Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಧ್ವಜವಿರೋಧಿ ಹೋರಾಟವನ್ನು ಸರಕಾರ...

ಕನ್ನಡ ಧ್ವಜವಿರೋಧಿ ಹೋರಾಟವನ್ನು ಸರಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ21 Jan 2021 9:52 PM IST
share
ಕನ್ನಡ ಧ್ವಜವಿರೋಧಿ ಹೋರಾಟವನ್ನು ಸರಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು: ಕುಮಾರಸ್ವಾಮಿ

ಬೆಂಗಳೂರು, ಜ. 21: ‘ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಅಲ್ಲಿನ ಸಿಎಂ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಬೆಳಗಾವಿಯಲ್ಲಿ ಕನ್ನಡ ಧ್ವಜ ವಿರೋಧಿಸಿ ಎಂಇಎಸ್, ಶಿವಸೇನೆ ನಡೆಸುವ ಪ್ರತಿಭಟನೆಯನ್ನು ಸಮಾಜವಿದ್ರೋಹಿ, ದೇಶದ್ರೋಹಿ, ಘಾತಕ ಕೃತ್ಯವೆಂದು ಹೇಳಲು ಅಡ್ಡಿಯಿಲ್ಲ. ದೇಶದ ಸಾಮರಸ್ಯಕ್ಕೆ, ಭಾಷಾ ಸೌಹಾರ್ದತೆಗೆ ಈ ಹೋರಾಟ ವಿಷ ಹಿಂಡಲಿದೆ ಎಂಬುದರಲ್ಲಿ ಎರಡು ಮಾತೂ ಇಲ್ಲ. ಇದರ ಹಿಂದೆ ಮಹಾರಾಷ್ಟ್ರ ಇದೆ ಎಂಬುದಕ್ಕೆ ಸಾಕ್ಷಿಯೂ ಬೇಕಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಈ ಧ್ವಜ ವಿರೋಧಿ ಹೋರಾಟವನ್ನು ರಾಜ್ಯದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ವಿರೋಧಿಸಬೇಕಾಗಿದೆ. ಕನ್ನಡದ ವಿಚಾರಕ್ಕೆ ಮಾತಾಡಲು, ಕನ್ನಡಕ್ಕೆ ಕೈ ಎತ್ತಲು ರಾಜ್ಯದ ನಾಯಕರು ರಾಜಕೀಯ ಮರೆಯಬೇಕು. ಪಕ್ಷ ನೋಡಬಾರದು, ಮಿತ್ರಪಕ್ಷವೆಂದು ಎಣಿಸಬಾರದು, ದೆಹಲಿ ಕಡೆಗೆ ನೋಡಬಾರದು. ಆಗ ಮಾತ್ರ ಇಂಥ ಆಕ್ರಮಣಕಾರಿ ಪ್ರವೃತ್ತಿಗಳನ್ನು ನಾವು ಹತ್ತಿಕ್ಕಲು ಸಾಧ್ಯ' ಎಂದು ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.

‘ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗಾಗಿ ಎಂಇಎಸ್, ಶಿವಸೇನೆ ಇಷ್ಟು ಕುತಂತ್ರ ಮಾಡುತ್ತಿದ್ದರೂ, ಬಿಜೆಪಿ ಸರಕಾರದ ಯಾವೊಬ್ಬ ಪ್ರತಿನಿಧಿಯಾಗಲಿ, ಕಾಂಗ್ರೆಸ್‍ನ ಯಾವ ನಾಯಕರಾಗಲಿ ಪ್ರತಿಕ್ರಿಯಿಸಿದ್ದನ್ನು ನಾನು ನೋಡಲಿಲ್ಲ. ಇದೇ ಸಲುಗೆಯಲ್ಲೇ ಉದ್ಧವ ಠಾಕ್ರೆ ಬೆಳಗಾವಿಯಂಥ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮಾತಾಡಿದ್ದು' ಎಂದು ಹೇಳಿಕೆ ನೀಡಿದ್ದಾರೆಂದು ಟೀಕಿಸಿದ್ದಾರೆ.

‘ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ' ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X