Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಟ್ರ್ಯಾಕ್ಟರ್ ರ‍್ಯಾಲಿ...

ರೈತರ ಟ್ರ್ಯಾಕ್ಟರ್ ರ‍್ಯಾಲಿ ನಿಲ್ಲಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಿಲ್ಲಿ ಪೊಲೀಸರು ಈ ವಿಚಾರದ ಕುರಿತು ನಿರ್ಧರಿಸಲಿ ಎಂದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ20 Jan 2021 1:36 PM IST
share
ರೈತರ ಟ್ರ್ಯಾಕ್ಟರ್ ರ‍್ಯಾಲಿ ನಿಲ್ಲಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಗಣರಾಜ್ಯೋತ್ಸವ ದಿನದಂದು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಲು ಯೋಜಿಸಿರುವ ಟ್ರ್ಯಾಕ್ಟರ್ ರ್ಯಾಲಿ ಕುರಿತಂತೆ ಆದೇಶ ನೀಡುವುದಿಲ್ಲ. ಈ ವಿಚಾರಗಳ ಕುರಿತು ಪೊಲೀಸರೇ ನಿರ್ಧರಿಸಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದೆ.

3 ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತಂತೆ ಕೇಂದ್ರ ಸರಕಾರ ಹಾಗೂ ರೈತರ ನಡುವೆ ಈ ತನಕ ನಡೆದಿರುವ ಮಾತುಕತಗಳೆಲ್ಲವೂ ವಿಫಲವಾಗಿದ್ದು, ಸಾವಿರಾರು ರೈತರು ಜ.26ರಂದು ರಾಷ್ಟ್ರ ರಾಜಧಾನಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಉದ್ದೇಶಿಸಿದ್ದಾರೆ.

“ಯಾವುದೇ ರ್ಯಾಲಿ ಅಥವಾ ಮೆರವಣಿಗೆಯನ್ನು ಅನುಮತಿಸಲು ಅಥವಾ ಅನುಮತಿ ನೀಡದೇ ಇರುವುದು ಅನುಚಿತ ಎಂದು ನಾವು ನೋಡುತ್ತೇವೆ. ಇದು ಪೊಲೀಸರ ವಿಷಯವಾಗಿದೆ. ಪೊಲೀಸರು ಇದನ್ನು ನಿರ್ಧರಿಸುತ್ತಾರೆ. ನಾವು ಈ ಕುರಿತು ಆದೇಶ ನೀಡುವುದಿಲ್ಲ'' ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ತಿಳಿಸಿದೆ.

ಗಣರಾಜ್ಯೋತ್ಸವ ದಿನದಂದು ರೈತರು ನಡೆಸಲು  ಉದ್ದೇಶಿಸಿರುವ ರ್ಯಾಲಿಗೆ ತಡೆ ನೀಡಿ ಆದೇಶ ನೀಡುವಂತೆ ಕೇಂದ್ರ ಸರಕಾರವು ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿತ್ತು. ಮನವಿಯನ್ನು ಆಲಿಸಿದ ನ್ಯಾಯಾಲಯವು ಅರ್ಜಿಯನ್ನು ಹಿಂಪಡೆಯಲು ಕೇಂದ್ರಕ್ಕೆ ಅನುಮತಿ ನೀಡಿತು. ದಿಲ್ಲಿ ಪೊಲೀಸರಿಗೆ ಹೊಣೆಗಾರಿಕೆ ನೀಡಿತು.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಜನವರಿ 26ರಂದು ನಡೆಸಲು ಉದ್ದೇಶಿಸಿರುವ ಟ್ರಾಕ್ಟರ್ ರ್ಯಾಲಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರಕಾರ ಬುಧವಾರ ಹಿಂದೆ ತೆಗೆದುಕೊಂಡಿದೆ.

ಇದು ಕಾನೂನು ಹಾಗೂ ಸುವ್ಯವಸ್ಥೆಗೆ ಸಂಬಧಿಸಿದ ವಿಷಯ ಹಾಗೂ ಪ್ರಥಮ ಅಧಿಕಾರವಾಗಿ ಕಾರ್ಯ ನಿರ್ವಹಿಸುವುದು ಸೂಕ್ತವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ ದಿನಗಳ ಬಳಿಕ ಕೇಂದ್ರ ಸರಕಾರ ತನ್ನ ಮನವಿಯನ್ನು ಹಿಂಪಡೆದಿದೆ.

ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಸಂಭ್ರಮಕ್ಕೆ ಅಡ್ಡಿ ಉಂಟಾಗುವುದರಿಂದ ಪ್ರಸ್ತಾವಿತ ರೈತರ ಟ್ರಾಕ್ಟರ್ ರ್ಯಾಲಿ ಅಥವಾ ರೈತರ ಇತರ ಯಾವುದೇ ರೀತಿಯ ಪ್ರತಿಭಟನೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಕೇಂದ್ರ ಸರಕಾರ ದಿಲ್ಲಿ ಪೊಲೀಸರ ಮೂಲಕ ಸಲ್ಲಿಸಿದ್ದ ಮನವಿಯ ವಿಚಾರಣೆ ಸಂದರ್ಭ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ, ‘‘ಟ್ರಾಕ್ಟರ್ ರ್ಯಾಲಿಗೆ ಸಂಬಂಧಿಸಿ ನಾವು ಯಾವುದೇ ನಿರ್ದೇಶನ ನೀಡುವುದಿಲ್ಲ. ಇದು ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿಷಯ. ಅರ್ಜಿ ಹಿಂದೆ ತೆಗೆದುಕೊಳ್ಳಲು ಅವಕಾಶ ನೀಡುತ್ತೇವೆ ಹೇಳಿತ್ತು.

‘‘ನಿಮಗೆ ಅಧಿಕಾರ ಇದೆ. ನೀವು ಅದನ್ನು ನಿಭಾಯಿಸಬೇಕು. ನಿಮಗೆ ಆದೇಶ ನೀಡುವ ಅಧಿಕಾರ ಇದೆ. ನೀವು ಅದನ್ನು ಮಾಡಿ. ಇದು ನ್ಯಾಯಾಲಯ ಆದೇಶ ಜಾರಿಗೊಳಿಸುವುದಕ್ಕೆ ಸಂಬಂಧಿಸಿದ್ದಲ್ಲ’’ ಎಂದು ಅದು ತಿಳಿಸಿತ್ತು.

ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಹಾಗೂ ವಿ. ಬಾಲಸುಬ್ರಹ್ಮಣೀಯನ್ ಅವರನ್ನು ಕೂಡ ಒಳಗೊಂಡ ನ್ಯಾಯಪೀಠ ಸೋಮವಾರ, ದಿಲ್ಲಿಯನ್ನು ಯಾರು ಪ್ರವೇಶಿಸಬೇಕು ಎಂಬುದನ್ನು ನಿರ್ಧರಿಸಲು ಪೊಲೀಸರು ಪ್ರಥಮ ಪ್ರಾಧಿಕಾರ ಎಂದು ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X