Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಹತ್ಯೆ ನಿಷೇಧ ಕಾಯ್ದೆಗೆ ನಿಯಮ...

ಗೋಹತ್ಯೆ ನಿಷೇಧ ಕಾಯ್ದೆಗೆ ನಿಯಮ ರೂಪಿಸುವವರೆಗೆ ಕಠಿಣ ಕ್ರಮವಿಲ್ಲ: ಹೈಕೋರ್ಟ್ ಗೆ ಸರಕಾರದ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ20 Jan 2021 9:28 PM IST
share
ಗೋಹತ್ಯೆ ನಿಷೇಧ ಕಾಯ್ದೆಗೆ ನಿಯಮ ರೂಪಿಸುವವರೆಗೆ ಕಠಿಣ ಕ್ರಮವಿಲ್ಲ: ಹೈಕೋರ್ಟ್ ಗೆ ಸರಕಾರದ ಸ್ಪಷ್ಟನೆ

ಬೆಂಗಳೂರು, ಜ.18: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ, ಸಂರಕ್ಷಣಾ ವಿಧೇಯಕ-2020ರ ಸುಗ್ರೀವಾಜ್ಞೆಗೆ ನಿಯಮಗಳನ್ನು ರೂಪಿಸುವವರೆಗೆ ಸೆಕ್ಷನ್ 5ರ ಅಡಿಯಲ್ಲಿ ಯಾವುದೇ ಕಠಿಣ ಕ್ರಮ ಜರುಗಿಸುವುದಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್ ಗೆ ಸ್ಪಷ್ಟನೆ ನೀಡಿದೆ.

ನಗರದ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್ ಸುಗ್ರೀವಾಜ್ಞೆಯನ್ನು ಅಸಂವಿಧಾನಿಕವೆಂದು ಘೋಷಿಸಿ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ಸರಕಾರದ ಪರ ವಕೀಲರನ್ನು ಪ್ರಶ್ನಿಸಿದ ಪೀಠ, ಸೆಕ್ಷನ್ 5ರ ಪ್ರಕಾರ ಜಾನುವಾರುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುವುದಕ್ಕೆ ನಿರ್ಬಂಧಗಳಿವೆ. ಇದು ರೈತರು ತಮ್ಮ ಜಾನುವಾರುಗಳನ್ನು ಕೃಷಿ ಕೆಲಸಗಳಿಗೆ, ಹೈನುಗಾರಿಕೆಗೆ ಸಾಗಿಸುವುದಕ್ಕೂ ಅಡ್ಡಿಯಾಗಿದೆ ಎಂದಿತು. ಇದಕ್ಕೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಅವರು, ಕಾಯ್ದೆಗೆ ನಿಯಮಗಳನ್ನು ರೂಪಿಸುವವರೆಗೆ ಸೆಕ್ಷನ್ 5ರ ಅಡಿಯಲ್ಲಿ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಹಾಗಿದ್ದರೆ ಈ ಹಂತದಲ್ಲಿ ಸುಗ್ರೀವಾಜ್ಞೆಗೆ ತಡೆ ಕೋರಿರುವ ಮಧ್ಯಂತರ ಮನವಿ ಪರಿಗಣಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು. ಹಾಗೆಯೇ, ಅರ್ಜಿಗೆ ಆಕ್ಷೇಪಣೆಯನ್ನು ಫೆ.20ರೊಳಗೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಫೆ.26ಕ್ಕೆ ಮುಂದೂಡಿತು.

ಕಳೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ್ದ ವಕೀಲ ರೆಹಮತ್ ಉಲ್ಲಾ ಕೊತ್ವಾಲ್ ಅವರು, ಸುಗ್ರೀವಾಜ್ಞೆಯಲ್ಲಿರುವ ಸೆಕ್ಷನ್ 5ರ ಪ್ರಕಾರ ಜಾನುವಾರುಗಳನ್ನು ಸಾಗಿಸುವುದು ಕಷ್ಟದ ಕೆಲಸ. ಪ್ರತಿ ಬಾರಿ ರೈತರು ಜಿಲ್ಲಾ ಪಶುವೈದ್ಯಾಧಿಕಾರಿ ಬಳಿ ಹೋಗಿ ನಿಯಮಗಳನ್ನು ಪಾಲಿಸಲು ಅನುಮತಿ ಕೇಳುವುದು ಸರಿ ಕಾಣುವುದಿಲ್ಲ. ಹೀಗಾಗಿ ನಿಯಮಗಳಿಗೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದ್ದರು.

ಅರ್ಜಿದಾರರ ಮನವಿ ಏನು: ರಾಜ್ಯದಲ್ಲಿ ಎಲ್ಲ ವಯಸ್ಸಿನ ಆಕಳು, ಕರು, ಗೂಳಿ, ಎತ್ತು ಹಾಗೂ 13 ವರ್ಷದೊಳಗಿನ ಕೋಣ ಅಥವಾ ಎಮ್ಮೆಗಳ ಹತ್ಯೆಯನ್ನು ನಿಷೇಧಿಸಲು ಸರಕಾರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ರೂಪಿಸಿದೆ. ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ದೊರೆತಿದೆ. ಆದರೆ, ವಿಧಾನ ಪರಿಷತ್ತಿನಲ್ಲಿ ಅನುಮೋದನೆ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ನಿಯಮ ಜಾರಿ ಮಾಡಲು ರಾಜ್ಯಪಾಲರ ಒಪ್ಪಿಗೆ ಕೋರಿತ್ತು.

ರಾಜ್ಯಪಾಲರು ಒಪ್ಪಿಗೆ ನೀಡಿದ್ದರಿಂದ ಸರಕಾರ ಮಂಗಳವಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, 1964ರಿಂದ ಕರ್ನಾಟಕದಲ್ಲಿ ಜಾನುವಾರು ಸಂರಕ್ಷಣೆ ಮತ್ತು ಗೋಹತ್ಯೆ ತಡೆ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ, ಜಾರುವಾರು ರಕ್ಷಣೆ ಹೆಸರಿನಲ್ಲಿ ಸುಗ್ರೀವಾಜ್ಞೆ ಅಗತ್ಯವೇನಿಲ್ಲ. ಬಿಹಾರ ಮತ್ತು ಗುಜರಾತ್ ರಾಜ್ಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ, 15 ವರ್ಷ ಮೀರಿದ ಹಸು ಮತ್ತು ಎತ್ತುಗಳನ್ನು ವ್ಯವಸಾಯ, ಹೈನುಗಾರಿಕೆ ಉಪಯೋಗಕ್ಕೆ ಬರುವುದಿಲ್ಲ. ಅಂತಹ ಹಸು ಹಾಗೂ ಎತ್ತುಗಳನ್ನು ಕಸಾಯಿ ಖಾನೆಗೆ ರೈತರು ಮಾರಾಟ ಮಾಡಬಹುದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X