Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿಯು ಸೇವೆಗಳು ಸಕಾಲ ವ್ಯಾಪ್ತಿಗೆ: ಸಚಿವ...

ಪಿಯು ಸೇವೆಗಳು ಸಕಾಲ ವ್ಯಾಪ್ತಿಗೆ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ21 Jan 2021 9:38 PM IST
share
ಪಿಯು ಸೇವೆಗಳು ಸಕಾಲ ವ್ಯಾಪ್ತಿಗೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜ.21: ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಆಡಳಿತ ಚುರುಕುಗೊಳಿಸಲು ಉಪನ್ಯಾಸಕರ ಸೇವಾ ವಿಷಯಗಳನ್ನು ಸಕಾಲ ಯೋಜನೆ ವ್ಯಾಪ್ತಿಗೆ ತರಲು ಆಲೋಚಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಂಘದ ಪದಾಧಿಕಾರಿಗಳೊಂದಿಗೆ ಗುರುವಾರ ಸಮಗ್ರ ಶಿಕ್ಷಣ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಪಿಯು ಇಲಾಖೆಯಲ್ಲಿ ಸೇವಾ ವಿಷಯದಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಸಂಘಟನೆಗಳು ಸಚಿವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಇಲಾಖೆಯ ಸೇವೆಗಳು ಕ್ಷಿಪ್ರಗತಿಯಲ್ಲಿ ದೊರೆಯುವಂತಾಗಲು ಇಲಾಖೆಯ ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲಾಗುತ್ತಿದೆ ಎಂದರು.

ಪಿಯು ಉಪನ್ಯಾಸಕರ ವಿವಿಧ ಬೇಡಿಕೆಗಳ ಕುರಿತು ಮಾತನಾಡಿದ ಅವರು, ಪದವಿ ಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣೆಗೆ ಈಗಾಗಲೆ ಇರುವ ಕಾಯ್ದೆಯಡಿ ನಿಯಮ ರೂಪಿಸುವ ಕೆಲಸ ಪ್ರಗತಿಯಲ್ಲಿದ್ದು, ನಿಯಮಗಳನ್ನು ರೂಪಿಸಿದ ನಂತರ ವರ್ಗಾವಣೆ ಕೈಗೆತ್ತಿಕೊಳ್ಳಲಾಗುವುದು ಎಂದರು.

ಸೇವಾ ವಿಷಯಗಳಲ್ಲಿನ ವಿಳಂಬ ನಿರ್ವಹಣೆಗೆ ಕಡತ ವಿಲೇವಾರಿಗೆ ಇ-ಕಚೇರಿ ಬಳಕೆ ಮತ್ತು ಅಧಿಕಾರ ವಿಕೇಂದ್ರೀಕರಣ ಮಾಡಿ ವಿಳಂಬವಿಲ್ಲದೆ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಬಾಕಿ ಇರುವ ಕಡತಗಳನ್ನು ಶೀಘ್ರದಲ್ಲೆ ವಿಲೇವಾರಿ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪಿಯು ನಿರ್ದೇಶಕರಿಗೆ ಅವರು ಸೂಚಿಸಿದರು.

ಮುಕ್ತ ವಿವಿ ಕುಲಪತಿಗಳೊಂದಿಗೆ ಚರ್ಚೆ: 2007 ರಿಂದೀಚೆಗೆ ಪದವಿ ಪೂರ್ವ ಉಪನ್ಯಾಸಕರ ಹುದ್ದೆಗೆ ಬಿ.ಇಡಿ. ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಹಾಲಿ ಸೇವೆಯಲ್ಲಿರುವ ಉಪನ್ಯಾಸಕರು ಬಿ.ಇಡಿ. ಪಡೆಯಬೇಕಿದ್ದು, ಅದರಲ್ಲಿ 2357 ಮಂದಿ ಅನುದಾನಿತ ಕಾಲೇಜುಗಳ ಉಪನ್ಯಾಸಕರು ಬಿ.ಇಡಿ. ಪಡೆಯುವುದು ಬಾಕಿಯಿದೆ ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಈ ಎಲ್ಲ ಉಪನ್ಯಾಸಕರು ಏಕ ಕಾಲದಲ್ಲಿ ಬಿ.ಇಡಿ. ಪಡೆಯಲು ಅನುವಾಗುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಒಂದು ಬಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿಗಳೊಂದಿಗೆ ಚರ್ಚಿಸಿದ್ದೇನೆ ಮತ್ತು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಆಶ್ವತ್ಥ ನಾರಾಯಣ್ ಅವರೊಂದಿಗೆ ಈ ಸಂಬಂಧದಲ್ಲಿ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.

ಕುಮಾರನಾಯ್ಕ ಸಮಿತಿ ಶಿಫಾರಸ್ಸಿನಂತೆ ಉನ್ನತ ಪದವಿ ಹೊಂದಿದ ಉಪನ್ಯಾಸಕರಿಗೆ ಭಡ್ತಿ ಸೇರಿದಂತೆ ವೇತನ ಭಡ್ತಿ ನೀಡಿಕೆ ಕುರಿತು ನಿರ್ಧಾರ ಕೈಗೊಳ್ಳಲು ಅಧಿಕಾರಿಗಳಿಗೆ ಕಡತ ಮಂಡಿಸುವಂತೆ ಸೂಚನೆ ನೀಡಿದ ಸುರೇಶ್ ಕುಮಾರ್, ಪದವಿ ಕಾಲೇಜುಗಳಿಗೆ ಭಡ್ತಿ ನೀಡುವ ಕುರಿತಂತೆ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಜ್ಯೋತಿ ಸಂಜೀವಿನಿ ಯೋಜನೆ ಜಾರಿಗೊಳಿಸಲು ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಾಗುವುದು. ಈ ಕುರಿತಂತೆ ಒಂದು ವಿವರವಾದ ಪ್ರಸ್ತಾವನೆ ಸಲ್ಲಿಸಬೇಕೆಂದು ಪಿಯು ನಿರ್ದೇಶಕರಿಗೆ ಸುರೇಶ್ ಕುಮಾರ್ ಸೂಚನೆ ನೀಡಿದರು.

ಬಿ.ಇಡಿ. ವಿನಾಯಿತಿ: ವೃತ್ತಿಶಿಕ್ಷಣ ಇಲಾಖೆಯಿಂದ ವಿಲೀನವಾಗಿರುವ ಪಿಯು ಉಪನ್ಯಾಸಕರು ಈಗಾಗಲೇ ನಿವೃತ್ತಿಗೆ ಸಮೀಪದಲ್ಲಿರುವುದು ಮತ್ತು ಅವರ ಅತಿ ಕಡಿಮೆ ಸಂಖ್ಯೆಯಲ್ಲಿರುವುದರಿಂದ ಅವರಿಗೆ ಬಿ.ಇಡಿ. ಪದವಿ ಪಡೆಯುವುದರಿಂದ ವಿನಾಯಿತಿ ನೀಡಲು ಮತ್ತು ಖಾಯಂ ಪೂರ್ವ ಸೇವಾ ಅವಧಿ ಘೋಷಣೆ ಮಾಡಲು ಇಲಾಖೆಯಲ್ಲಿ ಅನುಕೂಲಕರವಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ಕೇವಲ 7 ವರ್ಷಕ್ಕಿಂತ ಕಡಿಮೆ ಸೇವೆ ಇರುವ ಜೆಒಸಿ ವಿಲೀನ ಉಪನ್ಯಾಸಕರಿಗೆ ಬಿ.ಇಡಿ. ವಿನಾಯಿತಿ ನೀಡಲು ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಾಚಾರ್ಯರ ನೇರ ನೇಮಕ, ಉಪನ್ಯಾಸಕರಿಂದ ಪ್ರಾಚಾರ್ಯರ ಸ್ಥಾನಕ್ಕೆ ಮತ್ತು ಪ್ರಾಚಾರ್ಯರಿಂದ ಉಪನಿರ್ದೇಶಕರ ಸ್ಥಾನಕ್ಕೆ ಭಡ್ತಿ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಬೇಡಿಕೆಗಳನ್ನು ಸಂಘಟನೆಯ ಪದಾಧಿಕಾರಿಗಳು ಗಮನಕ್ಕೆ ತಂದಿದ್ದು, ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಕ್ರಮ ವಹಿಸಬೇಕೆಂದು ಇಲಾಖೆಯ ನಿರ್ದೇಶಕರಿಗೆ ಸುರೇಶ್ ಕುಮಾರ್ ನಿರ್ದೇಶನ ನೀಡಿದರು.

ಮೌಲ್ಯಮಾಪನ ಸಹಕಾರಕ್ಕೆ ಮನವಿ: ಕೋವಿಡ್ ಸಾಂಕ್ರಾಮಿಕ ರೋಗದ ಪ್ರಸರಣದ ಹಿನ್ನೆಲೆಯಲ್ಲಿ ಈಗಾಗಲೇ ಪದವಿ ಪೂರ್ವ ಕಾಲೇಜುಗಳು ತಡವಾಗಿ ಆರಂಭವಾಗಿರುವುದರಿಂದ ಮಕ್ಕಳು ಪರೀಕ್ಷೆಯತ್ತ ಮುಖ ಮಾಡಿದ್ದು ಅಧ್ಯಯನದಲ್ಲಿ ತೊಡಗಿದ್ದಾರೆ. ನಿಗದಿತ ಅವಧಿಯಲ್ಲಿ ಪರೀಕ್ಷೆ ಆರಂಭವಾಗಲಿದ್ದು, ಈ ವಿಷಮ ಕಾಲಘಟ್ಟದಲ್ಲಿ ಉಪನ್ಯಾಸಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವಿಷಯದಲ್ಲಿ ಹೆಚ್ಚಿನ ಸಹಕಾರ ನೀಡಬೇಕು. ಇಂತಹ ಕಾಲಘಟ್ಟದಲ್ಲಿ ನಾವು ನಮ್ಮ ಮಕ್ಕಳಲ್ಲಿ ವಿಶ್ವಾಸ ಮೂಡಿಸಬೇಕಾಗಿರುವುದರಿಂದ ಮೌಲ್ಯಮಾಪನ ಬಹಿಷ್ಕಾರ ಸೇರಿದಂತೆ ಯಾವುದೇ ಪ್ರತಿಭಟನೆಗಳಿಗೆ ಮುಂದಾಗಬಾರದೆಂದೂ ಸುರೇಶ್ ಕುಮಾರ್ ಮನವಿ ಮಾಡಿದರು.

ಸಭೆಯಲ್ಲಿ ಪಿಯು ನಿರ್ದೇಶಕಿ ಸ್ನೇಹಲ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ, ಸಂಘಟನೆಯ ಎಸ್.ಆರ್. ವೆಂಕಟೇಶ್, ಶಿವರಾವ ಮಾಲೀಪಾಟೀಲ್, ಕೋಶಾಧ್ಯಕ್ಷರು ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X