Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಮರಾಠ ಪ್ರಾಧಿಕಾರ ರಚನೆ' ತೀರ್ಮಾನವೆ...

'ಮರಾಠ ಪ್ರಾಧಿಕಾರ ರಚನೆ' ತೀರ್ಮಾನವೆ ಉದ್ಧವ್ ಠಾಕ್ರೆ ಹೇಳಿಕೆಗೆ ಪ್ರೇರಣೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ19 Jan 2021 7:37 PM IST
share
ಮರಾಠ ಪ್ರಾಧಿಕಾರ ರಚನೆ ತೀರ್ಮಾನವೆ ಉದ್ಧವ್ ಠಾಕ್ರೆ ಹೇಳಿಕೆಗೆ ಪ್ರೇರಣೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.19: ರಾಜ್ಯದ ಗಡಿ ವಿಚಾರ ಮುಗಿದ ಅಧ್ಯಾಯ. ಎಲ್ಲವೂ ಸರಿಯಾಗಿ ಇತ್ಯರ್ಥವಾಗಿದೆ. ಉದ್ಧವ್ ಠಾಕ್ರೆ ಅವರ ಹೇಳಿಕೆ ರಾಜಕೀಯ ಪ್ರೇರಿತ. ರಾಜ್ಯ ಸರಕಾರ ಅನಗತ್ಯವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನಿಸಿದ್ದೆ, ಠಾಕ್ರೆ ಅವರ ಹೇಳಿಕೆಗೆ ಪ್ರೇರಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಮಂಗಳವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಗಳ ವಿಂಗಡನೆಯಾಗುವಾಗ ತೆಗೆದುಕೊಂಡ ಗಡಿ ತೀರ್ಮಾನ ಈಗ ಮುಗಿದ ಅಧ್ಯಾಯ. ಕರ್ನಾಟಕ ಭೂಪಟ ಸ್ಪಷ್ಟವಾಗಿದ್ದು, ನಮ್ಮ ಊರು, ಗ್ರಾಮಗಳೆಲ್ಲ ವಿಂಗಡಣೆ ಆಗಿವೆ. ನಾವು ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. ನಮ್ಮಿಂದ ಒಂದಿಂಚೂ ಅವರಿಗೆ ಹೋಗುವುದಿಲ್ಲ, ಅವರಿಂದಲೂ ಒಂದಿಂಚೂ ನಮಗೆ ಬರುವುದಿಲ್ಲ ಎಂದರು.

ಗಡಿ ವಿಚಾರದಲ್ಲಿ ಮಹಾಜನ್ ವರದಿ ಇದೆ. ಎಲ್ಲ ಭಾಗದ ಗಡಿ ನಿಗದಿಯಾಗಿದೆ. ಗೊಂದಲ ಸೃಷ್ಟಿಸಲು, ರಾಜಕೀಯ ಉದ್ದೇಶದಿಂದ ಠಾಕ್ರೆ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಕರ್ನಾಟಕ ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ನಿರ್ಧಾರ ಉದ್ಧವ್ ಠಾಕ್ರೆ ಅವರ ಹೇಳಿಕೆಗೆ ಪ್ರೇರಣೆ. ರಾಜ್ಯದಲ್ಲಿನ ಮರಾಠಿಗರ ಅಭಿವೃದ್ಧಿಗೆ ಎಲ್ಲ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ ಮರಾಠ ಪ್ರಾಧಿಕಾರ ಅನಗತ್ಯವಾಗಿತ್ತು. ಇದರಿಂದ ಈ ವಿವಾದ ಎದ್ದಿದೆ ಎಂದು ಅವರು ಹೇಳಿದರು.

ಈ ಸರಕಾರ ಧರ್ಮ, ಜಾತಿಗಳ ನಡುವೆ ವಿಷಬೀಜ ಬಿತ್ತಿ, ಆ ಭಾಗದ ಜನರಲ್ಲಿ ಗೊಂದಲ ಸೃಷ್ಟಿಸಿದೆ. ವಿಭಿನ್ನ ಅಭಿಪ್ರಾಯ ಮೂಡುವಂತೆ ಬೀಜ ಬಿತ್ತಿರುವುದೆ ರಾಜ್ಯ ಬಿಜೆಪಿ ಸರಕಾರ. ರಾಜ್ಯದಲ್ಲಿರುವ ಮರಾಠ ಭಾಷಿಗರು ನಮ್ಮವರೇ. ಹೀಗಾಗಿ ಎಲ್ಲರೂ ಶಾಂತಿಯುತವಾಗಿ ಸೌಹಾರ್ದತೆಯಿಂದ ಇರಬೇಕು ಎಂದು ಶಿವಕುಮಾರ್ ಮನವಿ ಮಾಡಿದರು.

ರಾಜಭವನ ಚಲೋ: ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲವಾಗಿ, ರಾಜ್ಯದಲ್ಲಿ ಕೊರೋನ ಪರಿಹಾರ ಹಣ ನೀಡದಿರುವುದು ಹಾಗೂ ಬೆಲೆ ಏರಿಕೆ, ತೆರಿಗೆ ಏರಿಕೆಯಂತಹ ಸರಕಾರದ ಜನ ವಿರೋಧಿ ನೀತಿ ವಿರುದ್ಧ ಜನರ ಧ್ವನಿಯನ್ನು ಎತ್ತಲು ನಾಳೆ(ಜ.20) ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಶಿವಕುಮಾರ್ ಹೇಳಿದರು.

ನಾವು ರೈತರ ಪರವಾಗಿ ನಿಲ್ಲುತ್ತೇವೆ. ಕರಾಳ ಕಾಯ್ದೆ ಕಿತ್ತುಹಾಕಬೇಕು ಎಂಬುದು ರೈತರ ಬೇಡಿಕೆ. ಅವರ ಬೇಡಿಕೆ ಈಡೇರುವವರೆಗೆ ನಾವು ಅವರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ. ಈ ಹಿನ್ನೆಲೆಯಲ್ಲಿ ಅವರಿಗೆ ಧ್ವನಿಯಾಗಲು ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಶಿಸ್ತಿನ ಪ್ರತಿಭಟನೆ ಮಾಡಬೇಕಿದ್ದು, ಎಲ್ಲ ವಾಹನಗಳು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬಂದು, ಅಲ್ಲಿಂದ ಸ್ವಾತಂತ್ರ್ಯ ಉದ್ಯಾನವನಕ್ಕೆ ಬರಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ. ಈ ಸರಕಾರದಿಂದ ನೊಂದಿರುವ ರೈತರು, ಎಲ್ಲ ವರ್ಗದ ಜನ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

ಬ್ಲಾಕ್ ಮೇಲ್, ಸಿಡಿ ವಿಚಾರ: ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ಈ ವಿಚಾರದಲ್ಲಿ ಅವರು ಮಾಹಿತಿ ಇಟ್ಟುಕೊಂಡು ಮಾತನಾಡುತ್ತಿದ್ದಾರೆ. ನನಗೂ ಕೆಲವು ವಿಚಾರಗಳು ಗೊತ್ತಿವೆ. ಆ ಬಗ್ಗೆ ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ' ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X