಮಾಹಿತಿ ನೀಡುವ ಕಾರ್ಯ ಮಾಡಬೇಕು ಎಂದು ರಾಜ್ಯ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ಬಗ್ಗೆ ಚರ್ಚೆ ಹಾಗೂ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಈ ಕಾಯಿದೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಈ ವಿಚಾರದಲ್ಲಿ ಅಧಿಕಾರಿಗಳ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಗ್ರಾಮಸಭೆಗಳ ನಡೆಸಿರುವ ಮಾಹಿತಿಗಳನ್ನು ನನ್ನ ವಾಟ್ಸಾಪ್ ನಂಬರ್‌ಗಳಿಗೆ ಕಳುಹಿಸಬೇಕು ಎಂದು ಅವರು ಹೇಳಿದರು.

ಗೋಹತ್ಯೆ ಸಂಬಂಧಿತ ಪ್ರಕರಣದ ತ್ವರಿತ ವಿಚಾರಣೆ ಹಾಗೂ ಇತ್ಯರ್ಥಕ್ಕಾಗಿ ಜಿಲ್ಲೆಗಳಲ್ಲಿ ವಿಶೇಷ ಕೋರ್ಟ್‌ಗಳನ್ನು ಸ್ಥಾಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದ ಅವರು, ತಾಲೂಕು ಮಟ್ಟದಲ್ಲಿ ಸರಕಾರದಿಂದ ಗೋಶಾಲೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಗಳೊಂದಿಗೆ ಜೊತೆ ಚರ್ಚೆ ಮಾಡಿದ್ದೇನೆ ಎಂದರು.

ಪಶು ವೈದ್ಯರು ಗ್ರಾಮೀಣ ಪ್ರದೇಶಗಳಿಗೆ, ಗೋಶಾಲೆಗಳಿಗೆ ಹಾಗೂ ಆಸ್ಪತ್ರೆಗಳಿಗೆ ಹೋಗುತ್ತಿಲ್ಲ ಮತ್ತು ಜನರ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದೆ. ಮುಂದೆ ಈ ರೀತಿಯ ಮಾಡದೆ ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು. ನಾವು ಜಾರಿಗೆ ತರುವ ಕಾನೂನು ಗಳನ್ನು ಸರಿಯಾಗಿ ಅನುಷ್ಠಾನ ತರಬೇಕಾದವರು ಅಧಿಕಾರಿಗಳು. ಹಾಗಾಗಿ ನೀವು ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡಬೇಕು ಎಂದು ಅವರು ಸೂಚನೆ ನೀಡಿದರು.

ಇದಕ್ಕೆ ಉತ್ತರಿಸಿದ ಇಲಾಖೆ ಉಪನಿರ್ದೇಶಕ ಡಾ.ಹರೀಶ್ ತಾಮನ್ಕರ್, ಜಿಲ್ಲೆಯಲ್ಲಿ 352 ಹುದ್ದೆಗಳ ಪೈಕಿ ಕೇವಲ 97 ಹುದ್ದೆಗಳು ಮಾತ್ರ ಭರ್ತಿ ಯಾಗಿವೆ. ಇದರಿಂದ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇಡೀ ರಾಜ್ಯದಲ್ಲಿ 90ಸಾವಿರ ವೈದ್ಯರ ಹುದ್ದೆ ಖಾಲಿ ಇವೆ. ಮುಂದೆ ಹಂತಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪೊಲೀಸ್ ಇಲಾಖೆಯು ಗೋಸಾಗಾಟಕ್ಕೆ ಸಂಬಂಧಿಸಿ ತುಂಬಾ ಅಲರ್ಟ್ ಆಗಿರಬೇಕು. ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ತೆರಳಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡ ಬಾರದು ಎಂದು ಸಚಿವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಕ್ರಮ ಗೋ ಸಾಗಾಟವನ್ನು ತಡೆಯುವವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಕೊಳ್ಳಬಾರದು ಎಂದು ಶಾಸಕ ಕೆ.ರಘುಪತಿ ಟ್ ಸಚಿವರಲ್ಲಿ ವಿನಂತಿಸಿಕೊಂಡರು.

ಜಿಲ್ಲೆಯಲ್ಲಿ ಒಟ್ಟು 605 ವಕ್ಫ್ ಆಸ್ತಿಗಳಿದ್ದು, 142 ಸಂಸ್ಥೆಗಳಿವೆ. ಜಿಲ್ಲೆಯಲ್ಲಿ ರುವ ಒಂದು ಈದ್ಗಾ ಮತ್ತು 142 ಮಸೀದಿಗಳಿವೆ. ಜಿಲ್ಲೆಯ 12 ಸಂಸ್ಥೆಗಳಿಗೆ ಕಂಪೌಂಡ್ ವಾಲ್ ಮತ್ತು ದುರಸ್ತಿಗೆ 25ಲಕ್ಷ ರೂ. ಅನುದಾನ ಬಿಡುಗಡೆ ಯಾಗಿದೆ ಎಂದು ವಕ್ಫ್ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಇಲಾಖೆಯ ವಿಶೇಷ ಅಧಿಕಾರಿ ಡಾ.ಜಯಪ್ರಕಾಶ್ ಹಾಗೂ ತಾಲೂಕು ಮಟ್ಟದ ಇಲಾಖಾಧಿಕಾರಿಗಳು, ಉಡುಪಿಯ ಪ್ರಭಾರ ವಕ್ಫ್ ಅಧಿಕಾರಿ ಅನ್ವರ್ ಮುಸ್ತಫಾ, ಕಚೇರಿ ಸಹಾಯಕ ಮುಜಾಯಿದ್ ಪಾಷಾ ಉಪಸ್ಥಿತರಿದ್ದರು.

ಪ್ರತಿ ತಾಲೂಕಿನಲ್ಲಿ ಗೋಶಾಲೆ ಸ್ಥಾಪನೆ

ಜಿಲ್ಲೆಯಲ್ಲಿರುವ ಗೋಶಾಲೆಗಳಿಗೆ ಸರಕಾರದಿಂದ ಅನುದಾನ ನೀಡಲಾಗು ತ್ತಿದ್ದು, ಮುಂದೆ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸುವ ಬಗ್ಗೆ ಚಿಂತನೆ ಮಾಡಲಾಗಿದೆ. ಇದಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಹಣ ತೆಗೆದಿರಿಸಲು ಯೋಜಿಸಲಾಗಿದೆ ಎಂದು ಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು.

ಸುಗ್ರಿವಾಜ್ಞೆಯ ಮೂಲಕ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯಿದೆ ಯನ್ನು ಆರು ತಿಂಗಳ ಒಳಗೆ ಮತ್ತೆ ವಿಧಾನ ಪರಿಷತ್‌ನಲ್ಲಿ ಮಂಡಿಸುತ್ತೇವೆ. ಕಳೆದ 25-30 ವರ್ಷಗಳಿಂದ ರಾಜ್ಯದಲ್ಲಿ ಪಶು ವೈದ್ಯರ ಬಹಳ ದೊಡ್ಡ ಕೊರತೆ ಇದೆ. ಈ ಬಗ್ಗೆ ನೇಮಕಾತಿ ಮಾಡಲು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇನೆ. ಕೋವಿಡ್ ಕಾರಣದಿಂದ ಅದು ವಿಳಂಬ ಆಗಿದೆ. ಮುಂದೆ ಪ್ರುತ್ನ ಮಾಡಲಾಗುವುದು ಎಂದರು.

ಗೋಹತ್ಯೆ ನಿಷೇಧ ಕಾಯಿದೆಗೆ ಸಂಬಂಧಿಸಿ ರಾಜ್ಯದಲ್ಲಿ ಬೆಂಗಳೂರು ಕೇಂದ್ರವಾಗಿ ವಾರ್ ರೂಮ್ ಸ್ಥಾಪಿಸಲಾಗುವುದು. ಇಲ್ಲಿಗೆ ಜನರು ಗೋ ಸಾಗಾಟ ಹಾಗೂ ಗೋ ಹತ್ಯೆ ಕುರಿತು ಮಾಹಿತಿ ನೀಡಬಹುದಾಗಿದೆ. ಅದೇ ರೀತಿ ರಾಜ್ಯಕ್ಕೆ ಒಟ್ಟು 25 ಪಶು ಸಂಜೀವಿನಿ ನೀಡಲಾಗುವುದು. ಪ್ರಾಣಿ ಕಲ್ಯಾಣ ಮಂಡಳಿ ಮತ್ತು ಕಾನೂನು ಸೇವಾ ಆಯೋಗವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

-ಪ್ರಭು ಬಿ.ಚವ್ಹಾಣ್, ಪಶುಸಂಗೋಪನೆ ಸಚಿವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X